ಮಡಿಕೇರಿ: ವಿದ್ಯಾರ್ಥಿ ಜೀವನದಲ್ಲಿರುವಾಗಲೇ ಪರಿಸರದ ಬಗ್ಗೆ ಹೆಚ್ಚಿನ ಅರಿವು ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿ.ಪಂ. ಸಿಇಓ ವರ್ಣಿತ್ ನೇಗಿ ತಿಳಿಸಿದರು.

ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗಾಳಿಬೀಡು ಗ್ರಾಮ ಪಂಚಾಯಿತಿಯ ಚಪ್ಪಂಡ ಕೆರೆ ಅಮೃತ ಸರೋವರ ದಂಡೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಮಕ್ಕಳೆಲ್ಲರೂ ಪರಿಸರ ನಾಯಕರು ಎಂದು ಬಣ್ಣಿಸಿದರು. ಗಿಡ ನೆಡುವುದು ಮಾತ್ರವೇ ಪರಿಸರ ಸಂರಕ್ಷಣೆಯಲ್ಲ. ವಿದ್ಯುತ್‌ನ ಮಿತ ಬಳಕೆ, ಇಂಧನಗಳ ಮಿತ ಬಳಕೆ ಇವೂ ಸಹ ಪರಿಸರ ಸಂರಕ್ಷಣೆಯ ಪ್ರಮುಖ ಭಾಗವಾಗಿದೆ ಎಂದರು.

ಇದೇ ವೇಳೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಚಪ್ಪಂಡ ಕೆರೆ ಅಮೃತ ಸರೋವರದ ದಂಡೆಯಲ್ಲಿ ಮಾವು, ಹಲಸು ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು. ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

ಗಾಳಿಬೀಡು ಗ್ರಾ.ಪಂ. ಅಧ್ಯಕ್ಷೆ ಬಿ.ಜಿ. ಉಷಾ, ಜಿ.ಪಂ. ಉಪ ಕಾರ್ಯದರ್ಶಿ ಜಿ. ಧನರಾಜು, ತಾ.ಪಂ. ಇಒ ನಾಗಮಣಿ, ಸಹಾಯಕ ನಿರ್ದೇಶಕ ಹೇಮಂತ್, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಮಹೇಂದ್ರ, ತಾಂತ್ರಿಕ ಸಂಯೋಜಕ ದಿಲೀಪ್, ತಾಲೂಕು ಎಂಐಎಸ್ ಸಂಯೋಜಕಿ ಬಿನ್ಸಿ, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.ಗೋಣಿಮರೂರು: ಗೋಣಿಮರೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.ಗೋಣಿಮರೂರು: ಗೋಣಿಮರೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ, ಎಸ್‌ಡಿಎಂಸಿ ಸದಸ್ಯರು, ಮುಖ್ಯ ಶಿಕ್ಷಕರು, ಪಿಡಿಓ ಹಾಗೂ ಪೋಷಕರು, ಶಿಕ್ಷಕರು ಮತ್ತು ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ಪೊನ್ನಂಪೇಟೆ: ಕೂರ್ಗ್ ಪಬ್ಲಿಕ್ ಶಾಲೆ ಮತ್ತು ಕೂರ್ಗ್ ಪಬ್ಲಿಕ್ ಪಿ.ಯು. ಕಾಲೇಜು ವತಿಯಿಂದ ವಿಶ್ವ ಪರಿಸರ ದಿನವನ್ನು ಗೋಣಿಕೊಪ್ಪಲು ಸಮೀಪದ ಹಾತೂರಿನ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಪ್ಸ್ ಮತ್ತು ಕೂರ್ಗ್ ಪಬ್ಲಿಕ್ ಪಿಯು ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು, ಸ್ಕೌಟ್ ಅಂಡ್ ಗೈಡ್, ರೇಂಜರ್ ಅಂಡ್ ರೋವರ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಾತೂರು ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ನಂತರ ಹಾತೂರು ಶಾಲೆಯ ಆವರಣದಲ್ಲಿ ಕಾಪ್ಸ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡರು. ಈ ಕಾರ್ಯಕ್ರಮದಲ್ಲಿ ಎನ್‌ಸಿಸಿ ಘಟಕದ ಅಧಿಕಾರಿಗಳಾದ ಕ್ಯಾಪ್ಟನ್ ಬಿ.ಎಂ. ಗಣೇಶ್, ಲೆಫ್ಟಿನೆಂಟ್ ಕಿಶೋರ್ ಕುಮಾರ್, ರೇಂಜರ್ ಲೀಡರ್ ಪುಷ್ಪ ಅಶೋಕ್, ಕಾಪ್ಸ್ ಇಕೋ ಕ್ಲಬ್‌ನ ಮುಖ್ಯಸ್ಥ ಬೆಳ್ಯಪ್ಪ, ಹಾತೂರು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆಡೆಟ್ ಮನೋಜ್ ಸ್ವಾಗತಿಸಿದರು. ಕೆಡೆಟ್ ಆರ್ಯನ್ ಶ್ರೀನಿವಾಸನ್ ವಂದಿಸಿದರು.

