ವಿವಿಧೆಡೆ ದಿನಾಚರಣೆ
ಮಡಿಕೇರಿ, ಜೂ. ೮: ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನೀಡುವುದು ಅಗತ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ, ವಕೀಲರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಸಂತ ಜೋಸೆಫರ ಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಸಂತ ಜೋಸೆಫರ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡನೆಟ್ಟು ಮಾತನಾಡಿದ ಅವರು, ಮನುಷ್ಯನ ಜೀವನಕ್ಕೆ ಉತ್ತಮವಾದ ವಾತಾವರಣ ಮುಖ್ಯ. ನೀರು, ಗಾಳಿ, ಆಹಾರ ಪ್ರಕೃತಿದತ್ತವಾಗಿದ್ದು, ಗಾಳಿ ಇಲ್ಲದೆ ಬದುಕಲು ಸಾಧ್ಯವಿಲ್ಲ. ಗಾಳಿ, ಬೆಳಕು, ಆಹಾರ ಚೆನ್ನಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಆದ್ದರಿಂದ ಪರಿಶುದ್ಧ ಪರಿಸರ ಅಗತ್ಯ ಎಂದರು.
ಶಾಲೆಗಳಲ್ಲಿ ಔಷಧೀಯ ಗುಣಗಳುಳ್ಳ ಸಸ್ಯಗಳು ಮತ್ತು ಸಾವಯವ ಪದ್ಧತಿಯ ತರಕಾರಿ ಗಿಡಗಳನ್ನು ನೆಡುವಂತಾಗಬೇಕು. ಪ್ರಸ್ತುತ ದಿನಗಳಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಮಳೆಗಾಲದಲ್ಲಿ ಇಂಗುಗುAಡಿಗಳನ್ನು ತೆರೆಯುವ ಮೂಲಕ ಹರಿದುಹೋಗುವ ನೀರನ್ನು ಭೂಮಿಯಲ್ಲಿ ಇಂಗುವAತೆ ಮಾಡಿ ಜಲಮೂಲಗಳನ್ನು ಸಂರಕ್ಷಿಸಬೇಕು ಎಂದು ಸಲಹೆ ನೀಡಿದರು.
ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಪ್ರತಿನಿತ್ಯವೂ ಒಂದೊAದು ಗಿಡವನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡಬೇಕು. ಗಿಡ ಬೆಳೆಸಿ ಪರಿಸರ ಸಂರಕ್ಷಿಸಿ ಎಂಬ ಮನೋಭಾವ ಎಲ್ಲರಲ್ಲಿಯೂ ಕಾರ್ಯಗತಗೊಳ್ಳಬೇಕು ಎಂದರು.
ಹಸಿರಿದ್ದರೆ ಮಾತ್ರ ಉಸಿರು ಉಳಿಯಲು ಸಾಧ್ಯ. ಪ್ರತಿಯೊಬ್ಬರು ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿದರೆ ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯಕರ ಪರಿಸರವನ್ನು ನೀಡಬಹುದು ಎಂದು ತಿಳಿಸಿದರು.
