ಮಡಿಕೇರಿ, ಜೂ. ೫: ಜಿದ್ದಾಜಿದ್ದಿನ ಅಖಾಡ, ಪ್ರತಿಷ್ಠಿತ ಕ್ಷೇತ್ರ ಎಂದೇ ಬಿಂಬಿತವಾಗಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಮತದಾರರು ಜೈ ಎಂದಿದ್ದಾರೆ.

೧,೩೯,೨೬೨ ಮತಗಳ ಅಂತರದಿAದ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಯದುವೀರ್ ಒಡೆಯರ್ ಸಂಸತ್ ಪ್ರವೇಶಿಸಿದ್ದಾರೆ.

ಕಳೆದ ಎರಡು ಚುನಾವಣೆ ಗಳಿಗೆ ಹೋಲಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಮತಗಳಿಕೆಯನ್ನು ಹೆಚ್ಚಿಸಿ ಕೊಂಡಿದೆ.

೨೦೧೯ ರಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಾಪ್ ಸಿಂಹ ಮುನ್ನಡೆ ಪಡೆದಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಯದುವೀರ್ ಒಡೆಯರ್ ಅವರು ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಪಿರಿಯಾಪಟ್ಟಣ, ಹುಣಸೂರು ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಜೆಡಿಎಸ್‌ನೊಂದಿಗಿನ ಮೈತ್ರಿ ವರ್ಕೌಟ್ ಆಗಿದ್ದು, ಈ ಮೂರು ಕ್ಷೇತ್ರಗಳಲ್ಲಿ ಕೂಡ ಜೆಡಿಎಸ್ ಮತಗಳು ಬಿಜೆಪಿಗೆ ಚಲಾವಣೆಯಾಗಿವೆ.

ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ದೊಡ್ಡ ಕೊಡುಗೆ ನೀಡುತ್ತಿದ್ದ ಕೊಡಗಿನಲ್ಲಿ ಈ ಬಾರಿ ಕೂಡ ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ.

ಯದುವೀರ್ ಒಡೆಯರ್ ಗೆಲುವು ಸಾಧಿಸಿರುವ ಮತಗಳಲ್ಲಿ ಅರ್ಧ ಮತಗಳು ಕೊಡಗಿನಲ್ಲಿ ಮುನ್ನಡೆ ಸಾಧಿಸಿರುವ ಮತಗಳಾಗಿದೆ.

ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಕೊಡಗಿನಲ್ಲಿ ಮತದಾರರು ಬಿಜೆಪಿಗೆ ಜೈ ಎಂದಿದ್ದಾರೆ.

೨೦೧೪ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಬಿಜೆಪಿಯ ಪ್ರತಾಪ್ ಸಿಂಹ ಅವರು ಮಡಿಕೇರಿ ಕ್ಷೇತ್ರದಿಂದ ೮೧,೮೩೭ ಮತಗಳನ್ನು ಪಡೆದು ೨೫,೦೪೬ ಮತಗಳ ಮುನ್ನಡೆ ಪಡೆದಿದ್ದರು. ಕಾಂಗ್ರೆಸ್ ಮಡಿಕೇರಿ ಕ್ಷೇತ್ರದಲ್ಲಿ ೫೬,೭೯೧ ಮತಗಳನ್ನು ಪಡೆದಿತ್ತು. ೨೦೧೯ ರಲ್ಲಿ ಪ್ರತಾಪ್ ಸಿಂಹ ೧,೦೨,೧೬೨ ಮತಗಳನ್ನು ಪಡೆದು ೪೫,೯೭೬ ಮತಗಳ ಮುನ್ನಡೆ ಪಡೆದಿದ್ದರು. ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ೨೦೧೯ ರಲ್ಲಿ ೫೮,೧೮೫ ಮತಗಳನ್ನು ಪಡೆದು ಕೊಂಡಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಿನ್ನ ಪರಿಸ್ಥಿತಿ ಇತ್ತು. ಕೊಡಗು ಜಿಲ್ಲೆಯಲ್ಲಿ ಇಬ್ಬರೂ ಕೂಡ ಕಾಂಗ್ರೆಸ್ ಶಾಸಕರು ಇದ್ದಾರೆ. ಅದಲ್ಲದೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಉತ್ಸಾಹ ದಿಂದ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಿದ್ದರು.ಕಾಂಗ್ರೆಸ್ ಶಾಸಕದ್ವಯರ ವರ್ಚಸ್ಸು, ಜನಮನ್ನಣೆಯಿಂದ ಈ ಬಾರಿ ಕೊಡಗಿನಲ್ಲಿ ಬಿಜೆಪಿ ಲೀಡ್ ಕುಸಿಯಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಎಲ್ಲವೂ ಹುಸಿಯಾಗಿದೆ.

ಈ ಬಾರಿ ಯದುವೀರ್ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ೧,೦೮,೪೦೨ ಮತಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ೬,೨೪೦ ಮತಗಳನ್ನು ಹೆಚ್ಚುವರಿಯಾಗಿ ಪಡೆದುಕೊಂಡಿದೆ.

ಯದುವೀರ್ ಒಡೆಯರ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಗೌಡ ಅವರಿಗಿಂತ ೪೧,೪೦೮ ಮತಗಳ ಅಂತರದಿAದ ಮುನ್ನಡೆ ಪಡೆದಿದ್ದಾರೆ.

