ಮತದಾನೋತ್ತರ ಸಮೀಕ್ಷೆಯಲ್ಲಿ ಎನ್‌ಡಿಎಗೆ ಅಧಿಕಾರ
ನವದೆಹಲಿ, ಜೂ. ೧: ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಇಂದು ಹೊರಬಿದ್ದಿವೆ. ಬಹುತೇಕ ಸಮೀಕ್ಷೆಗಳು ದೇಶದಲ್ಲಿ ಪ್ರಮುಖ ಪಕ್ಷ ಬಿಜೆಪಿಯನ್ನು ಒಳಗೊಂಡ ಎನ್‌ಡಿಎ ಮೈತ್ರಿಕೂಟ ೫೪೩ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿರುವುದಾಗಿ ತಿಳಿಸಿವೆ. ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಿದ್ದರೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ೨೮ ಕ್ಷೇತ್ರಗಳಲ್ಲಿ ಅಧಿಕ ಸ್ಥಾನಗಳನ್ನು ಪಡೆದುಕೊಳ್ಳಲಿರುವುದಾಗಿ ಸಮೀಕ್ಷೆಗಳು ಹೇಳಿವೆ.
ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್
ಬೆಂಗಳೂರು, ಜೂ. ೧: ರಾಜ್ಯದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯ ನ್ಯಾಯಮೂರ್ತಿಗಳಾದ ನಿಲಯ್ ವಿ.ಪಿ. ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂರ್ತಿಗಳು, ವಕೀಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ವಿ. ಕಾಮೇಶ್ವರ್ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿತ್ತು. ರಾಷ್ಟçಪತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅವರೊಂದಿಗೆ ಸಮಾಲೋಚನೆ ನಡೆಸಿ ನ್ಯಾ. ರಾವ್ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ ಮಾಡಿದ್ದು, ಅಧಿಕಾರ ಸ್ವೀಕರಿಸುವಂತೆ ನಿರ್ದೇಶಿಸಿದ್ದರು.
ಬಿಸಿಗಾಳಿಯಿಂದ ಸಾವಿನ ಸಂಖ್ಯೆ ೮೭ಕ್ಕೆ ಏರಿಕೆ
ನವದೆಹಲಿ, ಜೂ. ೧: ಉತ್ತರ ಭಾರತದಲ್ಲಿ ಬಿಸಿಗಾಳಿಯ ಆರ್ಭಟ ಹೆಚ್ಚಾಗಿದ್ದು, ಬಿಸಿಲಿನ ತಾಪದಿಂದ ಕಳೆದ ೩೬ ಗಂಟೆಗಳಲ್ಲಿ ಒಟ್ಟು ೪೫ ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬಿಸಿಗಾಳಿಯಿಂದ ಮೃತಪಟ್ಟವರ ಸಂಖ್ಯೆ ೮೭ಕ್ಕೆ ಏರಿಕೆಯಾಗಿದೆ. ಪಶ್ಚಿಮ ಒಡಿಶಾದಲ್ಲಿ ೧೯ ಜನರು ಶಾಖದ ಹೊಡೆತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ ೧೬ ಜನ, ಬಿಹಾರದಲ್ಲಿ ಐದು ಜನ, ರಾಜಸ್ಥಾನದಲ್ಲಿ ನಾಲ್ವರು ಮತ್ತು ಪಂಜಾಬ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಹರ್ಯಾಣ, ಚಂಡೀಗಢ-ದೆಹಲಿ, ಮತ್ತು ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪದಿಂದ ಜನ ತತ್ತರಿಸಿ ಹೋಗಿದ್ದಾರೆ, ಮಧ್ಯಪ್ರದೇಶ, ಪಂಜಾಬ್, ರಾಜಸ್ಥಾನದ ಕೆಲವು ಭಾಗಗಳಲ್ಲಿ ಮತ್ತು ಉತ್ತರಾಖಂಡದ ಕೆಲವು ಪ್ರದೇಶಗಳಲ್ಲಿ ತಾಪಮಾನ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್!
ಬೆಂಗಳೂರು, ಜೂ. ೧: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗೆ ರಿಲೀಫ್ ಸಿಕ್ಕಿದೆ. ೨೦೨೩ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಅಂದಿನ ಬಿಜೆಪಿ ಸರ್ಕಾರ ವಿರುದ್ಧ ೪೦ ಪರ್ಸೆಂಟ್ ಕಮಿಷನ್ ಆರೋಪ ಸಂಬAಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರರಕಣ ದಾಖಲಿಸಿದ್ದರು. ಈ ಪ್ರಕರಣದ ೪ನೇ ಆರೋಪಿ ರಾಹುಲ್ ಗಾಂಧಿ ಇಂದು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ದೂರುದಾರರ ಪರ ವಕೀಲ ಮನವಿ ಮಾಡಿದ್ದರು. ಆದರೆ, ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸದೆ ಜೂನ್ ೭ರಂದು ಖುದ್ದು ಹಾಜರಾಗಲು ೪೨ನೇ ಎಸಿಎಂಎA ಕೋರ್ಟ್ ಸೂಚನೆ ನೀಡಿದೆ. ಸಿಆರ್‌ಪಿಸಿ ೨೦೫ ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಲಾಗಿದ್ದು, ಜೂನ್ ೭ ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸೂಚನೆ ನೀಡಲಾಗಿದೆ. ಇದೇ ಪ್ರಕರಣದಲ್ಲಿ ೪೨ನೇ ಎಸಿಎಂಎA ಕೋರ್ಟ್ ಮುಂದೆ ಇಂದು ಹಾಜರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.