ನವದೆಹಲಿ, ಜೂ. ೮: ರಾಷ್ಟಿçÃಯ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ಪಕ್ಷದ ಲೋಕಸಭೆ ಹಾಗೂ ರಾಜ್ಯ ಸಭಾ ಸದಸ್ಯರುಗಳನ್ನೊಳಗೊಂಡ ಸಂಸದರ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು.
ಈ ಪ್ರಸ್ತಾವನೆಯನ್ನು ಸಂಸದರುಗಳಾದ ಗೌರವ್ ಗೊಗೊಯ್, ಕೆ ಸುಧಾಕರನ್ ಮತ್ತು ತಾರಿಕ್ ಅನ್ವರ್ ಅನುಮೋದಿಸಿದ್ದಾರೆ. ೭೭ ವರ್ಷದ ಸೋನಿಯಾ ಗಾಂಧಿ ಅವರು ಕಳೆದ ಫೆಬ್ರವರಿಯಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. ರಾಷ್ಟç ರಾಜಧಾನಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಸಭೆ ನಡೆಯಿತು.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾರ್ತಿ ಚಿದಂಬರA, ರಾಜೀವ್ ಶುಕ್ಲಾ, ರಣದೀಪ್ ಸುರ್ಜೆವಾಲ, ಅಜಯ್ ಮಾಕನ್, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಶಶಿ ತರೂರ್ ಸೇರಿದಂತೆ ಹಲವಾರು ನಾಯಕರು ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಹೆಸರು ಪ್ರಸ್ತಾಪ
ಇದಕ್ಕೂ ಮುನ್ನ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ಲೋಕಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಸಿಡಬ್ಲ್ಯುಸಿ ಸಭೆಯ ಬಳಿಕ ಮಾತನಾಡಿದÀ ಕಾಂಗ್ರೆಸ್ ಸಂಸದರಾದ
(ಮೊದಲ ಪುಟದಿಂದ) ಕುಮಾರಿ ಸೆಲ್ಜಾ, ರಾಹುಲ್ ಗಾಂಧಿ ವಿಪಕ್ಷದ ನಾಯಕರಾಗಬೇಕೆಂಬುದು ಸಿಡಬ್ಲ್ಯು ಸಿಯ ಇಚ್ಛೆಯಾಗಿದೆ ಎಂದು ಹೇಳಿ ದ್ದಾರೆ. ಕೆ.ಸಿ.ವೇಣುಗೋಪಾಲ್ ಮಾತ ನಾಡಿ, ವಿಪಕ್ಷ ನಾಯಕರಾಗುವಂತೆ ಸಿಡಬ್ಲ್ಯುಸಿ ಸಭೆ ಸರ್ವಾನುಮತದಿಂದ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದೆ. ಸಿಡಬ್ಲ್ಯುಸಿಯು ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿಯವರ ಪ್ರಯತ್ನಗಳನ್ನು ಶ್ಲಾಘಿಸಿದೆ. ಆದರೆ, ಈ ಕುರಿತು ಅಂತಿಮ ನಿರ್ಣಯವನ್ನು ಸ್ವತಃ ಸೋನಿಯಾ ಗಾಂಧಿ ಅವರೇ ತೆಗದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ಈ ಸಭೆ ಬಳಿಕ ನಡೆದ ಪಕ್ಷದ ಸಂಸದೀಯ ಸದಸ್ಯರ ಸಭೆಯಲ್ಲಿಯೂ ಕೂಡ ವಿಪಕ್ಷ ನಾಯಕನ ಆಯ್ಕೆ ತೀರ್ಮಾನವನ್ನು ಸಂಸದೀಯ ಅಧ್ಯಕ್ಷೆ ಸೋನಿಯಾ ಅವರೇ ಕೈಗೊಳ್ಳಲಿ ಎಂದು ಒಮ್ಮತದಿಂದ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ.