ಮಡಿಕೇರಿ, ಮೇ ೩೧: ಪ್ರಸಕ್ತ ೨೦೨೪-೨೫ ನೇ ಸಾಲಿನಲ್ಲಿ ಸೋಮವಾರಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತç, ಶೂ, ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್ (ಸೋಪು, ಎಣ್ಣೆ, ಬ್ರಶ್, ಪೇಸ್ಟ್, ಪೌಡರ್), ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕುಶಾಲನಗರ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (೯೪೮೩೧೧೬೫೦೪), ಸೋಮವಾರಪೇಟೆ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (೯೭೪೧೭೪೭೬೬೧), ಹೆಬ್ಬಾಲೆ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (೭೩೪೮೮೪೦೦೭೦), ಕೊಡ್ಲಿಪೇಟೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (೭೩೪೮೮೪೦೦೭೦), ಕುಶಾಲನಗರ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (೯೭೪೦೧೩೨೩೫೬), ಸೋಮವಾರಪೇಟೆ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (೮೮೬೧೪೮೬೮೭೧), ಶನಿವಾರಸಂತೆ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (೯೩೫೩೦೦೫೪೮೫), ಕುಶಾಲನಗರ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ (೯೪೮೩೧೧೬೫೦೪) ಹಾಗೂ ಕುಶಾಲನಗರ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ (೯೮೪೫೨೧೯೫೧೨) ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.