ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟಿçÃಯ ಸೇವಾ ಯೋಜನಾ (ಎನ್.ಎಸ್. ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ. ಘಟಕದ ವತಿಯಿಂದ "ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ" ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನಾಚರಣೆ-೨೦೨೪ ರ ಅಂಗವಾಗಿ ಮಂಗಳವಾರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ "ಪರಿಸರ ಸಂಭ್ರಮ", "ನಮ್ಮ ನಡೆ ಪರಿಸರ ದೆಡೆಗೆ" "ಗೋ ಗ್ರೀನ್ ಅಭಿಯಾನ"ಕ್ಕೆ ಚಾಲನೆ ನೀಡಲಾಯಿತು.
ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು.
ಹಸಿರು ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿದ ಎಸ್.ಡಿ.ಎಂ.ಸಿ. ಅಧ್ಯಕ್ಷ ಎ.ಎಂ. ಜವರಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡನೆಟ್ಟು ಬೆಳೆಸುವ ಮೂಲಕ, ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ಪರಿಸರ ಸಂರಕ್ಷಣೆ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ. ಡಿ. ರಮ್ಯ, ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು. ಶಿಕ್ಷಕರಾದ ಕೆ. ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್. ಸುಜಾತ, ಎಸ್.ಎಂ. ಗೀತಾ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ ಇದ್ದರು. ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಎನ್.ಎಸ್.ಎಸ್. ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ಸಹಯೋಗದಲ್ಲಿ ಪರಿಸರ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಕಡಂಗ: ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿವಿಧ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಶಾಂತಿಕುಮಾರ್ ಪಿ.ಎಂ. ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ದಿನದ ಮಹತ್ವ ಕುರಿತು ತಿಳಿಸಿ, ಸಹ ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನೆಟ್ಟರು. ಐಗೂರು: ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಹಳೇ ವಿದ್ಯಾರ್ಥಿ ಸಂಘದ ಸದಸ್ಯ ಕೆ.ಎಲ್. ಹೊನ್ನಪ್ಪನವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸರಳ ಕುಮಾರಿ, ಶಿಕ್ಷಕರಾದ ಅಜಿತ್ ಕುಮಾರ್, ಅನಸೂಯ, ಇಂದಿರಾ, ಭಾರತಿ, ವಿದ್ಯಾಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಐಗೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೋಮವಾರಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ಬೇಳೂರು ಶಾಖಾ ವ್ಯಾಪ್ತಿಗೆ ಒಳಪಡುವ ಬಳಗುಂದ ಸರ್ಕಾರಿ ಶಾಲೆಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ವಲಯ ಅರಣ್ಯಾಧಿಕಾರಿ ಚೇತನ್ ಹೆಚ್.ಪಿ., ಉಪವಲಯ ಅರಣ್ಯಾಧಿಕಾರಿ ನಾರಾಯಣ ಮೂಲ್ಯ, ಜಗದೀಶ್, ರಾಕೇಶ್, ಬಳಗುಂದ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಗೋಣಿಕೊಪ್ಪಲು: ಪ್ರಕೃತಿಯ ಮಡಿಲು ಪ್ರಯೋಗ ಶಾಲೆಯಾಗಬೇಕು, ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆದಲ್ಲಿ ನಮ್ಮ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಬಹುದೆಂದು ಸಮಾಜ ಸೇವಕ ಪರಿಸರ ಸಂಕೇತ್ ಪೂವಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವೀರಾಜಪೇಟೆ ತಾಲೂಕು ಸಾಮಾಜಿಕ ಅರಣ್ಯ ವಲಯ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪೆರುಂಬಾಡಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರದ ನಡುವೆ ವಿದ್ಯಾರ್ಥಿಗಳಿಗೆ ಆಗಿಂದ್ದಾಗೆ ಪಾಠ ಪ್ರವಚನಗಳು ನಡೆಯುವಂತಾಗಬೇಕು. ಇದರಿಂದ ಪರಿಸರದ ಕಾಳಜಿ ಹಾಗೂ ಪರಿಸರದ ಪ್ರಾಮುಖ್ಯತೆ ವಿದ್ಯಾರ್ಥಿಗಳಲ್ಲಿ ಮೂಡಿಸಿದಂತಾಗುತ್ತದೆ. ಇದರಿಂದ ಮುಂದಿನ ಪೀಳಿಗೆಗೆ ಕೊಡುಗೆ ನೀಡಲು ಅವಕಾಶ ಸಿಗಲಿದೆ ಎಂದರು.
ಪರಿಸರ ದಿನದ ವಿಷಯ ಕುರಿತು ಪತ್ರಕರ್ತೆ ಉಷಾಪ್ರೀತಂ ಮಾತನಾಡಿ, ಕೊಡಗಿನಲ್ಲಿರುವ ಪರಿಸರದ ಮೇಲೆ ಹಂತ ಹಂತವಾಗಿ ಒತ್ತಡಗಳು ಬೀಳುತ್ತಿವೆ. ಪ್ರವಾಸೋದ್ಯಮದ ಹೆಸರಿನಲ್ಲಿ ನಮಗೆ ಅರಿವಿಲ್ಲದಂತೆ ಪರಿಸರಗಳು ಹಾಳಾಗುತ್ತಿವೆ. ಇದರಿಂದ ನಾವೆಲ್ಲರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರತಿ ನಾಗರಿಕನ ಜವಾಬ್ದಾರಿಯು ಹೆಚ್ಚಿದೆ. ಭತ್ತದ ಗದ್ದೆಗಳು ನಿವೇಶನಗಳಾಗಿ ಪರಿವರ್ತನೆಯಾಗುತ್ತಿರುವುದು ಪರಿಸರ ನಾಶದ ಅಂಶಗಳಲ್ಲೊAದು ಎಂದರು.
ಪೆರುAಬಾಡಿ ಬಳಿಯ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದ ಬಿ.ಆರ್. ಸತೀಶ್ ಪರಿಸರದ ಬಗ್ಗೆ ಸ್ಥಳದಲಿಯೇ ಚಿತ್ರ ಬಿಡಿಸುವ ಮೂಲಕ ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಕೆಲಸ ನಿರ್ವಹಿಸಿದರು. ಕಾರ್ಯಕ್ರಮದ ಅಂಗವಾಗಿ ವೀರಾಜಪೇಟೆಯಲ್ಲಿ ಉತ್ತಮ ಸಾಮಾಜಿಕ ಸೇವೆ ನೀಡುತ್ತಿರುವ ಆಟೋ ಚಾಲಕ ಜುನೈದ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಪ್ರಮುಖರಾದ ಬಾಬಾ ಶಂಕರ್, ಜಗದೀಶ್, ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಶಾಲೆಯ ಆವರಣದಲ್ಲಿ ವಿವಿಧ ತಳಿಯ ಗಿಡಗಳನ್ನು ನೆಡಲಾಯಿತು.*ಗೋಣಿಕೊಪ್ಪ: ನಗರೀಕರಣದಿಂದ ಅಂತರ್ಜಲಕ್ಕೆ ಗಂಡಾAತರ ಎದುರಾಗಲಿದೆ ಎಂದು ನಿವೃತ್ತ ಕರ್ನಲ್ ಚೆಪ್ಪುಡೀರ ಪಿ. ಮುತ್ತಣ್ಣ ಅಭಿಪ್ರಾಯಪಟ್ಟರು.
ಎಂ. ಸಿ. ಮಾದಪ್ಪ ಪೆಟ್ರೋಲಿಯಂ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ವಿತರಿಸಿ ಮಾತನಾಡಿದರು.
