ಕುಶಾಲನಗರ, ಜೂ. ೫: ಕುಶಾಲನಗರ ಪುರಸಭೆ ವಾಣಿಜ್ಯ ಸಂಕೀರ್ಣ ನೂತನ ಕಟ್ಟಡದ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಸಮೀಪದ ನಾಗಮ್ಮನ ಮಂಟಿ ನಿವಾಸಿ ಲಕ್ಷö್ಮಣ (೪೨) ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಕುಶಾಲನಗರ ಪಟ್ಟಣ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಮೃತ ವ್ಯಕ್ತಿ ಕಳೆದ ಹಲವಾರು ವರ್ಷಗಳಿಂದ ಮನೆಗೆ ತೆರಳದೆ ಬೀದಿಯಲ್ಲಿ ಸುತ್ತಾಡುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಪಟ್ಟಣ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್, ಸಬ್ ಇನ್ಸ್ಪೆಕ್ಟರ್ ಲೋಹಿತ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.