ಮಡಿಕೇರಿ, ಜೂ.೬: ರಸ್ತೆಯಲ್ಲಿ ತೆರಳುತ್ತಿದ್ದ ಒಂಟಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕನನ್ನು ಮಡಿಕೇರಿ ನಗರ ಪೊಲೀಸರು ಬಂಧನಕ್ಕೊಳಪಡಿಸಿರುವ ಪ್ರಕರಣ ನಡೆದಿದೆ.

ಇಂದು ಸಂಜೆ ಮಡಿಕೇರಿ - ಮೈಸೂರು ರಸ್ತೆಯ ಚೈನ್‌ಗೇಟ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕೈ ಹಿಡಿದು ಅಸಭ್ಯ ವರ್ತನೆ ತೋರಿದ ನೆಲ್ಯಹುದಿಕೇರಿ ನಿವಾಸಿ ರಾಶಿದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ. ಮಹಿಳೆಯರು ಒಂಟಿಯಾಗಿ ಓಡಾಡುವ ಸಂದರ್ಭ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.