ಕುವೈತ್‌ನಲ್ಲಿ ಅಗ್ನಿ ಅವಘಡ; ೪೦ ಮಂದಿ ಸಜೀವ ದಹನ
ಮಂಗಾಫ್(ಕುವೈತ್), ಜೂ. ೧೨: ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಟ ೪೦ ಮಂದಿ ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ. ವರದಿಗಳ ಪ್ರಕಾರ, ಈ ದುರಂತ ಘಟನೆಯಲ್ಲಿ ಕನಿಷ್ಟ ನಾಲ್ವರು ಭಾರತೀಯರು ಸಹ ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿ ಮಲಯಾಳಂ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೃತರಲ್ಲಿ ಹೆಚ್ಚಿನವರು ತಮಿಳುನಾಡು ಮತ್ತು ಕೇರಳದವರು ಎಂದು ಹೇಳಲಾಗಿದೆ. ಕುವೈತ್ ಆರೋಗ್ಯ ಸಚಿವಾಲಯ ಹೊರಡಿಸಿದ ಹೇಳಿಕೆಯ ಪ್ರಕಾರ, ಸುಮಾರು ೩೦ ಮಂದಿಗೆ ಸುಟ್ಟ ಗಾಯಗಳಾಗಿದ್ದು, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ದುರಂತ ದಲ್ಲಿ ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ಸೇವೆಯನ್ನು ಒದಗಿಸಲು ವೈದ್ಯಕೀಯ ತಂಡಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಸಚಿವಾಲಯ ಹೇಳಿದೆ. ಬುಧವಾರ ಮುಂಜಾನೆ ೪.೩೦ಕ್ಕೆ ಕಾರ್ಮಿಕ ಶಿಬಿರದ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವರು ಬೆಂಕಿಯನ್ನು ನೋಡಿ ಅಪಾರ್ಟ್ಮೆಂಟ್‌ಗಳಿAದ ಹಾರಿ ಸಾವನ್ನಪ್ಪಿದರೆ, ಇನ್ನು ಕೆಲವರು ಸುಟ್ಟಗಾಯ ಮತ್ತು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಯಡಿಯೂರಪ್ಪ ಬಂಧನ ಕೋರಿ ರಿಟ್ ಅರ್ಜಿ
ಬೆಂಗಳೂರು, ಜೂ. ೧೨: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಿರುದ್ಧ ಲೋಕಸಭಾ ಚುನಾವಣೆಗೂ ಮುನ್ನಾ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕೆAದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಕೇಸ್ ದಾಖಲಿಸಿ ಹಲವು ತಿಂಗಳು ಕಳೆದಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ದೂರಿದ್ದ ಸಂತ್ರಸ್ತೆಯ ಮೇ ೨೬ ರಂದು ಮೃತಪಟ್ಟಿದ್ದರು. ಯಡಿಯೂರಪ್ಪ ನಿವಾಸದ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಪೋಕ್ಸೋ ಕಾಯ್ದೆಯ ಸೆಕ್ಷನ್ ೪೧ ಎ ಅಡಿಯಲ್ಲಿ ಬಿಜೆಪಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ದೂರುದಾರರು ಹೇಳಿದ್ದಾರೆ. ಈ ಹಿಂದೆ ಯಡಿಯೂರಪ್ಪ ಕೂಡ ತಮ್ಮ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತಾವು ಯಾವುದೇ ಕಾನೂನು ಬಾಹಿರ ಕೃತ್ಯವೆಸಗಿಲ್ಲ, ದೂರುದಾರರಿಗೆ ದೂರು ನೀಡುವ ಅಭ್ಯಾಸವಿದೆ ಎಂದು ಅರ್ಜಿಯಲ್ಲಿ ಹೇಳಿದ್ದರು. ಎಫ್‌ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಧ್ವನಿ ಮಾದರಿಗಳನ್ನು ಸಂಗ್ರಹಿಸಿದ್ದರು ಆದರೆ ನನ್ನ ಹೇಳಿಕೆಯನ್ನು ದಾಖಲಿಸಿಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಮಾರ್ಚ್ನಲ್ಲಿ ಸಂತ್ರಸ್ತೆಯ ತಾಯಿ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿದಂತೆ ೫೩ ಜನರ ವಿರುದ್ಧ ದೂರು ದಾಖಲಿಸಿದ್ದರು.
ಬನ್ನೇರುಘಟ್ಟದಲ್ಲಿ ತಿಂಗಳಾAತ್ಯಕ್ಕೆ ಚಿರತೆ ಸಫಾರಿ ಆರಂಭ!
ಬೆAಗಳೂರು, ಜೂ. ೧೨: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ದಕ್ಷಿಣ ಭಾರತದಲ್ಲಿಯೇ ಮೊದಲ ಚಿರತೆ ಸಫಾರಿಯನ್ನು ಜೂನ್ ಅಂತ್ಯದೊಳಗೆ ಆರಂಭಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಹೇಳಿದ್ದಾರೆ. ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ ೧೫೬ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು. ಉದ್ಯಾನದಲ್ಲಿ ಲಭ್ಯವಿರುವ ಸಿಂಹ ಮತ್ತು ಹುಲಿ ಸಫಾರಿಯಂತೆಯೇ ಚಿರತೆ ಸಫಾರಿ ಕೂಡ ಇರಲಿದ್ದು, ಜೂನ್ ಮೂರನೇ ವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಹೇಳಿದರು. ಸಫಾರಿಯಲ್ಲಿರುವ ಎಲ್ಲಾ ಚಿರತೆಗಳನ್ನು ಪ್ರಾಣಿ ಸಂಗ್ರಹಕಾರರು ರಕ್ಷಿಸಿದ್ದಾರೆ. ೨೦ ಹೆಕ್ಟೇರ್‌ಗಳಲ್ಲಿ ಹರಡಿರುವ ಸಫಾರಿ ಪ್ರದೇಶವು ಬೇಲಿಯಿಂದ ಕೂಡಿದೆ. ಒಟ್ಟು ೧೩ ಚಿರತೆಗಳು ಸರದಿಯ ಆಧಾರದ ಮೇಲೆ ೨-೩ ಗುಂಪುಗಳಲ್ಲಿ ಪ್ರದರ್ಶನಗೊಳ್ಳಲಿವೆ. ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು ೧೫ ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು. ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ ರೂ. ೧೫೦ ಮತ್ತು ವೀಡಿಯೋ ಕ್ಯಾಮೆರಾಗೆ ರೂ. ೩೦೦ ದರ ವಿಧಿಸಲು ಅನುಮತಿಸಲಾಗಿದೆ. ಅದೇ ರೀತಿ ಬನ್ನೇರುಘಟ್ಟ ರಾಷ್ಟಿçÃಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು ಎಂದು ತಿಳಿಸಿದರು.
