ಮಡಿಕೇರಿ, ಜೂ. ೯: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂU Àಳೂರು ವಿಶ್ವವಿದ್ಯಾನಿಲಯದ ಮೂರು ರ‍್ಯಾಂಕ್‌ಗಳು ಸಂದಿವೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಒಂದು ನಗದು ಪುರಸ್ಕಾರ ವನ್ನು ಕಾಲೇಜಿನ ವಿದ್ಯಾರ್ಥಿನಿ ಪಡೆದುಕೊಂಡಿದ್ದಾರೆ.

ಕೊಡವ ಎಂ ಎ ಸ್ನಾತಕೋತ್ತರ ಪದವಿಯಲ್ಲಿ ಲೇಖಕಿ, ಕವಯಿತ್ರಿ ಹೇಮಾವತಿ ಬಿ.ಎನ್. ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.

ಶಶಿ ಕಿರಣ್ ವೈ.ಆರ್. ಪಿಜಿ ಡಿಪ್ಲೊಮಾ ಯೋಗವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರು ೬೩ ವಯಸ್ಸಿನ ವಿದ್ಯಾರ್ಥಿನಿಯಾಗಿದ್ದು, ಯೋಗವಿಜ್ಞಾನದಂತಹ ಶಾಸ್ತಿçÃಯ ವಿಷಯದಲ್ಲಿ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸಾಧನೆ ಮಾಡಿದ್ದಾರೆ. ಗ್ರೀಷ್ಮಾ ಕೆ.ಎ. ಅವರು ಎಂ ಎ ಅರ್ಥಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಮAಗಳೂರು ವಿಶ್ವವಿದ್ಯಾನಿಲಯದ ಪದವಿ ಹಂತದಲ್ಲಿ ಸೂಕ್ಷ್ಮ ಜೀವವಿಜ್ಞಾನ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿನಿ ಹಿಬಾತುಲ್ ಬಾರಿ ಅವರಿಗೆ ಪ್ರೊ. ಜಿ. ಭಟ್ ಮೆಮೋರಿಯಲ್ ನಗದು ಪುರಸ್ಕಾರ ಲಭಿಸಿದೆ. ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮೆಡಿಕಲ್ ಮೈಕ್ರೋ ಬಯೋಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ತಾ. ೧೧ರಂದು ಕಾಲೇಜಿನ ವಾರ್ಷಿಕೋತ್ಸವದಲ್ಲಿ ಈ ಸಾಧಕರನ್ನು ಸನ್ಮಾನಿಸಲಾಗುವುದು. ತಾ. ೧೫ರಂದು ನಡೆಯುವ ಮಂಗಳೂರು ವಿಶ್ವವಿದ್ಯಾನಿಲಯದ ೪೨ನೇ ಘಟಿಕೋತ್ಸದದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರಿಂದ ಪ್ರಶಸ್ತಿ ಹಾಗೂ ರ‍್ಯಾಂಕ್ ಪ್ರಮಾಣ ಪತ್ರವನ್ನು ಸ್ವೀಕರಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.