೨೦೧೯ರಲ್ಲಿ ಬಿಜೆಪಿ ಮಡಿಕೇರಿ ಕ್ಷೇತ್ರದಲ್ಲಿ ೪೩,೯೭೬ ಮತಗಳ ಮುನ್ನಡೆ ಪಡೆದುಕೊಂಡಿತ್ತು. ಆದರೆ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮುನ್ನಡೆ ಪಡೆದ ಮತಗಳಿಗಿಂತ ೨,೫೬೮ ಮತಗಳು ಕಡಿಮೆ ಯಾಗಿದೆ.

ಎಂ.ಲಕ್ಷö್ಮಣ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ೬೬,೯೯೪ ಮತಗಳನ್ನು ಪಡೆದುಕೊಂಡಿದ್ದಾರೆ.

೨೦೧೯ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಚ್. ಸಿ. ವಿಜಯಶಂಕರ್ ಅವರು ೫೮,೧೮೬ ಮತಗಳನ್ನು ಪಡೆದುಕೊಂಡಿದ್ದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಮತಗಳಿಕೆಯನ್ನು ಹೆಚ್ಚಿಸಿಕೊಂಡಿದೆ.

ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ೮,೮೦೯ ಮತಗಳನ್ನು ಹೆಚ್ಚುವರಿಯಾಗಿ ಪಡೆದುಕೊಂಡಿದೆ.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿಯ ಪ್ರತಾಪ್ ಸಿಂಹ ಅವರು ೯೬,೨೩೫ ಮತಗಳನ್ನು ಪಡೆದು,೪೧,೪೯೭ ಮತಗಳ ಲೀಡ್ ಪಡೆದುಕೊಂಡಿದ್ದರು.

ಕಾAಗ್ರೆಸ್ ೫೪,೭೩೮ ಮತಗಳನ್ನು ಪಡೆದುಕೊಂಡಿತ್ತು.

ಯದುವೀರ್ ಒಡೆಯರ್ ಅವರು ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ೯೯,೮೦೪ ಮತಗಳನ್ನು ಪಡೆದುಕೊಂಡಿದ್ದಾರೆ.

೨೦೧೯ಕ್ಕಿAತ ೩,೫೬೯ ಮತಗಳು ಈ ಬಾರಿ ಬಿಜೆಪಿ ಬುಟ್ಟಿಗೆ ಹೆಚ್ಚುವರಿಯಾಗಿ ಬಿದ್ದಿವೆ.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಯದುವೀರ್ ಒಡೆಯರ್, ೩,೨೪೫ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರತಾಪ್ ಸಿಂಹ ಅವರು ೪೧,೪೯೭ ಮತಗಳ ಅಂತರದಿAದ ಮುನ್ನಡೆ ಪಡೆದುಕೊಂಡಿದ್ದರು.

ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಚುನಾವಣೆಯಲ್ಲಿ ಪಡೆದಿದ್ದ ಮತಗಳ ಮುನ್ನಡೆಗೆ ಹೋಲಿಸಿದರೆ ೯,೦೪೬ ಮತಗಳು ಈ ಬಾರಿ ಬಿಜೆಪಿ ಬುಟ್ಟಿಯಿಂದ ಕೈ ತಪ್ಪಿದೆ.

೨೦೧೯ ರಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ೫೪೭೩೮ ಮತಗಳನ್ನು ಪಡೆದುಕೊಂಡಿತ್ತು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೬೭,೩೫೩ ಮತಗಳನ್ನು ಪಡೆದುಕೊಂಡಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಗಿಂತ ಈ ಬಾರಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ೧೨,೬೧೫ ಮತಗಳನ್ನು ಹೆಚ್ಚುವರಿಯಾಗಿ ಪಡೆದುಕೊಂಡಿದೆ.

೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ೮೫,೪೭೩ ಮತಗಳ ಮುನ್ನಡೆಯನ್ನು ಪಡೆದುಕೊಂಡಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಮತ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಯದುವೀರ್ ಒಡೆಯರ್ ಅವರು ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ೭೩,೮೫೯ ಮತಗಳ ಅಂತರದಿAದ ಮುನ್ನಡೆ ಪಡೆದುಕೊಂಡಿದ್ದಾರೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಪಡೆದ ಮತಗಳಿಗಿಂತ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೧೧,೬೧೪ ಮತಗಳು ಕಡಿಮೆಯಾಗಿವೆ.

೨೦೧೯ ರಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ೧,೧೨,೯೨೩ ಮತಗಳನ್ನು ಪಡೆದುಕೊಂಡಿದ್ದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಗೌಡ ಅವರು, ೧,೩೭,೩೪೭ ಮತಗಳನ್ನು ಪಡೆದುಕೊಂಡಿದ್ದಾರೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಗಿಂತ ಈ ಬಾರಿ ಕಾಂಗ್ರೆಸ್ ಕೊಡಗಿನಲ್ಲಿ ಹೆಚ್ಚುವರಿಯಾಗಿ ೨೪,೪೨೪ ಮತಗಳ ಪಡೆದುಕೊಂಡಿದೆ.

ಕೊಡಗಿನಲ್ಲಿ ಎರಡು ದಶಕಗಳ ಬಳಿಕ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲವೂ ಹುಸಿಯಾಗಿದೆ. ಕೊಡಗಿನಲ್ಲಿ ಬಿಜೆಪಿ ಶಾಸಕರು ಇಲ್ಲದಿದ್ದರೂ ಕೂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಗಾಲೋಟ ಮುಂದುವರಿ ದಿದೆ. ಸತತ ಮೂರು ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ.

-ಕೆ. ಎಂ. ಇಸ್ಮಾಯಿಲ್ ಕಂಡಕರೆ