ಮಡಿಕೇರಿ, ಜೂ. ೧೧: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ಕೊಡಗು ವಿಶ್ವವಿದ್ಯಾಲ ಯದ ಆಡಳಿತಕ್ಕೆ ಒಳಪಡಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.

ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ೨೦೨೩-೨೪ನೇ ಸಾಲಿನ ಪ್ರತಿಭೋತ್ಸವ ಮತ್ತು ಕಾಲೇಜು ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಡಗು ಸದಾ ಕಾಲ ಉಳಿಯಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊಡಗಿನ ಮಣ್ಣಿನ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಗೆ ಕರೆ ನೀಡಿದರು. ಯುವ ಜನಾಂಗ ದುಶ್ಚಟಗಳಿಂದ ದೂರವಿರಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಎಂತಹ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ ಸಾಧನೆ ಮಾಡಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸಿ.ಬಿ. ರಾಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ಪಾಠಗಳನ್ನು ಪುನರ್‌ಮನನ ಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ದೇಹ ಮನಸ್ಸನ್ನು ದೃಢವಾಗಿಟ್ಟುಕೊಂಡು ಕ್ರೀಡೆ, ಯೋಗ, ಧ್ಯಾನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಬೇಕೆಂದು ಸಲಹೆಯಿತ್ತರು.

ಚಲನಚಿತ್ರ ನಿರ್ದೇಶಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಪೋಷಕರನ್ನು, ಗುರು ಹಿರಿಯರನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಯಾರನ್ನೂ ಕೀಳಾಗಿ ಕಾಣಬಾರದು, ಉತ್ತಮ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕೆಂದು ನುಡಿದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ. ಸೀನಪ್ಪ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳುವಂತಾಗಬೇಕೆAದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಡವ ಎಂ.ಎ. ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಬಿ.ಎನ್. ಹೇಮಾವತಿ, ಪಿಜಿ ಡಿಪ್ಲೋಮಾ ಯೋಗ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ವೈ.ಆರ್. ಶಶಿಕಿರಣ್, ಮಂಗಳೂರು ವಿವಿ ಪದವಿ ಹಂತದಲ್ಲಿ ಸೂಕ್ಷö್ಮ ವಿಜ್ಞಾನ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಹಿಬಾತುಲ್ ಬಾರಿ, ಎಂ.ಎ. ಅರ್ಥಶಾಸ್ತçದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಕೆ.ಎ. ಗ್ರೀಷ್ಮಾ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪಿ.ಎಲ್. ಧರ್ಮ ಅವರನ್ನು ಸನ್ಮಾನಿಸಲಾಯಿತು. ದಾನಿಗಳಾದ ಮುದ್ದಪ್ಪ, ಶಾಜಿ ಮಾಥ್ಯು, ಪ್ರಮೋದ್ ರೈ ಇವರುಗಳನ್ನು ಸನ್ಮಾನಿಸಲಾಯಿತು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಅರ್ಥಶಾಸ್ತç ಉಪನ್ಯಾಸಕಿ ರೇಣುಶ್ರೀ ಕಾಲೇಜಿನ ವಾರ್ಷಿಕ ವರದಿ ಮಂಡಿಸಿದರು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಅತಿಥಿಗಳು ಭೂರಮೆ ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಿದರು.

ವೇದಿಕೆಯಲ್ಲಿ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಅಶೋಕ ಸಂಗಪ್ಪ ಆಲೂರ, ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಬಿ.ಹೆಚ್. ತಳವಾರ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿ, ತಮಿಝ, ಅಜಿತ್ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ರಾಘವ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ತೀರ್ಥ ತಂಗಮ್ಮ ವಂದಿಸಿದರು.