ನವದೆಹಲಿ, ಜೂ. ೭: ರಾಷ್ಟçಪತಿ ದ್ರೌಪದಿ ಮುರ್ಮು ಅವರನ್ನು ಇಂದು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಎನ್‌ಡಿಎ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟçಪತಿಗಳು ಆಹ್ವಾನ ನೀಡಿದ್ದಾರೆ.

ಜೂನ್ ೯ ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟçಪತಿ ಭೇಟಿಗೂ ಮುನ್ನ ಪ್ರಧಾನಿ ಮೋದಿ ಅವರು ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು

(ಮೊದಲ ಪುಟದಿಂದ) ಮಾಜಿ ರಾಷ್ಟçಪತಿ ರಾಮನಾಥ್ ಕೋವಿಂದ್ ಅವರುಗಳÀನ್ನು ಭೇಟಿಯಾದರು.

ಈ ಭೇಟಿಗೂ ಮುನ್ನ ಎನ್‌ಡಿಎ ವತಿಯಿಂದ ಕೇಂದ್ರದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಂದರ್ಭದಲ್ಲಿ ಬೆಂಬಲಿಗ ಸಂಸದರ ಪಟ್ಟಿಯನ್ನು ರಾಷ್ಟçಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ೨೯೩ ಸ್ಥಾನಗಳನ್ನು ಪಡೆದುಕೊಂಡಿದ್ದು, ೫೪೩ ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಹೊಂದಿದೆ. ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಸರ್ವಾನುಮತದಿಂದ ಎನ್‌ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ನಾಯಕರಾಗಿ ಆಯ್ಕೆಯಾದ ನಂತರ ನರೇಂದ್ರ ಮೋದಿಯವರು ಮಾತನಾಡಿದರು. ಎಲ್ಲರೂ ನನ್ನನ್ನು ಎನ್‌ಡಿಎ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ನನ್ನ ಅದೃಷ್ಟ, ನೀವೆಲ್ಲರೂ ನನಗೆ ಹೊಸ ಜವಾಬ್ದಾರಿಯನ್ನು ನೀಡಿದ್ದೀರಿ ಅದಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಬಲವಾದ ನಂಬಿಕೆ ಮೇಲೆ ಸರ್ಕಾರ ನಡೆಯುತ್ತದೆ ಎಂದರು. ಸರ್ಕಾರ ನಡೆಸಲು ಬಹುಮತ ಅಗತ್ಯ. ಪ್ರಜಾಪ್ರಭುತ್ವದ ಸ್ಥಾನವು ಒಂದು ತತ್ವವಾಗಿದೆ. ನಾವು ಒಮ್ಮತದ ಕಡೆಗೆ ಶ್ರಮಿಸುತ್ತೇವೆ. ದೇಶವನ್ನು ಮುನ್ನಡೆಸಲು ಇರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತೇವೆ. ಎನ್‌ಡಿಎ ಸುಮಾರು ೩ ದಶಕಗಳನ್ನು ಪೂರೈಸಿದೆ. ಇದು ಸಾಮಾನ್ಯ ವಿಷಯವಲ್ಲ. ಇದು ಇದು ಭಾರತದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಮೈತ್ರಿಯಾಗಿದೆ. ನಮ್ಮ ಎಲ್ಲಾ ನಿರ್ಧಾರಗಳಲ್ಲಿ ಸರ್ವಾನುಮತವನ್ನು ತಲುಪುವುದು ನಮ್ಮ ಗುರಿಯಾಗಿದೆ. ಮೈತ್ರಿಯು ‘ಸರ್ವ ಪಂಥ್ ಸಂಭವ' (ಎಲ್ಲಾ ಧರ್ಮಗಳು ಸಮಾನ) ತತ್ವಕ್ಕೆ ಬದ್ಧವಾಗಿದೆ ಎಂದು ಹೇಳಿದ ಮೋದಿ ಮತ್ತು ಮುಂದಿನ ೧೦ ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಾಮಾನ್ಯ ನಾಗರಿಕರ ಜೀವನದಲ್ಲಿ ಕನಿಷ್ಟ ಹಸ್ತಕ್ಷೇಪಕ್ಕೆ ಒತ್ತು ನೀಡಲಿದೆ ಎಂದು ಹೇಳಿದರು.

ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಕಳೆದ ೧೦ ವರ್ಷಗಳಲ್ಲಿ ೧೦೦ ಸ್ಥಾನಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ಅವರು ಗಳಿಸಿದ ಒಟ್ಟು ಸ್ಥಾನಗಳು ಈ ಚುನಾವಣೆಯಲ್ಲಿ ಬಿಜೆಪಿಗೆ ಹೋಲಿಸಿದರೆ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಎನ್‌ಡಿಎ ಸಂಸದರಲ್ಲದೆ, ಮುಖ್ಯಮಂತ್ರಿಗಳು ಸೇರಿದಂತೆ ಮೈತ್ರಿಕೂಟದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೋದಿ ನಾಯಕತ್ವವನ್ನು ಬೆಂಬಲಿಸುವ ನಿರ್ಣಯವನ್ನು ಪ್ರಸ್ತಾಪಿಸಿದಾಗ ಮಿತ್ರಪಕ್ಷಗಳು ಮತ್ತು ಸಂಸದರು ಅದನ್ನು ಅನುಮೋದಿಸಿದರು. ಸಭೆಯಲ್ಲಿ ಮೋದಿ... ಮೋದಿ... ಘೋಷಣೆ ಕೇಳಿಬಂದಿತು.

ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮೋದಿ ಸರಿಯಾದ ಸಮಯಕ್ಕೆ ಸೂಕ್ತ ನಾಯಕರಾಗಿ ಆಯ್ಕೆಯಾಗಿದ್ದಾರೆ. ಮೋದಿ ನೇತೃತ್ವದಲ್ಲಿ ೩ನೇ ಬಾರಿ ಸರ್ಕಾರ ರಚಿಸುತ್ತಿರುವುದು ಐತಿಹಾಸಿಕ ದಿನ ಎಂದು ಬಣ್ಣಿಸಿದರು.

ನಿತೀಶ್ ಕುಮಾರ್ ಮಾತನಾಡಿ, ಮೋದಿ ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆ ಅದನ್ನು ಮಾಡಲಿದ್ದಾರೆ. ಅಲ್ಲಿ ಇಲ್ಲಿ ವಿರೋಧ ಪಕ್ಷದವರು ಗೆದ್ದಿದ್ದಾರೆ. ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ ಅವರಿಗೆ ನಮ್ಮ ಬೆಂಬಲವಿದೆ ಎಂದರು.