ಕಟ್ಟಡ ಕಾಮಗಾರಿ ಸಂದರ್ಭ ಮರಗಳನ್ನು ಉಳಿಸಿಕೊಳ್ಳುವಂತಾಗಬೇಕು. ನದಿಗಳಿಗೆ ಕಲ್ಮಶಗಳನ್ನು ಬಿಡಬಾರದು. ಪ್ರತಿಯೊಬ್ಬರು ತಮ್ಮ ತೋಟ, ಮನೆಗಳಲ್ಲಿ ಹೆಚ್ಚು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಥಳೀಯ ನಗರಸಭಾ ಸದಸ್ಯ ಅರುಣ್ ಶೆಟ್ಟಿ, ಎಲ್ಲರೂ ಪರಿಸರವನ್ನು ಸಂರಕ್ಷಿಸಬೇಕು, ಸ್ವಚ್ಛತೆಯನ್ನು ಕಾಪಾಡಬೇಕು. ಶಾಲೆಯ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಸಂತ ಜೋಸೆಫರ ಶಾಲೆಯ ಮೇಲ್ವಿಚಾರಕಿ ಸಿಸ್ಟರ್ ರೋಜಾ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಫಿಲೋಮಿನಾ, ನಗರಸಭಾ ಸದಸ್ಯ ಮಹೇಶ್ ಜೈನಿ, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
೧೦೦ ಗಿಡಗಳು
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳದ ವಿದ್ಯಾರ್ಥಿಗಳು ಹಾಗೂ ಗಣ್ಯರು ಕ್ರೀಡಾಂಗಣದ ಸುತ್ತಲೂ ಸುಮಾರು ೧೦೦ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು.ಮಾಡಬೇಕು. ಗಿಡ ಬೆಳೆಸಿ ಪರಿಸರ ಸಂರಕ್ಷಿಸಿ ಎಂಬ ಮನೋಭಾವ ಎಲ್ಲರಲ್ಲಿಯೂ ಕಾರ್ಯಗತಗೊಳ್ಳಬೇಕು ಎಂದರು.
ಹಸಿರಿದ್ದರೆ ಮಾತ್ರ ಉಸಿರು ಉಳಿಯಲು ಸಾಧ್ಯ. ಪ್ರತಿಯೊಬ್ಬರು ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿದರೆ ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯಕರ ಪರಿಸರವನ್ನು ನೀಡಬಹುದು ಎಂದು ತಿಳಿಸಿದರು.
ಕಟ್ಟಡ ಕಾಮಗಾರಿ ಸಂದರ್ಭ ಮರಗಳನ್ನು ಉಳಿಸಿಕೊಳ್ಳುವಂತಾಗಬೇಕು. ನದಿಗಳಿಗೆ ಕಲ್ಮಶಗಳನ್ನು ಬಿಡಬಾರದು. ಪ್ರತಿಯೊಬ್ಬರು ತಮ್ಮ ತೋಟ, ಮನೆಗಳಲ್ಲಿ ಹೆಚ್ಚು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಥಳೀಯ ನಗರಸಭಾ ಸದಸ್ಯ ಅರುಣ್ ಶೆಟ್ಟಿ, ಎಲ್ಲರೂ ಪರಿಸರವನ್ನು ಸಂರಕ್ಷಿಸಬೇಕು, ಸ್ವಚ್ಛತೆಯನ್ನು ಕಾಪಾಡಬೇಕು. ಶಾಲೆಯ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಸಂತ ಜೋಸೆಫರ ಶಾಲೆಯ ಮೇಲ್ವಿಚಾರಕಿ ಸಿಸ್ಟರ್ ರೋಜಾ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಫಿಲೋಮಿನಾ, ನಗರಸಭಾ ಸದಸ್ಯ ಮಹೇಶ್ ಜೈನಿ, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
೧೦೦ ಗಿಡಗಳು
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳದ ವಿದ್ಯಾರ್ಥಿಗಳು ಹಾಗೂ ಗಣ್ಯರು ಕ್ರೀಡಾಂಗಣದ ಸುತ್ತಲೂ ಸುಮಾರು ೧೦೦ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು.ಪರಿಸರ ಮಾಲಿನ್ಯವನ್ನು ಉಂಟುಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜೀವಶಾಸ್ತç ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ಅವರು ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕಿಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.ಗೋಣಿಕೊಪ್ಪ : ಕಾಲೇಜಿನ ಎನ್.ಸಿ.