ಸೋಮವಾರಪೇಟೆ: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ರಾಜ ಮನೆತನಕ್ಕೆ ಸೇರಿದ ಯದುವೀರರು ಹೊಸ ಹೊಣೆಗಾರಿಕೆ ಯೊಂದಿಗೆ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂದರು. ಈ ಸಂದರ್ಭ ಹಿಂದೂ ಪರ ಸಂಘಟನೆಗಳ ಮುಖಂಡರಾದ ಸುಭಾಶ್ ತಿಮ್ಮಯ್ಯ, ಎಂ.ಬಿ. ಉಮೇಶ್ ಮತ್ತಿತರರು ಇದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಸುಂಟಿಕೊಪ್ಪ ಸ್ಥಾನಿಯ ಸಮಿತಿ ಅಧ್ಯಕ್ಷ ಧನು ಕಾವೇರಪ್ಪ, ಕಾರ್ಯದರ್ಶಿ ವಿ.ಕೆ. ರಾಜ, ಅಧ್ಯಕ್ಷ ಪ್ರಶಾಂತ್ (ಕೋಕ), ಪಂಚಾಯಿತಿ ಸದಸ್ಯರು ಗಳಾದ ಬಿ.ಎಂ. ಸುರೇಶ್, ಗೀತಾ, ಪಕ್ಷದ ಹಿರಿಯ ಮುಖಂಡ ಡಿ. ನರಸಿಂಹ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಿ.ಕೆ. ಮೋಹನ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ, ಮಾಜಿ ಸದಸ್ಯರುಗಳಾದ ಗೀತಾ, ಆನಂದ, ಹರೀಶ್, ಸಹನಾ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.ಸದಸ್ಯರು ಗಳಾದ ಬಿ.ಎಂ. ಸುರೇಶ್, ಗೀತಾ, ಪಕ್ಷದ ಹಿರಿಯ ಮುಖಂಡ ಡಿ. ನರಸಿಂಹ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಿ.ಕೆ. ಮೋಹನ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ, ಮಾಜಿ ಸದಸ್ಯರುಗಳಾದ ಗೀತಾ, ಆನಂದ, ಹರೀಶ್, ಸಹನಾ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.ಕುಶಾಲನಗರ: ಕುಶಾಲನಗರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.

ಕುಶಾಲನಗರ ಗಣಪತಿ ದೇವಾಲಯದ ಮುಂಭಾಗ ಸೇರಿದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಬಿಜೆಪಿ ನಗರ ಅಧ್ಯಕ್ಷ ಎಂ.ಎA. ಚರಣ್ ಮತ್ತು ಮಾಜಿ ಅಧ್ಯಕ್ಷ ಜಯವರ್ಧನ್, ಪಕ್ಷದ ಪ್ರಧಾನ ಕಾರ್ಯದರ್ಶಿ ಮಧುಸೂಧನ್, ಪುರಸಭೆ ಸದಸ್ಯರಾದ ಎಂ.ಬಿ. ಸುರೇಶ್, ಡಿ.ಕೆ. ತಿಮ್ಮಪ್ಪ, ವಿ.ಡಿ. ಪಂಡರಿಕಾಕ್ಷ, ಪ್ರಮುಖರಾದ ಉಮಾಶಂಕರ್, ಜಿ.ಎಲ್. ನಾಗರಾಜ್, ಬೋಸ್ ಮೊಣ್ಣಪ್ಪ, ಎಂ.ಡಿ. ಕೃಷ್ಣಪ್ಪ, ನವನೀತ್ ಪೊನ್ನೇಟಿ, ವಿ.ಆರ್. ಶಿವಶಂಕರ್, ಚಂದ್ರು, ಗೀತಾ ಬಸಪ್ಪ ಮತ್ತಿತರರು ಇದ್ದರು.ಕೂಡಿಗೆ: ತೊರೆನೂರು ಬಿಜೆಪಿ ಪಕ್ಷದ ಕಾರ್ಯಕರ್ತರು ತೊರೆನೂರು ಗ್ರಾಮದ ಮುಖ್ಯ ವೃತ್ತದಲ್ಲಿ ವಿಜಯೋತ್ಸವವನ್ನು ಆಚರಿಸಿದರು. ಅಲ್ಲದೆ ಅಳುವಾರದಲ್ಲಿಯು ಸಹ ಕಾರ್ಯಕರ್ತರು ವಿಜಯೋತ್ಸವದ ಆಚರಣೆ ಮಾಡಿದರು. ಈ ಸಂದರ್ಭ ತೊರೆನೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಪ್ರಕಾಶ್, ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೆ.ಬಿ. ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ಶಕ್ತಿ ಕೇಂದ್ರದ ಪ್ರಮುಖ್ ಮಹೇಶ್, ದೇವಾಲಯ ಸಮಿತಿ ಅಧ್ಯಕ್ಷ ಪ್ರೇಮಕುಮಾರ್, ಬೂತ್ ಅಧ್ಯಕ್ಷ ಸುಂದರ್, ಬಿಜೆಪಿ ಪಕ್ಷದ ಪ್ರಮುಖರಾದ ಸುರೇಶ್, ಶಿವಪ್ಪ, ಸೇರಿದಂತೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.ಗುಡ್ಡೆಹೊಸೂರು: ಗುಡ್ಡೆಹೊಸೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಯಿತು. ಈ ಸಂದರ್ಭ ಬಿ.ಜೆ.ಪಿ. ಮುಖಂಡರು, ಪಂಚಾಯಿತಿ ಸದಸ್ಯರು, ಶಕ್ತಿ ಕೇಂದ್ರದ ಅಧ್ಯಕ್ಷರು, ಮಂಡಲ ಪ್ರಮುಖರು ಮತ್ತು ಕಾರ್ಯಕರ್ತರು ಹಾಜರಿದ್ದರು.ಐಗೂರು: ಐಗೂರು ಮತ್ತು ಹೊಸತೋಟ ಭಾಗದ ಬಿ.ಜೆ.ಪಿ. ಕಾರ್ಯಕರ್ತರು ಐಗೂರಿನಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.