ನಗರೀಕರಣದಿಂದ ಭವಿಷ್ಯದಲ್ಲಿ ಅಂತರ್ಜಲದ ಮೇಲೆ ಹೆಚ್ಚು ಒತ್ತಡ ಬೀರಲಿದೆ. ಜಿಲ್ಲೆಯ ಪ್ರಮುಖ ಪಟ್ಟಣಗಳು ನಗರಗಳ ರೀತಿಯಲ್ಲಿ ಪರಿವರ್ತನೆಯಾಗುತ್ತಿದೆ. ಇದರಿಂದ ಪರಿಸರದ ಮೇಲೆ ಪರಿಣಾಮ ಬೀರಲಿದ್ದು, ಸ್ಥಳೀಯರಿಗೆ ನೀರಿನ ಸಮಸ್ಯೆ ಹೆಚ್ಚಾಗಲಿವೆ. ಖಾಸಗಿ ಬಾವಿ, ಕೊಳವೆ ಬಾವಿ, ಕೆರೆಗಳ ನೀರನ್ನು ರಾಜ್ಯದ ವಿವಿಧ ಭಾಗಗಳ ಜನರಿಗೆ ವಿತರಿಸುವ ನಿರ್ಧಾರ ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚು. ಕಾವೇರಿ ಮೂಲ ಕೊಡಗಿನಲ್ಲಿ ಗಿಡ, ಮರಗಳ ರಕ್ಷಣೆ ಅಗತ್ಯ. ನಗರೀಕರಣದಿಂದ ಪರಿಸರ ನಾಶದೊಂದಿಗೆ ನೀರಿನ ಮೂಲದ ಹಕ್ಕು ಕಳೆದುಕೊಳ್ಳಲಿದೆ. ದಕ್ಷಿಣ ಭಾರತಕ್ಕೆ ನೀರು ಒದಗಿಸುವ ಕಾವೇರಿ ಮೂಲ ಕೊಡಗು ನಗರೀಕರಣದಿಂದ ನೀರಿನ ಮೂಲ ಕಳೆದುಕೊಂಡರೆ, ಖಾಸಗಿ ಜಾಗಗಳ ನೀರು ಬೇರೆಯವರ ಪಾಲಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಹಸಿರೀಕರಣಕ್ಕೆ ಒತ್ತು ನೀಡಲು ಒತ್ತಾಯಿಸಿದರು. ಕೊಡಗಿನ ಹವಾಗುಣಕ್ಕೆ ಪೂರಕವಾಗಿರುವ ಮಹಾಗನಿ, ನೆಲ್ಲಿ, ಸಂಪಿಗೆ, ನೇರಳೆ ಜಾತಿಗಳ ಸುಮಾರು ೩೦೦ ಗಿಡಗಳನ್ನು ವಿತರಿಸಲಾಯಿತು.
ಉದ್ಯಮಿ ಮಚ್ಚಮಾಡ ಪಾರ್ವತಿ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಉಪಾಧ್ಯಕ್ಷ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್, ಕಾರ್ಯದರ್ಶಿ ಮಂಡೇಡ ಅಶೋಕ್, ಖಜಾಂಚಿ ವಿ.ವಿ. ಅರುಣ್ಕುಮಾರ್, ನಿರ್ದೇಶಕ ಕೆ.ಬಿ. ಜಗದೀಶ್ ಜೋಡುಬೀಟಿ, ಕೃಷಿಕ ಕೊಣಿಯಂಡ ಸಂಜು ಇದ್ದರು.ಚೆಯ್ಯಂಡಾಣೆ: ಕಕ್ಕಬ್ಬೆ ಬಳಿಯ ಕುಂಜಿಲ ಗ್ರಾಮದ ಕೆ.ಪಿ. ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಸಫಿಯಾ, ಶಾಲಾ ಮುಖ್ಯಶಿಕ್ಷಕಿ ಪಿ.ಕೆ. ಗಂಗಮ್ಮ, ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಕುಶಾಲನಗರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ ಆಶ್ರಯದಲ್ಲಿ ಗಿಡ ನೀಡುವ ಕಾರ್ಯಕ್ರಮ ನಡೆಯಿತು.
