ಮಡಿಕೇರಿ, ಜೂ. ೭ : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೮ರಂದು (ಇಂದು) ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.