ನಾಪೋಕ್ಲು, ಜೂ. ೭: ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲೆಯ ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ ಕುಶಾಲನಗರದ ಧರ್ಮಸ್ಥಳ ಯೋಜನ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಾಸ್ಟರ್ ಆಗಿ ನಾಪೋಕ್ಲುವಿನ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಬಾಳೆಯಡ ದಿವ್ಯ ಮಂದಪ್ಪ, ಕ್ಯಾಪ್ಟನ್ ಆಗಿ ದಿನೇಶ್, ಹಾಗೂ ವೀರಾಜಪೇಟೆ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಾಸ್ಟರ್ ಆಗಿ ನಂಜರಾಯಪಟ್ಟಣದ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ತೀರ್ಥಕುಮಾರ್, ಕ್ಯಾಪ್ಟನ್ ಆಗಿ ರೇಖಾ ಗಣೇಶ್ ಆಯ್ಕೆಯಾದರು.

ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದೇಶಿಕ, ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಕೊಡಗು ಜಿಲ್ಲೆಯ ನಿರ್ದೇಶಕಿ ಲೀಲಾವತಿ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ್ ಪಟಗಾರ, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮಡಿಕೇರಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ, ವೀರಾಜಪೇಟೆ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ದಿನೇಶ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ. ಹಾಗೂ ಮಡಿಕೇರಿ-ವೀರಾಜಪೇಟೆ ತಾಲೂಕಿನ ವಲಯದ ಮೇಲ್ವಿಚಾರಕರು, ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.