ಸಿ ಘಟಕ ಮತ್ತು ಪದವಿಪೂರ್ವ ಕಾಲೇಜಿನ ಎನ್. ಎಸ್. ಎಸ್. ಘಟಕದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ದಿನದ ಮಹತ್ವದ ಕುರಿತು ಮಾತನಾಡಿದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್. ಎಸ್. ಮಾದಯ್ಯ ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೆ ಪ್ರಾಣಿಪಕ್ಷಿಗಳು ಪ್ರತಿಯೊಂದು ಜೀವಸಂಕುಲ, ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಬಿಸಿವೆ ಆದರೆ ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿಗಾಗಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವು ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲ ದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಮನುಷ್ಯ ಯಾವಾಗಲೂ ತನ್ನ ಚಟುವಟಿಕೆಗಳ ಬಗ್ಗೆ ಜಾಗೃತನಾಗಿರಬೇಕು ಮತ್ತು ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯವಾಗಿಡಲು ಪ್ರಯತ್ನಿಸಬೇಕು. ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಬೇಕು ಮತ್ತು ಅವುಗಳನ್ನು ಎಚ್ಚರಿಕೆಯಿಂದ ಬಳಸಿಕೊಳ್ಳ ಬೇಕೆಂದರು. ಕಾರ್ಯಕ್ರಮದಲ್ಲಿ ಎನ್. ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಅಕ್ರಂ, ಎನ್.ಎಸ್. ಎಸ್. ಅಧಿಕಾರಿ ಕೆ. ಎಂ. ಕುಸುಮ್, ಕ್ಯಾಪ್ಟನ್ ಬ್ರೆöÊಟಾ ಕುಮಾರ್, ಚೇತನ್ ಚಿಣ್ಣಪ್ಪ ಹಾಜರಿದ್ದರು ಕರಿಕೆ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾಗಮಂಡಲ ಅರಣ್ಯ ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೇರಿ ಚಪ್ಪೆಂಡಡಿ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಕ್ಕಬ್ಬೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಮತ್ತು ಗ್ರಾಮ ಪಂಚಾಯಿತಿ ಪಿಡಿಓ ಅಶೋಕ ಅವರ ಸಹಯೋಗದಲ್ಲಿ ಸಸಿಗಳನ್ನು ನೆಡಲಾಯಿತು.
ಚೆಟ್ಟಿಮಾನಿ ಗ್ರಾಮ ಪಂಚಾಯಿತಿ, ಚೆಟ್ಟಿಮಾನಿ ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳಿಂದ ಸಸಿ ನೆಡಲಾಯಿತು. ಪರಿಸರದ ಮಹತ್ವದ ಕುರಿತು ಭಾಗಮಂಡಲ ಅರಣ್ಯ ವಲಯದ ವಲಯ ಅರಣ್ಯ ಅಧಿಕಾರಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕ ರಿಗೆ ಮಾಹಿತಿ ನೀಡಿದರು. ಈ ಸಂದರ್ಭ ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಪಂಚಾಯಿತಿ ಸದಸ್ಯರು, ಗ್ರಾಮಸ್ಥರು, ಶಿಕ್ಷಕರು, ಅರಣ್ಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.ಸಿದ್ದಾಪುರ : ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯ ಮೂಲಕ ಗಿಡಮರಗಳನ್ನು ನೆಟ್ಟು ಪೋಷಿಸುವುದರೊಂದಿಗೆ ಭವಿಷ್ಯಕ್ಕೆ ಇಂದಿ ನಿಂದಲೇ ಪರಿಸರ ಉಳಿವಿಗಾಗಿ ಪಣತೊಡ ಬೇಕಾಗಿದೆ ಎಂದು ಸಿದ್ದಾಪುರದ ಪರಿಸರ ಪ್ರೇಮಿ ರಾಜೇಂದ್ರ ಸಿಂಗ್ ಮನವಿ ಮಾಡಿದರು.
ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘದ ನೇತೃತ್ವದಲ್ಲಿ ತಿತಿಮತಿ ಅರಣ್ಯ ಇಲಾಖೆ, ಮಾಲ್ದಾರೆ ಸರ್ಕಾರಿ ಶಾಲೆಯ ಸಂಯುಕ್ತ ಆಶ್ರಯ ದಲ್ಲಿ ೮ನೇ ವರ್ಷದ ವಿಶ್ವ ಪರಿಸರ ದಿನಾಚರಣೆ ಯನ್ನು ಮಾಲ್ದಾರೆ ಸರ್ಕಾರಿ ಶಾಲಾ ಆವರಣದಲ್ಲಿ ಪರಿಸರ ಕಾಳಜಿಯ ವಿವಿಧ ಕಾರ್ಯಕ್ರಮ ಗಳೊಂದಿಗೆ ನಡೆದ ಸಭೆಯಲ್ಲಿ ರಾಜೇಂದ್ರ ಸಿಂಗ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ಗಾಳಿ ಮಳೆ ವಾಡಿಕೆಯಂತೆ ಬಾರದ ಹಿನ್ನೆಲೆ ಪ್ರಾಣಿಗಳು ಮನುಷ್ಯರ ಮೇಲೆ ವೃತಿರಿಕ್ತ ಪರಿಣಾಮ ಬೀರಿ ಬಿಸಿಲಿನ ಬೇಗೆ ತಾಳಲಾರದೆ ದಾಹ ನೀಗಿಸಿಕೊಳ್ಳಲು ಕುಡಿಯುವ ನೀರು ಇಲ್ಲದೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದಕ್ಕೆ ಪರಿಸರ ನಾಶ ಕಾರಣ ಎಂದು ವಿಷಾದಿಸಿದರು. ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಮಾತನಾಡಿ, ಪ್ರಕೃತಿಯೊಂದಿಗೆ ಜೀವನ ನಡೆಸುವ ಪ್ರಾಣಿ ಪಕ್ಷಿಗಳು ತಮ್ಮದೇ ಆದ ರೀತಿಯಲ್ಲಿ ಬದುಕು ಸಾಗಿಸುತ್ತವೆ. ವಿವಿಧ ಕಾರಣ ಗಳಿಂದ ಅರಣ್ಯ ಪ್ರದೇಶ ಕಡಿಮೆಯಾಗುತ್ತಿರುವುದ ರಿಂದ ಪ್ರಾಣಿ ಪಕ್ಷಿಗಳು ಸ್ವಚ್ಛಂದ ವಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ಅರಣ್ಯ ಪರಿಸರವನ್ನು ಉಳಿಸಿ ಬೆಳೆಸುವ ಮತ್ತು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಕಾಳಜಿ ಅತ್ಯಗತ್ಯವಾಗಿದೆ ಎಂದರು. ಜನಪರ ಸಂಘದ ಅಧ್ಯಕ್ಷ ಬಾವಾ ಮಾಲ್ದಾರೆ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗಿಡ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ಮಾಲ್ದಾರೆ ಗ್ರಾ.ಪಂ. ಉಪಾಧ್ಯಕ್ಷ ಕುಂಞಣ್ಣ, ಉಪ ವಲಯ ಅರಣ್ಯ ಅಧಿಕಾರಿ ಶ್ರೀನಿವಾಸ್, ಮಣಿಕಂಠ, ತಿಮ್ಮಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಈಶ್ವರಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಜಯ್ ಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜು, ಜನಪರ ಸಂಘಟನೆಯ ಮಾಜಿ ಅಧ್ಯಕ್ಷ ಅಂತೋಣಿ, ಕಾರ್ಯದರ್ಶಿ ವಿನೀಲ್, ಶಿಕ್ಷಕರಾದ ಬೋಜಮ್ಮ, ಧನ್ಯ, ಸೋನಿ, ಆರ್.ಆರ್. ಟಿ. ಸಿಬ್ಬಂದಿಗಳು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. ಮಡಿಕೇರಿ : ತಿತಿಮತಿಯ ಲ್ಯಾಂಪ್ಸ್ ಅಕಾಡೆಮಿ ಶಾಲೆಯಲ್ಲಿ ವಿಶ್ವ ಪರಿಸರ ಇಕೋ ಕ್ಲಬ್ ಅನ್ನು ಉದ್ಘಾಟನೆ ಮಾಡಲಾಯಿತು. ತಿತಿಮತಿ ವಲಯ ಅರಣ್ಯಾಧಿಕಾರಿ ದೇವರಾಜು ಡಿ. ಮತ್ತು ಉಪವಲಯ ಅರಣ್ಯಾಧಿಕಾರಿ ಬಾಬಾ ಫರೀದ್ ಹಾಗೂ ಪ್ರಾಂಶುಪಾಲರಾದ ಲತೀಶ್‌ಶಂಕರ್ ಮತ್ತು ಮುಖ್ಯೋಪಾಧ್ಯಾಯರಾರ ಅಪೋಲಿನ್ ಡಿಸೋಜ ಉಪಸ್ಥಿತರಿದ್ದರು.
