ಕುಶಾಲನಗರ, ಜೂ. ೧೧: ಜಿಲ್ಲೆಯಿಂದ ಮೈಸೂರು ಕಡೆಗೆ ಲಕ್ಷಾಂತರ ಮೌಲ್ಯದ ಬೀಟೆ ಮರ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸಂದರ್ಭ ಕುಶಾಲನಗರ ಗಡಿಭಾಗದ ಅರಣ್ಯ ತಪಾಸಣಾ ಕೇಂದ್ರದಲ್ಲಿ ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ.

ಕುಶಾಲನಗರ ಕಡೆಯಿಂದ ಮೈಸೂರು ಕಡೆಗೆ ಸಾಗಿಸುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಬೀಟೆ ಮರದ ೨೨ ನಾಟಗಳನ್ನು

(ಮೊದಲ ಪುಟದಿಂದ) ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮುಂಜಾನೆ ಎರಡು ಗಂಟೆ ಬೆಳಿಗ್ಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸಂದರ್ಭ ತಪಾಸಣಾ ಕೇಂದ್ರದ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಬೀಟೆ ಮರದ ನಾಟಾಗಳು ಪತ್ತೆಯಾಗಿವೆ.

ಈ ಸಂದರ್ಭ ಲಾರಿ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ತಿಳಿಸಿದ್ದಾರೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ದೇವಯ್ಯ, ಸಿದ್ದರಾಮ ನಾಟಿಕಾರ್, ಸಾಹೇಬಣ್ಣ ತಳವಾರ್, ತಪಾಸಣಾ ಕೇಂದ್ರದ ಸಿಬ್ಬಂದಿಗಳಾದ ಮೇದಪ್ಪ, ಹೆಚ್.ವಿ. ಧರ್ಮರಾಜು ಪಾಲ್ಗೊಂಡಿದ್ದರು.