ಕೂಡಿಗೆ, ಜೂ. ೧: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮುದಾಯ ವೈದ್ಯಶಾಸ್ತç ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಆರೋಗ್ಯ ಕಚೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನ ಆಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ ನೆರವೇರಿಸಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಸೇವನೆ ಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಡಾ. ಮಹೇಶ್ ಮಾತನಾಡಿ, ಧೂಮಪಾನ ಮಾಡು ವವರಿಗಿಂತ ಅದರ ಹೊಗೆಯನ್ನು ಸೇವಿಸುವವರಿಗೆ ಉಂಟಾಗುವ ಶ್ವಾಸಕೋಶದ ಸಮಸ್ಯೆ, ಉಸಿರಾಟದ ತೊಂದರೆ, ಕ್ಯಾನ್ಸರ್ ಅಂತಹ ಮಾರಕ ಕಾಯಿಲೆಗೆ ತುತ್ತಾಗುವ ಬಗ್ಗೆ ಅರಿವು ಮೂಡಿಸಿದರು. ವೇದಿಕೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಇಂದೂದರ್, ಡಾ. ದಿವ್ಯ, ಡಾ. ಕೃತಿಕಾ, ಡಾ. ರಾಜಶ್ರೀ, ಡಾ. ದೇವಿ, ಡಾ. ದಯಾನಂದ, ಜಿಲ್ಲಾ ಅಂಗವಿಕಲ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಕೆ.ಜೆ. ವಿಮಲ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಮುಖೇಶ್, ಚಂದ್ರೇಶ್, ಪುನೀತ್, ಮಂಜುನಾಥ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಸಾರ್ವಜನಿಕರು, ಆರೋಗ್ಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ, ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಟಕ ಮೂಲಕ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.