ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ

ಬೆಂಗಳೂರು, ಜೂ. ೩ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜೀನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು. ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.

ರೇವ್ ಪಾರ್ಟಿ : ನಟಿ ಹೇಮಾ ಬಂಧನ

ಬೆAಗಳೂರು, ಜೂ. ೩: ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬAಧಿಸಿದAತೆ ತೆಲುಗು ನಟಿ ಹೇಮಾರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ವಿಚಾರಣೆಗೆ ಹಾಜರಾಗುವಂತೆ ಹೇಮಾಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಇಂದು ಬುರ್ಕಾ ಧರಿಸಿ ಬಂದಿದ್ದ ಹೇಮಾ ಸಿಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನೆÀ್ನಲೆಯಲ್ಲಿ ನಟಿಯನ್ನು ಬಂಧಿಸಿದ್ದಾರೆ. ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ ಎಂಟು ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ ಹೇಮಾ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಇಂದು ನಟಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ಎಲೆಕ್ಟಾçನಿಕ್ಸ್ ಸಿಟಿ ಬಳಿಯ ಜಿಎಂ ಫಾರ್ಮ್ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ದಾಳಿ ನಡೆಸಿ, ಸ್ಥಳದಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು.

ಭವಿಷ್ಯ ನಿಜವಾದರೆ, ನೆಹರೂ ದಾಖಲೆ ಸರಿಗಟ್ಟಲಿದ್ದಾರೆ

ನವದೆಹಲಿ, ಜೂ. ೩: ಲೋಕಸಭಾ ಚುನಾವಣೆ ೨೦೨೪ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರದ ಗದ್ದುಗೆ ಎರಲಿದೆ ಎಂದು ಬಹುತೇಕ ಇxiಣ Poಟಟ ಸರ್ವೆಗಳು ಭವಿಷ್ಯ ನುಡಿದಿವೆ. ಹೌದು.. ಹಾಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸರ್ವೆಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಗದ್ದುಗೆ ಏರುವ ಕುರಿತು ಭವಿಷ್ಯ ನುಡಿದಿವೆ. ೨೦೨೪ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಸತತ ಮೂರು ಬಾರಿ ಆಯ್ಕೆಯಾದ ಏಕೈಕ ಪ್ರಧಾನಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಅವರು ಸರಿಗಟ್ಟಲಿದ್ದಾರೆ. ಪಂಡಿತ್ ಜವಾಹರ್ ಲಾಲ್ ನೆಹರು ಅವರು ೧೯೪೭ ರಿಂದ ೧೯೬೪ ರವರೆಗೆ ಸತತ ೧೭ ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಲೋಕಸಭೆಯ ವೆಬ್‌ಸೈಟ್‌ನ ಅಧಿಕೃತ ಮಾಹಿತಿ ಪ್ರಕಾರ ನೆಹರೂ ಅವರು ದೇಶದಲ್ಲಿ ಸುದೀರ್ಘ ಅವಧಿಗೆ ಪ್ರಧಾನಿಯಾಗಿದ್ದ ಏಕೈಕ ವ್ಯಕ್ತಿಯಾಗಿದ್ದಾರೆ.

೪೦೦ಕ್ಕೂ ಹೆಚ್ಚು ಸ್ಥಾನ ಗೆದ್ದರೆ ಸಂವಿಧಾನಕ್ಕೆ ಮಾರಕ: ವಿಪಕ್ಷ

ನವದೆಹಲಿ, ಜೂ. ೩: ಇನ್ನು ಬಿಜೆಪಿ ''ಅಬ್ ಕಿ ಬಾರ್ ೪೦೦ ಪಾರ್'' ಘೋಷಣೆಯನ್ನು ವಿರೋಧಿಸಿರುವ ವಿಪಕ್ಷಗಳು ಬಿಜೆಪಿ ೪೦೦ ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ದೇಶದ ಸಂವಿಧಾನಕ್ಕೆ "ಬೆದರಿಕೆ"ಯಾಗಿದೆ ಎಂದು ಅಭಿಪ್ರಾಯಪಟ್ಟಿವೆ. ಎನ್‌ಡಿಎ ಮೈತ್ರಿಕೂಟ ೪೦೦ ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದರೆ ಸಂವಿಧಾನವನ್ನೇ ಬದಲಿಸುವ ಅಪಾಯವಿದೆ ಎಂದು ಅನೇಕ ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಅದಾಗ್ಯೂ IಓಆIಂ ಕೂಟದ ನಾಯಕರು ಎಕ್ಸಿಟ್ ಪೋಲ್ ಸರ್ವೇ ವರದಿಗಳನ್ನು ನಿರಾಕರಿಸಿದ್ದು, ತಮ್ಮ ಮೈತ್ರಿಕೂಟ ೨೮೦ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿವೆ. ೨೦೨೪ ರ ಚುನಾವಣೆಯು ೨೦೦೪ ರ ಚುನಾವಣೆಯ ಪುನರಾವರ್ತನೆಯಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ೨೦೦೪ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ೧೪೫ ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ತನ್ನ ಮೈತ್ರಿಕೂಟದ ಪಕ್ಷಗಳ ಬೆಂಬಲದೊAದಿಗೆ ಕೇಂದ್ರದಲ್ಲಿ ಅಧಿಕಾರದ ಗುದ್ದುಗೆ ಏರಿತ್ತು. ೨೦೦೯ರ ಚುನಾವಣೆಯಲ್ಲಿ ಕಾಂಗ್ರೆಸ್ ೨೦೬ ಸ್ಥಾನಗಳೊಂದಿಗೆ ಮತ್ತೆ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತ್ತು. ಸತತ ೨ನೇ ಬಾರಿಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು.