ನಾಪೋಕ್ಲು, ಜೂ. ೨: ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳಿಬಾಣೆ ಸಮೀಪ ಕಾವೇರಿ ನದಿ ತೀರದಲ್ಲಿ ನಾಪೋಕ್ಲು ಪಟ್ಟಣದ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸದರಿ ಪ್ರದೇಶವನ್ನು ಸ್ವಚ್ಛಗೊಳಿಸಿ ಸಿ.ಸಿ. ಕ್ಯಾಮೆರಾ ಅಳವಡಿಸಲಾಯಿತು.
ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಶೆಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದು ರಸ್ತೆ ಬದಿ ಹಾಗೂ ನದಿ ತೀರದಲ್ಲಿ ತ್ಯಾಜ್ಯ ಸುರಿಯುವವರ ಮೇಲೆ ೫೦೦೦ ರೂ. ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೊದ್ದೂರು ಪಂಚಾಯಿತಿ ಅಧ್ಯಕ್ಷ ಹೆಚ್. ಎ. ಹಂಸ ತಿಳಿಸಿದ್ದಾರೆ.