ಪೊನ್ನಂಪೇಟೆ, ಜೂ. ೧: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಆಯೋಜಿಸ ಲಾಗಿದ್ದ ವಾರ್ಷಿಕ ಕ್ರೀಡಾದಿನ ಕಾರ್ಯಕ್ರಮದ ಉದ್ಘಾಟನೆ ಯನ್ನು ಅಂರ‍್ರಾಷ್ಟಿçÃಯ ಬ್ಯಾಡ್‌ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಕ್ರೀಡೆ ವಿದ್ಯಾರ್ಥಿಗಳು ಸದಾ ಉತ್ಸಾಹದಲ್ಲಿರುವಂತೆ ಮಾಡುವುದರ ಜೊತೆಗೆ ಅವರ ದೈಹಿಕ ಹಾಗೂ ಮಾನಸಿಕ ಶಕ್ತಿ ಹೆಚ್ಚಾಗುವಂತೆ ಮಾಡುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ನಿಯಮಿತ ಅಭ್ಯಾಸದ ಮೂಲಕ ಕ್ರೀಡೆಯಲ್ಲಿ ಸಾಧನೆ ಮಾಡಬೇಕು. ಶಿಕ್ಷಣದ ಜೊತೆ ಜೊತೆಗೆ ಯಾವುದಾದರು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಗುರು-ಹಿರಿಯರಿಗೆ ಗೌರವ ನೀಡುವುದನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.

ಮತ್ತೊಬ್ಬರು ಅತಿಥಿ ಕಾವೇರಿ ಎಜುಕೇಷನ್ ಸೊಸೈಟಿ ಖಜಾಂಚಿ ಚೊಟ್ಟೆಯಂಡಮಾಡ ಡಿ. ಮಾದಪ್ಪ ಮಾತನಾಡಿ, ಕ್ರೀಡೆಯಲ್ಲಿ ಗೆದ್ದಾಗ ಸಂಭ್ರಮಪಡುವುದು ಸಹಜ. ಆದರೆ, ಸೋತಾಗ ಎದೆಗುಂದದೇ ಮುನ್ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಿಮಾಡ ಟಿ. ಸುಭಾಷ್ ಸುಬ್ಬಯ್ಯ ಮಾತನಾಡಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಹಲವು ವಿದ್ಯಾರ್ಥಿಗಳು ರಾಜ್ಯ, ರಾಷ್ಟç ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಕ್ರೀಡೆಯ ಜೊತೆಗೆ ಶಿಸ್ತನ್ನು ಮೈಗೂಡಿಸಿಕೊಂಡು ಸಾಧನೆ ಮಾಡುವ ಮೂಲಕ ಪೋಷಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದರು.

ಇದೇ ಸಂದರ್ಭ ಅಂರ‍್ರಾಷ್ಟಿçÃಯ ಬ್ಯಾಡ್‌ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಂಜಿಸಿದರು.

ಈ ಸಂದರ್ಭ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರುಗಳಾದ ಅಜಯ್ ಕುಮಾರ್, ಎನ್.ಪಿ. ರೀತಾ, ಐಕ್ಯೂಎಸಿ ಸಂಚಾಲಕಿ ಡಾ. ನಯನ ತಮ್ಮಯ್ಯ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್, ಕ್ರೀಡಾ ಕಾರ್ಯದರ್ಶಿ ಜಗತ್ ಬೆಳ್ಳಿಯಪ್ಪ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.