ವಲಯ ಅರಣ್ಯಾಧಿಕಾರಿಯಾದ ದೇವರಾಜು. ಡಿ ಅವರು ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಹೇಳಿದರು. ವಿದ್ಯಾರ್ಥಿಗಳು ಬೀದಿಗಳಲ್ಲಿ ಪರಿಸರದ ಬಗ್ಗೆ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ‘ಹಸಿರೇ ಉಸಿರು, ಕಾಡು ಬೆಳೆಸಿ ನಾಡು ಉಳಿಸಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಿದರು.ಮಡಿಕೇರಿ : ಮೂರ್ನಾಡು ಮಾರುತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಗಿಡನೆಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಬಡುವಂಡ ಅರುಣ್ ಅಪ್ಪಚ್ಚು, ಪರಿಸರವನ್ನು ಉಳಿಸದಿದ್ದರೆ ಮಾನವನ ಅಸ್ತಿತ್ವಕ್ಕೆ ಧÀಕ್ಕೆ ಉಂಟಾಗುತ್ತದೆ. ನೆಲ, ಜಲ, ಗಿಡ, ಮರಗಳ ಸಂರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕರೆ ನೀಡಿದರು. ಶಿಕ್ಷಕರು, ವಿದ್ಯಾರ್ಥಿಗಳು ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ‘ಪರಿಸರ ಸಂರಕ್ಷಣೆ ನಮ್ಮ ಹೊಣೆ’ ಘೋಷಣೆಗೆ ಸಂಬAಧಿಸಿದ ಕಿರುನಾಟಕ, ಪರಿಸರಗೀತೆ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಪೊನ್ನಂಪೇಟೆ : ಪರಿಸರ ದಿನಾಚರಣೆ ಪ್ರಯುಕ್ತ ಬಲ್ಯಮಂಡೂರು ಗ್ರಾಮ ಪಂಚಾಯಿತಿ ವತಿಯಿಂದ ಬಲ್ಯಮಂಡೂರು ಸ.ಕಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣದಲ್ಲಿ ಹಲವು ರೀತಿಯ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮ ದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್, ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಕೆ.ಪಿ, ಅತಿಥಿ ಶಿಕ್ಷಕಿ ಹಸೀನಾ, ಅಂಗನವಾಡಿ ಕಾರ್ಯಕರ್ತೆ ಪದ್ಮ, ಸಹಾಯಕರಾದ ಸೌಮ್ಯ, ಗ್ರಾ. ಪಂ. ಗ್ರಂಥಾಲಯ ಮೇಲ್ವಿಚಾರಕಿ ಲತಾ, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಹಾಜರಿದ್ದರು.ಚೆಟ್ಟಳ್ಳಿ : ಇಲ್ಲಿನ ಪ್ರೌಢಶಾಲೆಯಲ್ಲಿ ಔಷಧಿ ಸಸ್ಯಗಳು ಹಾಗೂ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು. ಮೊದಲಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪೇರಿಯನ ಜಯಾನಂದ ಹಾಗೂ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಗಿಡಗಳನ್ನು ನೆಟ್ಟು ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳು ಶಾಲಾ ಸುತ್ತಲೂ ಔಷಧಿ ಹಾಗೂ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಟ್ಟರು. ಶಾಲಾ ಮುಖ್ಯ ಶಿಕ್ಷಕಿ ತಿಲಕ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.
