ಸೋಮವಾರಪೇಟೆ, ಜೂ. ೧೨: ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ವಿವಿಧ ದೇವರುಗಳ ವೆಳ್ಳಾಟಂ ನಡೆಯಿತು. ಮೂರು ದಿನಗಳ ಕಾಲ ನಡೆದ ಧಾರ್ಮಿಕ ವಿಧಿ ವಿಧಾನಗಳಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯದಲ್ಲಿ ನಡೆದ ಮುತ್ತಪ್ಪ ಕೋಲ ಭಕ್ತಿಯ ಪರಾಕಾಷ್ಠೆಗೆ ಸಾಕ್ಷಿಯಾಯಿತು.