ಮಡಿಕೇರಿ, ಜೂ. ೨: ಲೇಖಕಿ ಪ್ರತಿಮಾ ಹರೀಶ್ ರೈ ಬರೆದಿರುವ ಅಂತರಗAಗೆ ಪುಸ್ತಕ ಜೂನ್ ೯ ರಂದು ಲೋಕಾರ್ಪಣೆಯಾಗಲಿದೆ

ನಗರದ ರೆಡ್ ಬ್ರಿಕ್ಸ್ ಇನ್‌ನ ಸತ್ಕಾರ್ ಸಭಾಂಗಣದಲ್ಲಿ ತಾ.೯ ರಂದು ಭಾನುವಾರ ಬೆಳಿಗ್ಗೆ ೧೦.೩೦ ಗಂಟೆಗೆ ಆಯೋಜಿತ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದು, ಸಾಹಿತಿ ಶ.ಗ. ನಯನತಾರಾ ಅಂತರಗAಗೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಕೃತಿಯ ಕುರಿತಂತೆ ಮಾತನಾಡಲಿದ್ದು, ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಕೊಡಗು ಬಂಟರ ಸಂಘದ ಅಧ್ಯಕ್ಷ ಡಿ. ಜಗದೀಶ್ ರೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಲೇಖಕಿ ಪ್ರತಿಮಾ ಹರೀಶ್ ರೈ ಮಾಹಿತಿ ನೀಡಿದ್ದಾರೆ