ಬೆಂಗಳೂರು, ಮೇ ೩೧: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ನಿಂದ ಅಮಾನತು ಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತಾ. ೬ ರವರೆಗೆ ಎಸ್ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ ೪೨ನೇ ಎಸಿಎಂಎA ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.
ನಡು ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ (ಎಸ್ಐಟಿ) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಿತು. ಹೆಚ್ಚಿನ ವಿಚಾರಣೆಗೆ ೧೫ ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ಐಟಿ ಕೇಳಿತ್ತು. ವಾದ-ವಿವಾದ ಆಲಿಸಿದ ನ್ಯಾಯಾಲಯ ೧ ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.
ಲೋಕಸಭೆ ಚುನಾವಣೆ ಮುಗಿಸಿ ಏಪ್ರಿಲ್ ೨೭ರಂದು ಜರ್ಮನಿಗೆ ತೆರಳಿದ್ದ ಪ್ರಜ್ವಲ್ ರೇವಣ್ಣ ಯಾರ ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದರು. ಈ ವಿಚಾರ ದೇಶದಲ್ಲಿ ಕೋಲಾಹಲ ಎಬ್ಬಿಸಿತ್ತು. ಕೆಲ ದಿನಗಳ ಹಿಂದೆ ವೀಡಿಯೋ ಸಂದೇಶವನ್ನು ಹರಿಬಿಟ್ಟು ತಾ. ೩೧ ರಂದು
ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿಗೆ
(ಮೊದಲ ಪುಟದಿಂದ) ಎಸ್ಐಟಿ ವಿಚಾರಣೆಗೆ ಹಾಜರಾಗುವೆ ಎಂದು ಪ್ರಜ್ವಲ್ ಹೇಳಿದ್ದರು. ನಡುರಾತ್ರಿ ಮ್ಯೂನಿಚ್ನಿಂದ ವಾಪಸ್ಸಾದ ಕೂಡಲೇ ವಿಮಾನ ನಿಲ್ದಾಣದಲ್ಲಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ದರು. ನಂತರ ಹೆಚ್ಚಿನ ವಿಚಾರಣೆಗೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಸ್ಐಟಿ ಪರ ನ್ಯಾಯವಾದಿಗಳು ಮತ್ತು ಪ್ರಜ್ವಲ್ ಪರ ವಕೀಲ ಅರುಣ್ ಮಂಡಿಸಿದ ವಾದ-ವಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗಾಗಿ ತಾ. ೬ರವರೆಗೆ ಎಸ್ಐಟಿ ಕಸ್ಟಡಿಗೊಪ್ಪಿಸಿ ಆದೇಶ ಹೊರಡಿಸಿದರು.