ವೀರಾಜಪೇಟೆ, ಜೂ. ೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ವೀರಾಜಪೇಟೆ ತಾಲೂಕು ಕಾನೂರು ವಲಯ ಬ್ರಹ್ಮಗಿರಿ ಕಾರ್ಯ ಕ್ಷೇತ್ರದ ತ್ರೆöÊಮಾಸಿಕ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯ ವೈದ್ಯ ಶರತ್ ಅವರು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಅದರಿಂದ ಉಂಟಾಗುವ ಕ್ಯಾನ್ಸರ್ ಕಾಯಿಲೆಗಳು ಹಾಗು ಸ್ತಿçÃಯರಲ್ಲಿ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗು ತಂಬಾಕು ವ್ಯಸನದಿಂದ ಯಾವ ರೀತಿ ಹಂತ ಹಂತವಾಗಿ ಹೊರಗೆ ಬರಬೇಕು ಎಂಬುದನ್ನು ಜನರಿಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಸುಜೀರ್ ಕುಲಾಲ್ ಯೋಜನೆಯ ಕಾರ್ಯಕ್ರಮಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಒಕ್ಕೂಟ ಅಧ್ಯಕ್ಷೆಯ ಸುನೀತ ವಹಿಸಿದ್ದರು. ಸೇವಾ ಪ್ರತಿನಿಧಿ ಮುತ್ತಪ್ಪ, ದಿವ್ಯ, ಒಕ್ಕೂಟದ ಪದಾಧಿಕಾರಿಗಳು, ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.