ಕೂಡಿಗೆ, ಜೂ. ೯: ಪಠ್ಯದ ಕಲಿಕೆಯ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸು ವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢಗೊಳ್ಳುವುದಕ್ಕೆ ಪ್ರೇರಣೆ ದೊರೆಯುತ್ತದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಅಭಿಪ್ರಾಯಿಸಿದರು.

ಜ್ಞಾನ ಕಾವೇರಿ ಕ್ಯಾಂಪಸ್ ಚಿಕ್ಕ ಅಳುವಾರ ಇಲ್ಲಿ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಕ್ರೀಡೋತ್ಸವವನ್ನುದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸಾಮಾನ್ಯ, ಧನಾತ್ಮಕವಾಗಿ ತೆಗೆದುಕೊಂಡು ಜೀವನದ ಗುರಿ ತಲುಪುವ ಕಡೆಗೆ ಲಕ್ಷö್ಯ ಕೊಡಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ತಮ್ಮಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಇರುವ ಉತ್ತಮ ವೇದಿಕೆ. ಪಠ್ಯೇತರ ಚಟುವಟಿಕೆಗಳಿಂದ ವಂಚಿತರಾಗಬಾರದು. ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಹ ಸಂಪೂರ್ಣ ತೊಡಗಿಸಿಕೊಳ್ಳಲು ತಿಳಿಸಿದರು.

ಸೋಮವಾರಪೇಟೆ ಸೆಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಕ ಶಿವಕುಮಾರ್, ಜೋಡಿಗುಬ್ಬಿ ಶಾಲೆಯ ದೈಹಿಕ ಶಿಕ್ಷಕ ಅರುಣ್ ಕುಮಾರ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಕ್ರೀಡಾ ಮಹೋತ್ಸವದಲ್ಲಿ ವಿವಿಧ ವಿಭಾಗದ ಉಪನ್ಯಾಸಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕ ಡಾ. ಜಮೀರ್ ಅಹಮದ್ ಮತ್ತು ಸುದರ್ಶನ್ ಇದ್ದರು.