ನಂತರ ಗೋಣಿಕೊಪ್ಪಲಿನ ಕಾಪ್ಸ್ ಕಲಾ ಮಂಚಿನಲ್ಲಿ ನಡೆದ ವಿಶ್ವ ಪರಿಸರ ದಿನದ ವಿಶೇಷ ಕಾರ್ಯಕ್ರಮದಲ್ಲಿ ಕಾಪ್ಸ್ ಪ್ರಾಂಶುಪಾಲ ಡಾ. ರಾಮಚಂದ್ರನ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿಗೆ ಸಂಬAಧಿಸಿದ ವಿವಿಧ ಕಾರ್ಯಕ್ರಮಗಳು ಜರುಗಿದವು.ಕರಿಕೆ: ಇಲ್ಲಿನ ಸರಕಾರಿ ವಾಲ್ಮೀಕಿ ಆಶ್ರಮ ಶಾಲೆ ಆವರಣದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು. ಭಾಗಮಂಡಲ ವಲಯ, ಕರಿಕೆ ಉಪವಲಯದ ಅರಣ್ಯ ಸಿಬ್ಬಂದಿಗಳು ಕಾರ್ಯಕ್ರಮ ಆಯೋಜಿಸಿದ್ದರು.

ಶಾಲಾ ಆವರಣದಲ್ಲಿ ಸೀಬೆ, ಮಾವು, ಹೊಂಗೆ, ನೇರಳೆ ಗಿಡಗಳನ್ನು ವಿದ್ಯಾರ್ಥಿಗಳಿಂದ ನೆಡಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ

ಮಡಿಕೇರಿ: ವಿಶ್ವ ಪರಿಸರ ದಿನದ ಅಂಗವಾಗಿ ವೀರಾಜಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಲಾಯಿತು.

ಮನರೇಗಾ ಸಹಾಯಕ ನಿರ್ದೇಶಕ ಎಂ.ಡಿ. ಶ್ರೀನಿವಾಸ್ ಗಿಡಗಳನ್ನು ಸಾಂಕೇತಿಕವಾಗಿ ನೆಡುವುದರ ಮೂಲಕ ಚಾಲನೆ ನೀಡಿ, ನೀರಿನ ಸಂರಕ್ಷಣೆ ಹಾಗೂ ಉಳಿವಿಗಾಗಿ ಮನರೇಗಾ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೆರೆಗಳ ದಡದಲ್ಲಿ ಅಲಂಕಾರಿಕ ಹಾಗೂ ನೆರಳು ನೀಡುವ ಸಸಿಗಳನ್ನು ಬೆಳೆಸುವುದು ಸೂಕ್ತವಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಹುದಿಕೇರಿ ಅಧ್ಯಕ್ಷೆ ಕಾವೇರಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಅನಿಲ್, ತಾಂತ್ರಿಕ ಸಹಾಯಕ ಅಭಿಯಂತರರಾದ ನಿರಂಜನ್, ಹೇಮಂತ್, ತಾಲೂಕು ಸಂಯೋಜಕ ನರೇಂದ್ರ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ನಮ್ಮ ಪರಿಸರ ಉಳಿಸುವುದರೊಂದಿಗೆ ಜಲಮೂಲಗಳನ್ನು ಮಲೀನರಹಿತಗೊಳಿಸಿ ಕಲುಷಿತಗೊಳಿಸುವುದನ್ನು ತಡೆಯುವ ಕೆಲಸಕ್ಕೆ ಪಣತೊಡಬೇಕೆಂದು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ ಕರೆ ನೀಡಿದರು.

ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶ್ರೀಶಾ, ನಾವು ಮೊದಲು ಪರಿಸರ ಸ್ನೇಹಿಗಳಾಗೋಣ ಅಗತ್ಯಗಳಿಗಷ್ಟೇ ಸಂಪನ್ಮೂಲಗಳನ್ನು ಉಳಿಸಿ ಬಳಸುವಂತಾಗಬೇಕು. ನಮ್ಮ ಪೂರ್ವಿಕರು ನಮ್ಮಗೆ ನೀಡಿರುವ ಈ ಸುಂದರ ಪರಿಸರವನ್ನು ಮುಂದಿನ ಪಿಳಿಗೆಗೂ ಉಳಿಸಿಕೊಳ್ಳುವ ಕಾರ್ಯಕ್ಕೆ ನಾವು ಸನ್ನದ್ಧರಾಗಬೇಕೆಂದರು. ಕಾವೇರಿ ನದಿಗೆ ಕಲುಷಿತ ನೀರನ್ನು ಬಿಡಬಾರದು ನದಿ ಮೂಲಗಳನ್ನು ನಾವುಗಳು ಸಂರಕ್ಷಿಸಬೇಕೆAದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ. ಶ್ರೀಧರ್ ಹಾಗೂ ಅಪರಾಧ ವಿಭಾಗದ ಎಸ್.ಐ. ನಾಗರಾಜು ಅವರು ಠಾಣಾವರಣದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭ ಎ.ಎಸ್.ಐ. ತೀರ್ಥಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್, ಗ್ರಾಮಸ್ಥರಾದ ಧನು ಕಾವೇರಪ್ಪ, ಪ್ರಶಾಂತ್, ತ್ಯಾಗರಾಜು ಮತ್ತಿತರರು ಇದ್ದರು.ಶನಿವಾರಸಂತೆ: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು.

ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು ಹಸಿರು ಬಣ್ಣದ ಉಡುಗೆಯನ್ನು ಧರಿಸಿದ್ದು ಕಾರ್ಯಕ್ರಮಕ್ಕೆ ಮೆರಗು ತಂದರು. ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಂಗರಾಜ್ ಮಾತನಾಡಿ, ಪರಿಸರ ದಿನದ ಆಚರಣೆಯ ಮಹತ್ವವನ್ನು ತಿಳಿಸಿದರು. ನಂತರ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಯಲ್ಲಿ ವಿವಿಧ ಬಗೆಯ ಹಣ್ಣುಗಳ ಗಿಡಗಳನ್ನು ನೆಟ್ಟು ನೀರೆರೆದು ಸಂಭ್ರಮಿಸಿದರು. ಮುಖ್ಯಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಂಗರಾಜ್ ಮಾತನಾಡಿ, ಪರಿಸರ ದಿನದ ಆಚರಣೆಯ ಮಹತ್ವವನ್ನು ತಿಳಿಸಿದರು. ನಂತರ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಯಲ್ಲಿ ವಿವಿಧ ಬಗೆಯ ಹಣ್ಣುಗಳ ಗಿಡಗಳನ್ನು ನೆಟ್ಟು ನೀರೆರೆದು ಸಂಭ್ರಮಿಸಿದರು. ಮುಖ್ಯಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.ಮಧುಕುಮಾರ್ ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಘೋಷಣೆಗಳನ್ನು ಹೇಳಿ ಜಾಗೃತಿ ಮೂಡಿಸಿದರು. ಮುಖ್ಯಶಿಕ್ಷಕಿ ನಳಿನಿ, ಶಿಕ್ಷಕರಾದ ಮಾರುತಿ ಅರೇರ್, ಎಂ.ವಿ. ರೂಪಾ, ಪ್ರಿಯಾಂಕಾ ಚಿಪಳೂಣಕರ್, ಮಹಾದೇವಿ, ದೈಹಿಕ ಶಿಕ್ಷಣ ಶಿಕ್ಷಕ ಡಿ.ಸಿ. ಕುಶಾಲಪ್ಪ, ಅತಿಥಿ ಶಿಕ್ಷಕಿ ಗೀತಾ ಹಾಜರಿದ್ದರು.ಹರದೂರು ಗ್ರಾಮ ಪಂಚಾಯಿತಿ

ಐಗೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹರದೂರು ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಹರದೂರು ಗ್ರಾ.ಪಂ. ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ಸಲೀಂ ಹೊಸತೋಟ ಮತ್ತು ಪಿ.ಡಿ.ಓ. ಪೂರ್ಣಿಮಾ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.ನೇರುಗಳಲೆ: ಸೋಮವಾರಪೇಟೆ ಸಮೀಪದ ಸರಕಾರಿ ಪ್ರೌಢಶಾಲೆ ನೇರುಗಳಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ನಾಪೋಕ್ಲು: ಭಾರತೀಯ ಜನತಾ ಪಕ್ಷದ ಮಡಿಕೇರಿ ಗ್ರಾಮಾಂತರ ಮಂಡಲ ಓಬಿಸಿ ವತಿಯಿಂದ ನಾಪೋಕ್ಲು ಗ್ರಾಮದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಡಿಕೇರಿ ಗ್ರಾಮಾಂತರ ಮಂಡಲ ಓಬಿಸಿ ಅಧ್ಯಕ್ಷ ಬಿ.ಎಂ. ಪ್ರತೀಪ್ ನೇತೃತ್ವ ವಹಿಸಿದ್ದು, ಕಾರ್ಯಕ್ರಮದಲ್ಲಿ ಇಲ್ಲಿಯ ಚೋನಕೆರೆ ಸಮೀಪದ ಹಿಂದುಳಿದ ವರ್ಗಗಳ ಕುಟುಂಬಗಳ ಜಮೀನಿನಲ್ಲಿ ವಿವಿಧ ಜಾತಿಯ ನೂರಾರು ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಚನಿಯ, ಸುಬ್ಬಯ್ಯ, ಸುನಿತಾ, ತಿಮ್ಮಯ್ಯ, ಕಲ್ಲೇಂಗಡ ಮೀರು ಸೇರಿದಂತೆ ಇತರರು ಇದ್ದರು.