ಮಡಿಕೇರಿ, ಜೂ. ೧೨: ಪಿಂಚಣಿ ಅದಾಲತ್‌ನ ಸಭೆ ತಾ. ೧೪ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಅಶೋಕಪುರದ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ.

ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬAಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ತಾ. ೧೪ ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.