೩೦೦ ಕೋಟಿ ಆಸ್ತಿ ಲಪಟಾಯಿಸಲು ಮಾವನ ಹತ್ಯೆ ಮಾಡಿಸಿದ ಸೊಸೆ!
ನಾಗ್ಪುರ, ಜೂ. ೧೨: ನಾಗ್ಪುರದಲ್ಲಿ ಸಂಭವಿಸಿದ್ದ ಅವಘಡ (ಹಿಟ್ & ರನ್) ಪ್ರಕರಣದ ಹಿಂದೆ ವ್ಯವಸ್ಥಿತ ಸಂಚು ಇದ್ದುದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೇಲ್ನೋಟಕ್ಕೆ ಇದೊಂದು ಹಿಟ್ & ರನ್ ಪ್ರಕರಣ ಎನಿಸಿದರೂ, ನೈಜವಾಗಿ ೩೦೦ ಕೋಟಿ ರೂಪಾಯಿಗಳ ಆಸ್ತಿಗಾಗಿ ಸೊಸೆ ತನ್ನ ಮಾವನನ್ನು ೧ ಕೋಟಿ ರೂಪಾಯಿ ಕೊಟ್ಟು ಕೊಲ್ಲಿಸಿರುವ ಕೇಸ್ ಇದಾಗಿದೆ. ನಗರ ಯೋಜನೆ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಅರ್ಚನ ಮನೀಷ್ ಪುಟ್ಟೇವಾರ್ ಅವರ ಮಾವ ಪುರುಷೋತ್ತಮ್ ಪುಟ್ಟೇವಾರ್ ಕಾರು ಅಪಘಾತದಲ್ಲಿ ನಿಧನರಾದ ಪ್ರಕರಣದಲ್ಲಿ ಸೊಸೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ, ಹಿಟ್&ರನ್ ಪ್ರಕರಣದಂತೆ ಮಾಡಿ ಪುರುಷೋತ್ತಮ್ ಪುಟ್ಟೇವಾರ್ ಅವರನ್ನು ಹತ್ಯೆ ಮಾಡುವುದಕ್ಕಾಗಿ ಅರ್ಚನಾ ಪುಟ್ಟೇವಾರ್ ೧ ಕೋಟಿ ರೂಪಾಯಿ ಖರ್ಚು ಮಾಡಿ ಒಂದಷ್ಟು ಜನರನ್ನು ನೇಮಕ ಮಾಡಿದ್ದರು. ೫೩ ವರ್ಷದ ಮಹಿಳೆ ತನ್ನ ಗಂಡನ ಚಾಲಕ ಬಾಗ್ಡೆ ಮತ್ತು ಇತರ ಇಬ್ಬರು ಆರೋಪಿಗಳಾದ ನೀರಜ್ ನಿಮ್ಜೆ ಮತ್ತು ಸಚಿನ್ ಧಾರ್ಮಿಕ್ ಅವರೊಂದಿಗೆ ಕೊಲೆಗೆ ಸಂಚು ರೂಪಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಅವರ ವಿರುದ್ಧ ಐಪಿಸಿ ಮತ್ತು ಮೋಟಾರು ವಾಹನ ಕಾಯ್ದೆಯಡಿ ಕೊಲೆ ಮತ್ತು ಇತರ ಸೆಕ್ಷನ್‌ಗಳ ಆರೋಪ ಹೊರಿಸಿದ್ದಾರೆ. ಎರಡು ಕಾರು, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇಟಲಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ
ರೋಮ್, ಜೂ. ೧೨: ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನಾ ಇಟಲಿಯಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಜಿ-೭ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ನಾಳೆ ಇಟಲಿಗೆ ತೆರಳುತ್ತಿದ್ದಾರೆ. ಈ ಮಧ್ಯೆ ಖಲಿಸ್ತಾನಿ ಪ್ರತ್ಯೇಕತವಾದಿಗಳಿಂದ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಸಲಾಗಿದೆ. ಘಟನೆ ಖಂಡಿಸಿರುವ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಘಟನೆ ಕುರಿತು ಇಟಲಿಯ ವಿದೇಶಾಂಗ ಇಲಾಖೆಗೆ ತಿಳಿಸಲಾಗಿದೆ. ಈ ಮಧ್ಯೆ ಇಟಲಿ ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಟಲಿಯ ಭಾರತದ ರಾಯಭಾರಿ ವಾಣಿ ರಾವ್, ದಕ್ಷಿಣ ಇಟಲಿಯಲ್ಲಿರುವ ಬ್ರಿಂಡಿಸಿಯಲ್ಲಿ ಈ ಘಟನೆ ನಡೆದಿದೆ.