ಅಕ್ರಮ ಹಣ ವರ್ಗಾವಣೆ : ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು, ಮೇ ೩೧: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ನಿಯಮಿತದ ಸುಮಾರು ೯೪.೭೩ ಕೋಟಿ ರೂಪಾಯಿಯನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆರೋಪದ ಮೇಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿಗಮದ ಆಧೀಕ್ಷಕರಾಗಿದ್ದ ಚಂದ್ರಶೇಖರನ್ ಭಾನುವಾರ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ, ಅವರು ಡೆತ್‌ನೋಟ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ್, ಅಕೌಂಟ್ಸ್ ಅಧಿಕಾರಿ ಪರಶುರಾಮ್ ಜಿ. ದುರುಗಣ್ಣನವರ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್ ಅವರ ಹೆಸರನ್ನು ಬರೆದಿದ್ದಾರೆ. ಎಂ.ಜಿ. ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಉನ್ನತ ಆಡಳಿತ ಮತ್ತತರ ಮೂರನೇ ವ್ಯಕ್ತಿಗಳ ಮೋಸದ ಚಟುವಟಿಕೆಗಳಿಂದ ಸಂಸ್ಥೆಯ ಪ್ರತಿಷ್ಠೆಗೆ ಹಾನಿಯಾಗಿದೆ ಎಂದು ನಿಗಮದ ಜನರಲ್ ಮ್ಯಾನೇಜರ್ ಎ. ರಾಜಶೇಖರ್ ಮೇ ೨೮ ರಂದು ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಫೆಬ್ರವರಿ ೧೯ ರಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವು ತನ್ನ ಖಾತೆಯನ್ನು ವಸಂತನಗರ ಶಾಖೆಯಿಂದ ಎಂ.ಜಿ. ರಸ್ತೆಯ ರಾಷ್ಟ್ರೀಯ ಬ್ಯಾಂಕ್ ಶಾಖೆಗೆ ವರ್ಗಾಯಿಸಿರುವುದಾಗಿ ಅವರು ಹೇಳಿದ್ದಾರೆ. ವಿವಿಧ ಬ್ಯಾಂಕ್‌ಗಳು ಮತ್ತು ರಾಜ್ಯ ಹುಜುರ್ ಖಜಾನೆ-IIರಿಂದ ಎಂಜಿ ರಸ್ತೆ ಶಾಖೆಯ ನಮ್ಮ ಬ್ಯಾಂಕ್ ಖಾತೆಗೆ ಒಟ್ಟು ರೂ. ೧೮೭.೩೩ ಕೋಟಿ ವರ್ಗಾವಣೆಯಾಗಿದ್ದಾಗಿ ಅವರು ತಿಳಿಸಿದ್ದಾರೆ.

ಪಾಸ್‌ಪೋರ್ಟ್ ರದ್ದತಿ : ಪ್ರತಿಕ್ರಿಯೆಗೆ ಗಡುವು

ನವದೆಹಲಿ, ಮೇ ೩೧: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಅಮಾನತುಗೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯ ನೀಡಿರುವ ಶೋಕಾಸ್ ನೋಟೀಸ್‌ಗೆ ಪ್ರತಿಕ್ರಿಯೆ ನೀಡಲು ಜೂನ್ ೨ ರವರೆಗೆ ಸಮಯಾವಕಾಶವಿದೆ. ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಮರಳುತ್ತಿರುವಂತೆಯೇ ವಿದೇಶಾಂಗ ಸಚಿವಾಲಯ ಈ ವಿಷಯ ತಿಳಿಸಿದೆ. ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್‌ಪೋರ್ಟ್ನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಿ ಮೇ ೨೩ ರಂದು ಪ್ರಜ್ವಲ್ ರೇವಣ್ಣ ಅವರಿಗೆ ಎಂಇಎ ನೋಟೀಸ್ ನೀಡಿದೆ. ಮೇ ೨೧ ರಂದು ಕರ್ನಾಟಕ ಸರ್ಕಾರದಿಂದ ಮನವಿ ಸ್ವೀಕರಿಸಲಾಗಿದ್ದು, ಭಾರತೀಯ ಪಾಸ್‌ಪೋರ್ಟ್ ಕಾಯ್ದೆ ಪ್ರಕಾರ, ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಕ್ರಮವನ್ನು ಪ್ರಾರಂಭಿಸಿದ್ದೇವೆ. ಮೇ ೨೩ ರಂದೇ ಅವರಿಗೆ ಶೋಕಾಸ್ ನೋಟೀಸ್ ನೀಡಿದ್ದು, ೧೦ ದಿನಗಳೊಳಗೆ ಅವರು ಪ್ರತಿಕ್ರಿಯೆ ನೀಡಬೇಕು. ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಗಡುವು ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮಹಿಳೆ ಪೊಲೀಸ್ ವಶಕ್ಕೆ!

