ಮಡಿಕೇರಿ, ಜೂ. ೧೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೧೨ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ. ಜಯಲಕ್ಷಿö್ಮ, ಜಿ.ಪಂ. ಸಿ.ಇ.ಓ. ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ್ ಕೆ. ನರ್ವಡೆ ಇತರರು ಪಾಲ್ಗೊಳ್ಳಲಿದ್ದಾರೆ.