ಮಡಿಕೇರಿ, ಜೂ.೯ : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ. ಮಡಿಕೇರಿ ತಾಲೂಕಿನ ಅರೆಕಾಡು ಶಾಲೆಯ ಸಮೀಪ ಶನಿವಾರ ಕಾಡಾನೆಗಳು ಪ್ರತ್ಯಕ್ಷಗೊಂಡು ಅಪಾಯದ ಮುನ್ಸೂಚನೆ ಕಂಡು ಬಂದಿತ್ತು.

ತಕ್ಷಣ ಎಚ್ಚೆತ್ತುಕೊಂಡ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ನಂತರ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ವಾಹನದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆ ಮನೆಗಳಿಗೆ ತಲುಪಿಸಿದರು. ಸಕಾಲದಲ್ಲಿ ಕಾರ್ಯೋನ್ಮುಖರಾಗಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ತೋರಿದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಸ್ಥಳೀಯ ಗ್ರಾಮಸ್ಥರು ಶ್ಲಾಘಿಸಿದ್ದಾರೆ.