ಮಡಿಕೇರಿ, ಜೂ. ೧: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ರ ಮತ ಎಣಿಕೆ ತಾ. ೪ ರಂದು ನಡೆಯಲಿದ್ದು, ಈ ದಿನದಂದು ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಸೆಕ್ಷನ್ ೧೪೪ ಮತ್ತು ೧೪೪(ಎ) ಹಾಗೂ ಕರ್ನಾಟಕ ಪೊಲೀಸ್ ಆ್ಯಕ್ಟ್ ೧೯೬೩ ರ ಕಲಂ ೩೫ ರಡಿ ದತ್ತವಾದ ಅಧಿಕಾರದಂತೆ ಜೂನ್, ೦೪ ರಂದು ಬೆಳಗ್ಗೆ ೬ ಗಂಟೆಯಿAದ ಅದೇ ದಿನ ಮಧ್ಯರಾತ್ರಿ ೧೨ ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.