ಮಡಿಕೇರಿ, ಜೂ. ೯: ನಗರದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ವಾರ್ಷಿಕೋತ್ಸವ ತಾ.೧೧ರಂದು ನಡೆಯಲಿದೆ.

ಬೆಳಿಗ್ಗೆ ೧೦.೩೦ ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮೈಸೂರು ಮಹಾರಾಜ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ. ಸಿ.ಬಿ. ರಾಮಚಂದ್ರ, ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್, ಕೊಡಗು ವಿಶ್ವವಿದ್ಯಾನಿಲಯ ಕುಲ ಸಚಿವ ಡಾ. ಸೀನಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಮೇಜರ್ ಡಾ. ರಾಘವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.