ಮಂಗಳೂರು, ಮೇ ೩೧: ಮಂಗಳೂರು ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಗುರುವಾರ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಭದ್ರತಾ ಸಿಬ್ಬಂದಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ. ಸುಮಾರು ೨೩ ವರ್ಷದ ಮಹಿಳೆಯನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಡೆದು ಸುರಕ್ಷಿತವಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಜ್ಪೆ ಪೊಲೀಸರ ಪ್ರಕಾರ, ಬೆಳಿಗ್ಗೆ ಬೆಂಗಳೂರಿನಿAದ ರಸ್ತೆ ಮಾರ್ಗವಾಗಿ ಬಂದಿದ್ದ ಮಹಿಳೆ ಬಳಿಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಆಕೆ ತನ್ನ ಮೂಲಸ್ಥಾನವನ್ನು ದಾವಣಗೆರೆ ಎಂದೂ ಹೇಳಿಕೊಂಡಿದ್ದಳು. ನಾಲ್ಕು ದಿನಗಳ ಹಿಂದೆ ದಾವಣಗೆರೆಯಲ್ಲಿ ಆಕೆಯ ಸಂಬAಧಿಕರು ನಾಪತ್ತೆ ದೂರು ದಾಖಲಿಸಿದ್ದರು. ಇದೀಗ ಆಕೆ ಮಂಗಳೂರಿನಲ್ಲಿ ಸಿಕ್ಕಿದ್ದಾರೆ ಎಂದು ಹೇಳಿದ್ದಾರೆ. ಪೊಲೀಸರು ಆಕೆಯನ್ನು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು, ಆಕೆಯ ಸುರಕ್ಷತೆಯ ಬಗ್ಗೆ ಸಂಬAಧಿಕರಿಗೆ ತಿಳಿಸಲಾಗಿದೆ. ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಶಂಕಿಸಲಾಗಿದ್ದು, ಪೋಷಕರು ಆಗಮಿಸುತ್ತಿದ್ದಂತೆಯೇ ಅವರಿಗೆ ಒಪ್ಪಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿಕ್ವಿಡ್ ನೈಟ್ರೋಜನ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಮೇ ೩೦: ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ ೭ ವರ್ಷ ಜೀವಾವಧಿ ಶಿಕ್ಷೆ, ೧೦ ಲಕ್ಷ ದಂಡ ವಿಧಿಸಲಾಗುತ್ತದೆ. ಹೊಟೇಲ್, ರೆಸ್ಟೋರೆಂಟ್‌ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಕುರಿತು ಮೇ ೩ ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ ೭ ವರ್ಷ ಜೀವಾವಧಿ ಶಿಕ್ಷೆ ಹಾಗೂ ೧೦ ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು ೧೨ ವರ್ಷದ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು, ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೊಟೇಲ್ ಅಸೋಸಿಯೇಷನ್ ಮುಂದಾಗಿತ್ತು. ಜೊತೆಗೆ ಎಲ್ಲಾ ಹೊಟೇಲ್ ಹಾಗೂ ಪಾನ್ ಬೀಡಾ ಅಂಗಡಿಗಳಿಗೂ ಹೊಟೇಲ್ ಅಸೋಸಿಯೇಷನ್ ಆದೇಶ ನೀಡಿದೆ. ಈ ಆದೇಶ ಮೀರಿಯೂ ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೊಟೇಲ್ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ.