ಐಗೂರು, ಜೂ. ೭: ಐಗೂರಿನ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ಜನ ಜಾಗೃತಿ ವೇದಿಕೆ ಕೊಡಗು ಮತ್ತು ಶಾಂತಳ್ಳಿ ವಲಯದ ಸಹಯೋಗದೊಂದಿಗೆ ಧರ್ಮಸ್ಥಳ ಸಂಘದ ಒಕ್ಕೂಟದ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯಲ್ಲಿ ಹಿರಿಯ ವಕೀಲರೂ, ಜಿಲ್ಲಾ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಅಭಿಮನ್ಯುಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಉಂಟಾಗಿ ಜೀವನದಲ್ಲಿ ತೊಂದರೆ ಅನುಭವಿಸುವಂತಾಗುತ್ತದೆ ಎಂದರು. ಸಂಘದ ಯೋಜನಾಧಿಕಾರಿ ರೋಹಿತ್ ಮಾತನಾಡಿ, ಧೂಮಪಾನ ಮತ್ತು ಮದÀ್ಯಪಾನದಿಂದ ಕ್ಯಾನ್ಸರ್ ರೋಗಕ್ಕೆ ಹೆಚ್ಚಿನ ಜನರು ಬಲಿಯಾಗುತ್ತಿದ್ದಾರೆ ಎಂದು ತಿಳಿಸಿದರು .ಒಕ್ಕೂಟದ ಸೇವಾ ಪ್ರತಿನಿಧಿ ಚೆನ್ನಮ್ಮ ವಾರದ ಸಭೆ ಮತ್ತು ಕಂತುಗಳ ಬಗ್ಗೆ ಮಾಹಿತಿ ನೀಡಿದರು. ನೋಡಲ್ ಅಧಿಕಾರಿ ಪ್ರವೀಣ್ ಸಿ.ಎಸ್.ಸಿ. ಸೇವೆ ಬಗ್ಗೆ ಮಾತನಾಡಿದರು. ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷೆ ಗೀತಾ, ಮೇಲ್ವಿಚಾರಕ ಲಕ್ಷö್ಮಣ್, ಕಾರ್ಯದರ್ಶಿ ಸವಿತ, ಸಹ ಕಾರ್ಯದರ್ಶಿ ಸಾವಿತ್ರಿ ಮತ್ತು ಸದಸ್ಯರು ಹಾಜರಿದ್ದರು. ಲಕ್ಷö್ಮಣ್ ವಂದಿಸಿದರು.