ಮಡಿಕೇರಿ, ಜೂ. ೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟಿçÃಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ. ಜಯ ಲಕ್ಷಿö್ಮ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳದೆ ಉತ್ತಮ ಜೀವನ ನಿರ್ಮಾಣ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ವಿಶಾಲ್ ಮಾತನಾಡಿ, ತಂಬಾಕು ವಿನ ಸೇವನೆಗೆ ಹೆಚ್ಚಾಗಿ ಯುವ ಜನತೆ ಮಾರುಹೋಗುತ್ತಿದ್ದಾರೆ. ಇದರಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ತಂಬಾಕನ್ನು ಮಕ್ಕಳಿಂದ ದೂರವಿರಿಸಿ ಮಕ್ಕಳನ್ನು ರಕ್ಷಿಸಿ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್ ತಂಬಾಕು ಸೇವನೆಯಿಂದ ಉಂಟಾಗುವ ತೊಂದರೆಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಮತ್ತು ಕೋಟ್ಪಾ ಕಾಯಿದೆ ೨೦೦೩ರ ಬಗ್ಗೆ ಸವಿವರವಾಗಿ ಅಂಕಿ ಅಂಶಗಳ ಸಹಿತ ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್ ಬಿ.ಎಲ್. ತಂಬಾಕು ಉತ್ಪನ್ನ ಗಳ ಸೇವನೆಯಿಂದ ಯುವ ಜನತೆ ದೂರ ಉಳಿದು, ಉತ್ತಮ ಸಮಾಜ ನಿರ್ಮಿಸಿ ಎಂದು ತಿಳಿಸಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾ ಧಿಕಾರಿ ವಿಮಲ ಅವರು ನಶಾ ಮುಕ್ತ ಜಿಲ್ಲೆ ಮಾಡಬೇಕಾದರೆ ಯುವ ಜನತೆಯ ಪಾತ್ರದ ಬಗ್ಗೆ ತಿಳಿಸಿದರು. ರಾಷ್ಟಿçÃಯ ಬಾಯಿ ಆರೋಗ್ಯ ಕಾರ್ಯ ಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ರೇವಣ್ಣ ಅವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಗಳ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಟಿ.ಎನ್. ಪಾಲಾಕ್ಷ ಅವರು ವಿಶ್ವ ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಂತರ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ತಂಬಾಕಿ ನಿಂದಾಗುವ ತೊಂದರೆ ಬಗ್ಗೆ ಕಿರು ನಾಟಕ ಪ್ರದರ್ಶಿ ಸಿದರು. ಹಿರಿಯ ಆರೋಗ್ಯ ನಿರೀಕ್ಷ ಣಾಧಿಕಾರಿ ಶ್ರೀನಾಥ್ ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕರು, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು, ವೈದ್ಯಕೀಯ ಹಾಗೂ ನರ್ಸಿಂಗ್ ವಿದ್ಯಾ ರ್ಥಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.