ಆರೋಗ್ಯ ಅಧಿಕಾರಿಗಳಾದ ತಾಲೂಕು ಆರೋಗ್ಯ ಅಧಿಕಾರಿ ಡಾ. ಇಂದುದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ಕುಮಾರ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಾದ ಡಾ. ಶ್ರೀನಿವಾಸ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಆರ್ಬಿಎಸ್ಕೆ ತಂಡದ ವೈದ್ಯಾಧಿಕಾರಿಗಳಾದ ಡಾ. ಭರತ್, ಡಾ. ಮೇಳಪ್ಪ ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.ಮಡಿಕೇರಿ: ಭಾರತ ಸೇವಾದಳ ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನದ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮೋಂತಿ ಗಣೇಶ್ ಭಾಗವಹಿಸಿ ಮಾತನಾಡಿ, ಗಿಡಗಳನ್ನು ನೆಟ್ಟು ಬೆಳೆಸುವ ಉದ್ದೇಶದ ಬಗ್ಗೆ ತಿಳಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲರ ಹೊಣೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭ ಮಡಿಕೇರಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಶ್ರೀನಿವಾಸ, ವೀರಾಜಪೇಟೆ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಭಾರತ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ರೇವತಿ ರಮೇಶ್, ಜಿಲ್ಲಾ ಸಂಘಟಕ ಗವಿಸಿದ್ದನಗೌಡ ಎನ್. ಪಾಟೀಲ್, ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ ಹೆಚ್.ಕೆ, ಶಾಲೆಯ ಶಿಕ್ಷಕರು ಹಾಜರಿದ್ದರು.ಪೊನ್ನಂಪೇಟೆ: ಹಳ್ಳಿಗಟ್ಟುವಿನ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಭೂಮಿ ಮರುಸ್ಥಾಪನೆ, ಮರುಭೂಮೀಕರಣ ಮತ್ತು ಬರಸ್ಥಿತಿ ಸ್ಥಾಪಕತ್ವ ಈ ಕಾರ್ಯಕ್ರಮದ ಪ್ರಮುಖ ಧ್ಯೇಯೋದ್ದೇಶವಾಗಿದ್ದು, ‘ನಮ್ಮ ಭೂಮಿ-ನಮ್ಮ ಭವಿಷ್ಯ’ ಎಂಬ ಘೋಷವಾಕ್ಯದಡಿಯಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಲ್ಲಿ ಸಿ.ಐ.ಪಿ.ಯು. ಕಾಲೇಜು ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಇದು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಎಂದರು.
ಈ ಸಂದರ್ಭ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿಯರಾದ ವೀಕ್ಷಾ ಪೊನ್ನಮ್ಮ, ಕೆ.ಆರ್. ದೇಚಮ್ಮ, ಅನನ್ಯ ಅಕ್ಕಮ್ಮ ಪರಿಸರ ದಿನಾಚರಣೆಯ ಮಹತ್ವ ಮತ್ತು ಯುವಜನತೆಯ ಪಾತ್ರ, ಜವಾಬ್ದಾರಿ ಕುರಿತು ವಿಚಾರ ಮಂಡಿಸಿದರು. ಪರಿಸರ ಮಾಲಿನ್ಯದಿಂದ ಎದುರಿಸಬೇಕಾದ ಸಮಸ್ಯೆ, ಪ್ರಸ್ತುತ ಸ್ಥಿತಿಗತಿ ಕುರಿತು ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ದೀಪ್ನಾ ಸೀತಮ್ಮ, ಬಿ.ಕೆ. ಈಶಾನಿ ದೇಚಮ್ಮ, ಅನನ್ಯ ಅಕ್ಕಮ್ಮ, ಅಭಿನಯ ಭಾಗವಹಿಸಿದ್ದರು. ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ ಭೌತಶಾಸ್ತç ಪ್ರಾಧ್ಯಾಪಕಿ ಪ್ರೊ. ಅನುರಾಧ ಪಿ.ಜೆ., ಕಾರ್ಯಕ್ರಮ ಸಂಯೋಜಕಿ ಲತಾಕುಮಾರಿ, ಉಪನ್ಯಾಸಕ ವೃಂದ, ಬೋಧಕೇತರ ವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಷಾಜ ನಿರೂಪಿಸಿ, ಸ್ವಾಗತಿಸಿದರು. ದೃಶ್ಯ ಅಚ್ಚಪ್ಪ ವಂದಿಸಿದರು.