ಸುAಟಿಕೊಪ್ಪ, ಜೂ. ೯: ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿ ಸೂಕ್ತ ದಾಖಲಾತಿ ಇಲ್ಲದೆ ವಾಹನ ಚಲಾಯಿಸುತ್ತಿದ್ದವರು ಹಾಗೂ ಪಟ್ಟಣದಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲುಗಡೆ ಮಾಡಿದವರಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿದರು.

ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಎಂ.ಸಿ. ಶ್ರೀಧರ್ ಹಾಗೂ ಸಿಬ್ಬಂದಿ ವಾಹನ ತಪಾಸಣೆ ನಡೆಸಿದರು.

ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ವಾಹನಗಳಿಗೆ, ಜನಸಾಮಾನ್ಯರಿಗೆ ಅಡ್ಡಿಪಡಿಸುವುದು, ಅಪ್ರಾಪ್ತ ಯುವಕರು ವಾಹನ ಚಾಲನೆ ಮಾಡುವುದು, ಅನಧಿಕೃತವಾಗಿ ಆಟೋ ಬಾಡಿಗೆ ಚಲಾಯಿಸುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪಿಎಸ್‌ಐ ಶ್ರೀಧರ್ ಎಚ್ಚರಿಕೆ ನೀಡಿದರು.

ಹೆಲ್ಮೆಟ್ ಧರಿಸದ ಹಲವು ಸವಾರರನ್ನು ಪೊಲೀಸ್ ಠಾಣೆಗೆ ಕರೆಯಿಸಿ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಿದರು.