ಕುಶಾಲನಗರ, ಜೂ. ೪: ಪೋಷಕರು ತಮ್ಮ ಮಕ್ಕಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಕುಶಾಲನಗರ ಸಂಚಾರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಶಾ ಕರೆ ನೀಡಿದರು.

ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣ ಅಭಿವೃದ್ಧಿ ಯೋಜನೆಯ ಕುಶಾಲನಗರ ವಲಯದ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದೊಂದಿಗೆ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ. ಶಾಲಾ, ಕಾಲೇಜು ಮಕ್ಕಳು ಇದರಿಂದ ಹೊರತಾಗಿಲ್ಲ. ಮೊಬೈಲ್ ದುರುಪಯೋಗ ಮಾಡದಂತೆ ಗಮನಹರಿಸಬೇಕು ವಾಹನಗಳನ್ನು ಚಲಾಯಿಸಲು ಅಪ್ರಾಪ್ತರಿಗೆ ನೀಡಬಾರದು. ಮಕ್ಕಳ ಬಗ್ಗೆ ಸಂಪೂರ್ಣ ಜಾಗೃತಿ ವಹಿಸುವುದು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ವಿ.ಡಿ. ಪುಂಡರಿಕಾಕ್ಷ ಮಾತನಾಡಿ, ಮಕ್ಕಳಿಗೆ ತಮ್ಮ ಜವಾಬ್ದಾರಿಯನ್ನು ತಿಳಿಸಿಕೊಡುವ ಕೆಲಸವಾಗಬೇಕಾಗಿದೆ. ಸ್ವಾಸ್ಥö್ಯ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಪಣತೊಡಬೇಕಾಗಿದೆ ಎಂದರು. ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ, ಸೇವಾ ಪ್ರತಿನಿಧಿ ಜಯಲಕ್ಷಿö್ಮ ಮತ್ತಿತರರು ಇದ್ದರು.