ಮಡಿಕೇರಿ, ಜೂ.೧೧ : ಕರ್ನಾಟಕ ಲೋಕಾಯುಕ್ತ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ.೧೨ ರಂದು (ಇಂದು) ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾ.೧೪ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೧ ಗಂಟೆ ಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕ ರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗ ದಿತ ಪತ್ರದಲ್ಲಿ ನೀಡಬಹುದು. ಸಾರ್ವ ಜನಿಕರು ಈ ಅವಕಾಶವನ್ನು ಸದುಪ ಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾ ಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.