*ಗೋಣಿಕೊಪ್ಪ : ತಿತಿಮತಿ ಅರಣ್ಯ ವಲಯದಿಂದ ತಿತಿಮತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ತಿತಿಮತಿ ಉಪವಿಭಾಗದ ಎಸಿಎಫ್ ಕೆ.ಪಿ. ಗೋಪಾಲ್ ಆರ್.ಎಪ್.ಓ. ಗಂಗಾಧರ್, ಪ್ರಾಂಶುಪಾಲ ಚಾರ್ಲ್ಸ್ ಡಿಸೋಜ ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.ಮಡಿಕೇರಿ : ನಗರದ ಕೊಡಗು ವಿದ್ಯಾಲಯ ದಲ್ಲಿ ೪೨ನೇ ವಿಶ್ವ ಪರಿಸರ ದಿನಾಚರಣೆಯನ್ನು ಪ್ರೇರಣಾದಾಯಕ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಸಮಾರಂಭದಲ್ಲಿ ಡಿಸಿಎಫ್ ಭಾಸ್ಕರ್, ಎಸಿಎಫ್ ಮೊಹ್ಸಿನ್ ಭಾಷಾ, ೧೯ನೇ ಕರ್ನಾಟಕ ಬೆಟಾಲಿಯನ್‌ನ ಸಿಎಚ್‌ಎಂ. ರಕ್ಷಿತ್, ಅರಣ್ಯಾಧಿಕಾರಿ ಪೂಜಾಶ್ರೀ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳು, ಪ್ರಾಂಶುಪಾಲೆ ಕೆ. ಎಸ್. ಸುಮಿತ್ರ, ಆಡಳಿತ ವ್ಯವಸ್ಥಾಪಕ ರವಿ ಸಸಿಗೆ ನೀರೆರೆದು ಉದ್ಘಾಟಿಸಿದರು. ಡಿಸಿಎಫ್ ಭಾಸ್ಕರ್ ಮಾತನಾಡಿ, ಪರಿಸರವನ್ನು ರಕ್ಷಿಸುವ ಅಗತ್ಯ ಮತ್ತು ಸರಿಯಾದ ತ್ಯಾಜ್ಯ ವಿನ್ಯಾಸದ ಅಗತ್ಯತೆಯನ್ನು ತಿಳಿಸಿದರು. ಜೈವಿಕ ದ್ರವ್ಯ ತ್ಯಾಜ್ಯವನ್ನು ಗೊಬ್ಬರ ವಾಗಿ ಪರಿವರ್ತಿಸಲು ಅವರು ಸೂಚಿಸಿದರು. ಈ ವರ್ಷದ ವಿಶ್ವ ಪರಿಸರ ದಿನದ ಮುಖ್ಯ ವಿಷಯ "ಭೂಮಿ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಆಗಿದೆ ಎಂದು ಅವರು ಮಾಹಿತಿ ನೀಡಿದರು'. ಎಸಿಎಫ್ ಮೊಹ್ಸಿನ್ ಭಾಷಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜನ್ಮದಿನದಂದು ಒಂದು ಸಸಿಯನ್ನು ನೆಡುವಂತೆ ಪ್ರೋತ್ಸಾಹಿಸಿದರು. ಹೆಚ್ಚು ಸಸಿಗಳನ್ನು ನೆಡುವ ಅಗತ್ಯವನ್ನು ಅತಿಥಿಗಳು ಪ್ರಮುಖವಾಗಿ ಉಲ್ಲೇಖಿಸಿದರು.
ವಿದ್ಯಾರ್ಥಿಗಳು ಅತಿಥಿಗಳೊಂದಿಗೆ ಸೇರಿ ಶಾಲೆಯ ಸುತ್ತಮುತ್ತ ಸಸಿಗಳನ್ನು ನೆಟ್ಟರು. ಎನ್‌ಸಿಸಿ ಕೆಡೆಟ್ ಮತ್ತು ೯ನೇ ತರಗತಿ ಮಕ್ಕಳನ್ನು ರಾಜರ ಗದ್ದುಗೆಗೆ ಕರೆದೊಯ್ಯಲಾಯಿತು, ಅಲ್ಲಿ ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಮತ್ತಷ್ಟು ಅರ್ಥಪೂರ್ಣವಾಗಿ ಆಚರಿಸಲಾಯಿತು.