ಪೊನ್ನAಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದ ಪ್ರಾರಂಭೋತ್ಸವದ ಪ್ರಯುಕ್ತ ಎಸ್‌ಡಿಎಂಸಿ ಅಧ್ಯಕ್ಷ ಸಿ.ಎ. ಜುನೈದ್ ಅವರು ಶಾಲಾ ಮುಖ್ಯೋಪಾಧ್ಯಾಯ ಬಿ.ಎಂ. ವಿಜಯ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಸಿಹಿಹಂಚಿ ಶಾಲೆಗೆ ಬರಮಾಡಿಕೊಂಡರು. ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರು ತೋರಣ ಹಾಗೂ ಹೂವುಗಳಿಂದ ಶೃಂಗರಿಸಲಾಗಿತ್ತು.

ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ, ಪಠ್ಯಪುಸ್ತಕ, ಸಮವಸ್ತç ಹಾಗೂ ಎಸ್‌ಡಿಎಂಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬೆಲ್ಟ್ ವಿತರಣೆ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ. ಸದಸ್ಯ ರಾಮಕೃಷ್ಣ, ಪೊನ್ನಂಪೇಟೆ ಕ್ಲಸ್ಟರ್ ಸಿಆರ್‌ಪಿ ಟಿ.ಬಿ. ಜೀವನ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ನಾಗವೇಣಿ, ಸದ್ಯಸ್ಯರಾದ ಕನ್ಯಾಕುಮಾರಿ, ಲತಾ, ಸಜೀನಾ, ಶಿಲ್ಪಾ, ಶಾಲಾ ಶಿಕ್ಷಕರಾದ ಫಿಲೋಮಿನಾ, ಪಿ.ಎಂ. ರೋಸಿ, ಹೆಚ್.ಸಿ. ಮಂಗಳಾAಗಿ, ಎಂ.ಎA. ಜಾನ್ಸಿ, ಗಂಗಾಮಣಿ, ನಿಂಗರಾಜು, ಮಹೇಶ್, ಕೆ.ಆರ್. ವಿನಿತಾ, ರೇಖಾ ಗೀತಾ ಸಂದಿಗೋಡಮಠ, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಡುಗೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.ಮಡಿಕೇರಿ: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕಿ ಬಿಂದು, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಇ.ಸಿ.ಓ. ಹರೀಶ್, ಎಸ್.ಡಿ.ಎಂ.ಸಿ. ಸದಸ್ಯ ಜಗದೀಶ್, ಶಾಲಾ ಮುಖ್ಯ ಶಿಕ್ಷಕಿ ಸುಶೀಲ, ಶಾಲಾ ಶಿಕ್ಷಕರುಗಳು ಶಾಲಾ ಮಕ್ಕಳಿಗೆ ಹೂ ಮತ್ತು ಸಿಹಿ ನೀಡುವುದರ ಮೂಲಕ ಸ್ವಾಗತಿಸಿ ಬರಮಾಡಿಕೊಂಡರು.

ಶಿಕ್ಷಣ ಇಲಾಖೆಯ ಡಿ.ವೈ.ಪಿ.ಸಿ. ಕೃಷ್ಣಪ್ಪ ಅವರು ಮಕ್ಕಳಿಗೆ ಉತ್ತಮ ಸಲಹೆ ಸೂಚನೆ ನೀಡುವುದರ ಮೂಲಕ ಶುಭಾಶಯ ಕೋರಿದರು. ಅತಿಥಿಗಳು ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತç ವಿತರಿಸಿದರು.ಶಿಕ್ಷಣ ಇಲಾಖೆಯ ಡಿ.ವೈ.ಪಿ.ಸಿ. ಕೃಷ್ಣಪ್ಪ ಅವರು ಮಕ್ಕಳಿಗೆ ಉತ್ತಮ ಸಲಹೆ ಸೂಚನೆ ನೀಡುವುದರ ಮೂಲಕ ಶುಭಾಶಯ ಕೋರಿದರು. ಅತಿಥಿಗಳು ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತç ವಿತರಿಸಿದರು.ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿಯ ಸದಸ್ಯರು, ಅಧ್ಯಾಪಕ ವೃಂದದವರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಬರಮಾಡಿಕೊಳ್ಳಲಾಯಿತು. ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಆರಂಭ ದಿನದ ಸಂಭ್ರಮ ಕಂಡುಬAತು. ಈ ಸಂದರ್ಭ ಆಡಳಿತ ಮಂಡಳಿ, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುಂಟಿಕೊಪ್ಪ ಭಾಗ ಚೆಟ್ಟಳ್ಳಿ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿತು.

ಶಾಲೆಯಲ್ಲಿ ತಳಿರು ತೋರಣಗಳಿಂದ ಸಿಂಗರಿಸಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ, ಸಿಹಿ ಹಂಚಿ ಶಾಲೆಗೆ ಸ್ವಾಗತಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ರಮಾ, ಸಿಆರ್‌ಪಿ ಅಶೋಕ್, ಶಾಲಾ ಶಿಕ್ಷಕರು, ಪೋಷಕರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು.ವೀರಾಜಪೇಟೆ: ವೀರಾಜಪೇಟೆ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯ ಕ್ರಮ ನಡೆಯಿತು. ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಾಪಕ ವೃಂದದವರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಸ್ವಾಗತಿಸಲಾಯಿತು. ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಆರಂಭ ದಿನದ ಸಂಭ್ರಮ ಕಂಡುಬAತು. ಸುಮಾರು ಒಂದೂವರೆ ತಿಂಗಳು ಮುಚ್ಚಿದ್ದ ಶಾಲೆಗಳಲ್ಲಿ ಕಲರವ ಮನೆ ಮಾಡಿತ್ತು.ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿಯ ಸದಸ್ಯರು, ಅಧ್ಯಾಪಕ ವೃಂದದವರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಬರಮಾಡಿಕೊಳ್ಳಲಾಯಿತು. ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಆರಂಭ ದಿನದ ಸಂಭ್ರಮ ಕಂಡುಬAತು. ಈ ಸಂದರ್ಭ ಆಡಳಿತ ಮಂಡಳಿ, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುಂಟಿಕೊಪ್ಪ ಭಾಗ ಸುಂಟಿಕೊಪ್ಪ: ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸುಂಟಿಕೊಪ್ಪ ವ್ಯಾಪ್ತಿಯ ಶಾಲೆಗಳಲ್ಲಿ ಬಾಳೆಗಿಡ ತಳಿರುತೋರಣದಿಂದ ಶೃಂಗರಿಸಿ, ಮಕ್ಕಳಿಗೆ ಸಿಹಿ ಹಂಚುವ ಮೂಲಕ ಶಿಕ್ಷಕರು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶುಕ್ರವಾರದಂದು ಹಬ್ಬದ ವಾತವರಣ ಕಂಡುಬAತು.

ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸೆಲ್ವರಾಜ್, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವೀರಾ ಡಿಸೋಜ, ಹಾಗೂ ಗದ್ದೆಹಳ್ಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಾಕುಮಾರಿ, ಇತರ ಶಾಲೆಗಳ ಸಹ ಶಿಕ್ಷಕರು ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಬರಮಾಡಿಕೊಂಡರು.