ನಾಪೋಕ್ಲು, ಜೂ. ೭: ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲೆಯ ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ ಕುಶಾಲನಗರದ ಧರ್ಮಸ್ಥಳ ಯೋಜನಾ ಕಚೇರಿಯಲ್ಲಿ ಜರುಗಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ಮಳೆ ಗಾಲದಲ್ಲಿ ಸಂಭವಿಸುವ ಯಾವುದೇ ವಿಪತ್ತುಗಳನ್ನು ಎದುರಿಸಲು ಶೌರ್ಯ ತಂಡ ಸಿದ್ಧವಿರಬೇಕು. ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತದೊಂದಿಗೆ ಸಂಪರ್ಕವಿಟ್ಟುಕೊAಡು ಮಳೆಗಾಲ ದಲ್ಲಿ ಉಂಟಾಗುವ ತೊಂದರೆ ಸರಿಪಡಿಸುವ ಕೆಲಸ ಮಾಡಬೇಕು ಎಂದರು. ಕೊಡಗು ಜಿಲ್ಲೆಯ ನಿರ್ದೇಶಕಿ ಲೀಲಾವತಿ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ್ ಪಟಗಾರ, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮಡಿಕೇರಿ ತಾಲೂಕಿನ ಕ್ಷೇತ್ರ ಯೋಜ ನಾಧಿಕಾರಿ ಪುರುಷೋತ್ತಮ, ವೀರಾಜಪೇಟೆ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ದಿನೇಶ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ, ಹಾಗೂ ಮಡಿಕೇರಿ-ವೀರಾಜಪೇಟೆ ತಾಲೂಕಿನ ವಲಯದ ಮೇಲ್ವಿಚಾರಕರು, ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.