ಮಹಾರಾಷ್ಟç, ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ

ಬೆಂಗಳೂರು, ಜೂ. ೭: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿ ರುವಂತೆಯೇ ಮಹಾರಾಷ್ಟç, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳ ನಾಡಿನಲ್ಲಿ ಮುಂದಿನ ೫ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟç ರಾಜ್ಯಾದ್ಯಂತ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮಳೆ ಮುಂದಿನ ೫ ದಿನಗಳ ಕಾಲ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ. ಈಗಾಗಲೇ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉತ್ತರ ಕರ್ನಾಟಕದ ಬೀದರ್, ಗುಲ್ಬರ್ಗಾ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಾ. ೬ ರಿಂದ ೮ ರವರೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತು ತಾ. ೮ ರಿಂದ ೧೨ ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊAಡAತ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹೈಕೋರ್ಟ್ ಚಾಟಿ ಬೆನ್ನಲ್ಲೇ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ

ಬೆಂಗಳೂರು, ಜೂ. ೭: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆಗೆ ಹಾಜರಾಗದೆ ಕಳೆದ ೧೫-೨೦ ದಿನಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ಥೆಯ ಅಪಹರಣ ಪ್ರಕರಣಕ್ಕೆ ಸಂಬAಧಿಸಿದAತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ಶುಕ್ರವಾರ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆಯಷ್ಟೇ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್‌ಐಟಿ ಎದುರು ಹಾಜರಾಗಿದ್ದಾರೆ. ಮೂಲಗಳ ಪ್ರಕಾರ ಭವಾನಿ ರೇವಣ್ಣ ಸಂತ್ರಸ್ಥ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದು, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ತನ್ನ ಮಗನಿಗೆ ಸಹಾಯ ಮಾಡಲು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಪ್ರಸ್ತುತ ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ಇಂದು ಬೆಳಿಗ್ಗೆ ನಡೆದ ವಿಚಾರಣೆಯಲ್ಲಿ ಶುಕ್ರವಾರ ಮಧ್ಯಾಹ್ನ ೧ ಗಂಟೆಯೊಳಗೆ ಎಸ್‌ಐಟಿಯ ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡು ವಂತೆ ಭವಾನಿ ರೇವಣ್ಣಗೆ ನ್ಯಾ. ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಪೀಠ ಸೂಚಿಸಿತ್ತು. ಅಲ್ಲದೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಮಧ್ಯೆ, ಅಪಹರಣ ಪ್ರಕರಣಕ್ಕೆ ಸಂಬAಧಿಸಿದAತೆ ಭವಾನಿ ಅವರ ಕಾರು ಚಾಲಕನನ್ನು ಎಸ್‌ಐಟಿ ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣದಲ್ಲಿ ೯ ಕೆ.ಜಿ. ಚಿನ್ನ ಕಳ್ಳ ಸಾಗಣೆ: ಮಹಿಳೆಯರ ಬಂಧನ

ಬೆAಗಳೂರು, ಜೂ. ೭: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು, ರೂ. ೬ ಕೋಟಿ ಮೌಲ್ಯದ ೯ ಕೆ.ಜಿ.ಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ ಮೂಲದವರೆಂದು ತಿಳಿದುಬಂದಿದೆ. ತಾ. ೪ ರಂದು ಬ್ಯಾಂಕಾಕ್‌ನಿAದ ಬೆಂಗಳೂರಿಗೆ ಬರುತ್ತಿರುವ ಥಾಯ್ ಏರ್‌ವೇಸ್ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಾಸಣೆ ನಡೆಸಿದಾಗ ಹ್ಯಾಂಡ್ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ ೬.೮ ಕೆ.ಜಿ. ಚಿನ್ನ ಪತ್ತೆಯಾಗಿದೆ. ೪.೭೭ ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ. ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ ೨.೧೮ ಕೆ.ಜಿ. ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

೧೧ ದೇಶಗಳ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ನೇಪಾಳ

ಕಠ್ಮಂಡು, ಜೂ. ೭: ಪ್ರಧಾನಿ ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಪಕ್ಷದೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿ, ಕೆಪಿ ಶರ್ಮಾ ಓಲಿ ಅವರೊಂದಿಗೆ ಕೈ ಜೋಡಿಸಿದ ಮೂರು ತಿಂಗಳ ನಂತರ ಭಾರತ ಮತ್ತು ಯುಎಸ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ನೇಪಾಳಿ ಕಾಂಗ್ರೆಸ್ ಕೋಟಾದಡಿ ನೇಮಕಗೊಂಡವರು ಸೇರಿದಂತೆ ೧೧ ದೇಶಗಳ ರಾಯಭಾರಿಗಳನ್ನು ನೇಪಾಳ ಸರ್ಕಾರ ವಾಪಸ್ ಕರೆಸಿದೆ. ಉಪಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ನಾರಾಯಣ್ ಕಾಜಿ ಶ್ರೇಷ್ಠಾ ಅವರ ಬಲವಾದ ಮೀಸಲಾತಿಯ ಹೊರತಾಗಿಯೂ, ಭಾರತಕ್ಕೆ ನೇಪಾಳದ ರಾಯಭಾರಿ ಶಂಕರ್ ಶರ್ಮಾ ಸೇರಿದಂತೆ ಸರ್ಕಾರ ಗುರುವಾರ ಈ ರಾಯಭಾರಿಗಳನ್ನು ವಾಪಸ್ ಕರೆಸಿದೆ ಎಂದು ಕಠ್ಮಂಡು ಪೋಸ್ಟ್ ಪತ್ರಿಕೆ ವರದಿ ಮಾಡಿದೆ. ಇಂತಹ ಕ್ರಮವು ಅತ್ಯಂತ ರಾಜತಾಂತ್ರಿಕವಲ್ಲದ ಸಂದೇಶವನ್ನು ಕಳುಹಿಸುತ್ತದೆ ಎಂದು ಅನೇಕ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ. ನೇಪಾಳಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಕೋಟಾದಲ್ಲಿ ನೇಮಕಗೊಂಡ ರಾಯಭಾರಿಗಳನ್ನು ವಾಪಸ್ ಕರೆಸಿಕೊಳ್ಳುವ ಪ್ರಸ್ತಾಪವನ್ನು ವಿದೇಶಾಂಗ ಸಚಿವೆ ಶ್ರೇಷ್ಠಾ ವಿರೋಧಿಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ಪ್ರಧಾನಿ ದಹಲ್ ಮತ್ತು ಸಿಪಿಎನ್-ಯುಎಂಎಲ್ ಅಧ್ಯಕ್ಷ ಓಲಿ ಏಕಪಕ್ಷೀಯವಾಗಿ ರಾಯಭಾರಿಗಳನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಸಚಿವರೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.