ಮಡಿಕೇರಿ, ಜೂ. ೨: ಗರ್ಭಧಾರಣಾ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ (ಲಿಂಗ ಆಯ್ಕೆ ನಿಷೇಧ) ಅಧಿನಿಯಮ ೧೯೯೪, ನಿಯಮ ೧೯೯೬ (ಪಿಸಿ ಮತ್ತು ಪಿಎನ್‌ಡಿಟಿ) ಜಿಲ್ಲಾ ಸಲಹಾ ಸಮಿತಿ ಸಭೆಯು ಶನಿವಾರ ನಡೆಯಿತು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರೇಡಿಯೋಲಾಜಿಸ್ಟ್ ಡಾ. ಎಂ. ಆನಂದ್, ಮಕ್ಕಳ ತಜ್ಞ ಡಾ. ಕುಶ್ವಂತ್ ಕೋಳಿಬೈಲು, ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಗೌರಮ್ಮ ಮಾದಮ್ಮಯ್ಯ, ಒಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್, ಇತರರು ಪಾಲ್ಗೊಂಡು ಜಿಲ್ಲೆಯಲ್ಲಿನ ಹಲವು ಸ್ಕಾö್ಯನಿಂಗ್ ಕೇಂದ್ರಗಳ ಕಾರ್ಯಚಟುವಟಿಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಮಾತನಾಡಿ, ಕುಶಾಲನಗರದ ಗಣೇಶ್ ಸ್ಕಾö್ಯನಿಂಗ್ ಸೆಂಟರ್‌ನ್ನು ಮುಟ್ಟುಗೋಲು ಮಾಡಲಾಗಿದ್ದು, ಕಾನೂನಿನಂತೆ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಸಭೆಯ ಗಮನಕ್ಕೆ ತಂದರು.
ಬಳಿಕ ಮಾತು ಮುಂದುವರಿಸಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರೇಡಿಯೋಲಾಜಿಸ್ಟ್ ಡಾ. ಎಂ. ಆನಂದ್ ಅವರು ವೀರಾಜಪೇಟೆಯ ಆತ್ರೇಯ ಆಸ್ಪತ್ರೆ ಸ್ಕಾö್ಯನಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ನ್ಯೂನತೆಗಳು ಕಂಡುಬAದಿದ್ದು, ಈ ಸಂಬAಧ ಸರಿಪಡಿಸಿಕೊಳ್ಳುವಂತೆ ಹಲವು ಬಾರಿ ಮಾಹಿತಿ ನೀಡಲಾಗಿತ್ತು, ಆದರೆ ಅತ್ರೇಯ ಆಸ್ಪತ್ರೆ ಸ್ಕಾö್ಯನಿಂಗ್ ಕೇಂದ್ರದವರು ನ್ಯೂನತೆಗಳನ್ನು ಸರಿಪಡಿಸಿಕೊಳ್ಳದಿರುವುದು ಕಂಡುಬAದಿದ್ದು, ಸಮಿತಿ ತೀರ್ಮಾನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಮಿತಿ ಸದಸ್ಯರು ನಿಯಮಾನುಸಾರ ಕಾನೂನಿನ ರೀತಿ ಕ್ರಮವಹಿಸುವಂತೆ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಗೌರಮ್ಮ ಮಾದಮ್ಮಯ್ಯ ಅವರು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದೇ ಅಪರಾಧವಾಗಿದೆ. ಈ ಬಗ್ಗೆ ನಿಯಮಾನುಸಾರ ಕ್ರಮವಹಿಸುವುದು ಅತ್ಯಗತ್ಯ ಎಂದರು.
ಕುಶಾಲನಗರದ ಆರತಿ ಸ್ಕಾö್ಯನಿಂಗ್ ಕೇಂದ್ರದ ಪೋರ್ಟಬಲ್ ಸ್ಕಾö್ಯನಿಂಗ್ ಯಂತ್ರವನ್ನು ಹಿಂಪಡೆಯುವ ಬಗ್ಗೆ ಡಾ. ಆನಂದ್ ಅವರು ವಿಷಯ ಪ್ರಸ್ತಾಪಿಸಿ, ಸ್ಕಾö್ಯನಿಂಗ್ ಕೇಂದ್ರದಲ್ಲಿ ಅಗತ್ಯ ಸ್ಕಾö್ಯನಿಂಗ್ ದಾಖಲಾತಿಗಳನ್ನು ಜತನ ಮಾಡದಿರುವುದು ಕಂಡುಬAದಿದೆ ಎಂದು ಸಮಿತಿ ಗಮನಕ್ಕೆ ಎಂದರು. ಈ ಸಂಬAಧ ನಿಯಮಾನುಸಾರ ಕ್ರಮವಹಿಸುವಂತೆ ಸಮಿತಿ ಸದಸ್ಯರು ಸಲಹೆ ಮಾಡಿದರು.
ಮಡಿಕೇರಿಯ ಜಿಲ್ಲಾಸ್ಪತ್ರೆಯ ಸ್ಕಾö್ಯನಿಂಗ್ ಕೇಂದ್ರಕ್ಕೆ ರಾಜ್ಯ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ತಂಡ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ನ್ಯೂನತೆಗಳು ಕಂಡುಬAದಿದ್ದು, ಈ ಬಗ್ಗೆ ನೋಟೀಸ್ ನೀಡಲಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಅವರು ಹೇಳಿದರು.
ಈ ಕುರಿತು ಪ್ರತಿಕ್ರಿಯಿಸಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರೇಡಿಯೋಲಾಜಿಸ್ಟ್ ಡಾ. ಎಂ. ಆನಂದ್ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮತ್ತೊಂದು ವಿಭಾಗದಲ್ಲಿ ಸ್ಕಾö್ಯನಿಂಗ್ ಸೆಂಟರ್ ಇದ್ದು, ನ್ಯೂನತೆ ಕಂಡು ಬಂದಿರುವುದರಿAದ ಸರಿಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು. ಸಮಿತಿ ಸದಸ್ಯರು ಹಾಗೂ ಮಕ್ಕಳ ತಜ್ಞ ಕುಶ್ವಂತ್ ಕೋಲಿಬೈಲು, ಓಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್ ಇತರರು ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು.