ಬೆಂಗಳೂರು, ಜೂ. ೬: ರಾಜ್ಯ ವಿಧಾನಸಭೆಯಲ್ಲಿ ಈಗಿರುವ ಸಂಖ್ಯಾಬಲದ ಪ್ರಕಾರ, ಕಾಂಗ್ರೆಸ್ ೭ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ, ಬಿಜೆಪಿ ೩ ಹಾಗೂ ಜೆಡಿಎಸ್ ೧ ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ೧೧ ಮಂದಿಯೂ ಇದೀಗ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಿಲ್ಕಿಸ್ ಬಾನೊ, ಸಣ್ಣ ನೀರಾವರಿ ಸಚಿವ ಹಾಗೂ ಕೊಡಗಿನ ಉಸ್ತವಾರಿ ಸಚಿವ ಎನ್.ಎಸ್. ಬೋಸ್‌ರಾಜು, ಸಿಎಂ ರಾಜಕೀಯ ಸಲಹೆಗಾರ ಕೆ. ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಮಾಜಿ ಎಂಎಲ್ಸಿ ಐವನ್ ಡಿಸೋಜಾ, ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಅವರುಗಳು ಕಾಂಗ್ರೆಸ್‌ನಿAದ ಆಯ್ಕೆಯಾಗಿದ್ದಾರೆ.

ಇನ್ನು ಬಿಜೆಪಿಯು ಪಕ್ಷದ ಮಾಜಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಎಂಎಲ್ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಪಕ್ಷದ ನಾಯಕ ಎಂ.ಜಿ. ಮುಳೆ ಹಾಗೂ ಜೆಡಿಎಸ್‌ನ ಟಿ.ಎನ್. ಜವರಾಯಿ ಗೌಡ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಇಂದು ಇಲ್ಲಿ ಘೋಷಿಸಿದ್ದಾರೆ.