ಮಡಿಕೇರಿ, ಮೇ ೩೦: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ.
ಸಿಪೆಟ್ ೨೦೨೪-೨೫ನೇ ಸಾಲಿನ ಉದ್ಯೋಗಾದಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್‌ಲೈನ್-ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ), ಡಿಪ್ಲೋಮಾ ಇನ್‌ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಂಟಿ)-೩ ವರ್ಷದ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥ ಆರ್.ಟಿ. ನಾಗರಳ್ಳಿ ಅವರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ (ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು-ಹಾಜರಾದವರು ಆನ್‌ಲೈನ್-ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್ ತಿತಿತಿ.ಛಿiಠಿeಣ.gov.iಟಿ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ. ೦೮೨೧-೨೫೧೦೬೧೮, ೯೪೮೦೨೫೩೦೨೪, ೯೭೯೧೪೩೧೮೨೭, ೯೪೬೬೫೮೫೬೬೯ ನ್ನು ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ಮತ್ತು ಮುಖ್ಯಸ್ಥರು (೯೪೬೬೧೪೬೦೦೧) ತಿಳಿಸಿದ್ದಾರೆ.