ಮುಳ್ಳೂರು, ಮೇ ೩೦: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಯೋಜನಾ ಘಟಕ ಮತ್ತು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಸಮಸ್ಯೆ ಕುರಿತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಕುರಿತು ಕೊಡ್ಲಿಪೇಟೆ ಆಯುಷ್ಮಾನ್ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಬಿ.ಎಸ್. ಅನಿತಾ ಮಾತನಾಡಿ, ಹವಾಮಾನ ಬದಲಾವಣೆ ಸಂದರ್ಭ ಮಾನವನಿಗೆ ಕಾಯಿಲೆಗಳು ಕಾಣಿಸಿ ಕೊಳ್ಳುತ್ತವೆ. ಹವಾಮಾನ ವ್ಯತ್ಯಾಸ ದಿಂದ ಆರೋಗ್ಯ ಸಮಸ್ಯೆಯಾಗುತ್ತದೆ.
ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಆರೋಗ್ಯದತ್ತ ನಿಗಾವಹಿಸ ಬೇಕೆಂದ ಅವರು, ಹವಾಮಾನ ಬದಲಾವಣೆ ಸಮಯದಲ್ಲಿ ಆರೋಗ್ಯ ಸಮಸ್ಯೆಯ ಲಕ್ಷಣಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್, ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.