ಯಡಿಯೂರಪ್ಪರನ್ನು ಬಂಧಿಸದAತೆ ಹೈಕೋರ್ಟ್ ಸೂಚನೆ

ಬೆಂಗಳೂರು, ಜೂ. ೧೪: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದAತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ತಾ. ೧೭ ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ. ಪ್ರಕರಣಕ್ಕೆ ಸಂಬAಧಿಸಿ ಜೂನ್ ೧೫ ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ ೪೨ನೇ ಎಸಿಎಂಎA ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆÀಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.

ರಫೇಲ್ ಜೆಟ್‌ಗಳ ಖರೀದಿ ಒಪ್ಪಂದದ ಕುರಿತು ಚರ್ಚೆ

ನವದೆಹಲಿ, ಜೂ. ೧೪: ಭಾರತೀಯ ನೌಕಾಪಡೆಗೆ ೨೬ ರಫೇಲ್ ಜೆಟ್‌ಗಳ ಖರೀದಿ ಒಪ್ಪಂದದ ಕುರಿತಂತೆ ಬೆಲೆ ಮತ್ತು ಇತರ ಸಂಬAಧಿತ ವಿಷಯಗಳ ಕುರಿತಾಗಿ ಭಾರತ ಮತ್ತು ಫ್ರಾನ್ಸ್ ಅಧಿಕಾರಿಗಳು ಮಾತುಕತೆ ಆರಂಭಿಸಿದ್ದಾರೆ. ಮೇ ೩೦ ರಂದೇ ಮಾತುಕತೆ ನಡೆಯಬೇಕಿತ್ತು. ಆದರೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೂನ್ ಎರಡನೇ ವಾರಕ್ಕೆ ಮಾತುಕತೆ ಮುಂದೂಡಲಾಗಿತ್ತು. ಭಾರತಕ್ಕೆ ರಫೇಲ್ ಯುದ್ಧ ವಿಮಾನ ಮಾರಾಟದ ನಿರ್ವಹಣೆ ಮಾಡುವ ಫ್ರಾನ್ಸ್ ಯುದ್ಧೋಪಕರಣ ವಿಭಾಗದ ಡಿಜಿ ಸೇರಿದಂತೆ ಫ್ರೆಂಚ್ ನಿಯೋಗವು ನವದೆಹಲಿಗೆ ಬಂದಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ. ಈ ಖರೀದಿ ಯೋಜನೆಯು ಸುಮಾರು ರೂ. ೫೦,೦೦೦ ಕೋಟಿ ಮೊತ್ತದ್ದಾಗಿದ್ದು, ಇವುಗಳ ಖರೀದಿ ಬಳಿಕ ಭಾರತದಲ್ಲಿ ರಫೇಲ್ ಯುದ್ಧ ವಿಮಾನಗಳ ಸಂಖ್ಯೆ ೬೦ ದಾಟಲಿದೆ. ಈಗ ಭಾರತದಲ್ಲಿ ೩೬ ರಫೇಲ್ ಯುದ್ಧ ವಿಮಾನಗಳಿವೆ. ನೌಕಾಪಡೆಗಾಗಿ ಖರೀದಿಸಲಾಗುತ್ತಿರುವ ಈ ಹೊಸ ಯುದ್ಧ ವಿಮಾನಗಳನ್ನು ಐಎನ್‌ಎಸ್ ವಿಕ್ರಮಾದಿತ್ಯ ಮತ್ತು ಐಎನ್‌ಎಸ್ ವಿಕ್ರಾಂತ್ ಯುದ್ಧನೌಕೆಗಳ ಮೂಲಕ ಕಾರ್ಯಾಚರಣೆ ನಡೆಸಬಹುದಾಗಿದೆ. ೨೬ ರಫೇಲ್ ಮರೈನ್ ಜೆಟ್ ಖರೀದಿ ಕುರಿತಾದ ಭಾರತದ ಪ್ರಸ್ತಾವನೆಗೆ ಫ್ರಾನ್ಸ್ ತನ್ನ ಪ್ರತಿಕ್ರಿಯೆ ಸಲ್ಲಿಸಿದೆ.

ಆರೋಪಿಗಳಿಗೆ ನೀಡಲು ಇಟ್ಟಿದ್ದ ರೂ. ೩೦ ಲಕ್ಷ ವಶಕ್ಕೆ

ಬೆಂಗಳೂರು, ಜೂ. ೧೪: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನಟ ದರ್ಶನ್ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್‌ವೊAದರಲ್ಲಿ ಇರಿಸಿದ್ದ ರೂ. ೩೦ ಲಕ್ಷ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಆರ್.ಆರ್. ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ ೩೦ ಲಕ್ಷ ಹಣ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಈ ಹಣ ಕೊಲೆ ಆರೋಪ ಹೊರುವ ಯುವಕರಿಗೆ ನೀಡಲು ಇಟ್ಟಿದ್ದ ಹಣ ಎನ್ನಲಾಗಿದೆ. ಕೊಲೆ ನಾವೇ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿಗೆ ತಲಾ ೫ ಲಕ್ಷ ನೀಡಲು ಹಣ ಇಡಲಾಗಿತ್ತು.

೪೫ ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮತಿ

ಬೆಂಗಳೂರು, ಜೂ. ೧೪: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ೩೫ ಸಾವಿರ ಮತ್ತು ಪ್ರೌಢಶಾಲೆಗಳಿಗೆ ೧೦ ಸಾವಿರ ಸೇರಿ ಒಟ್ಟು ೪೫ ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ರಾಜ್ಯದಲ್ಲಿ ಸುಮಾರು ೪೯,೬೭೯ ಸರ್ಕಾರಿ ಶಾಲೆಗಳಲ್ಲಿ ಹಲವು ಹುದ್ದೆಗಳು ಬಹಳ ಸಮಯದಿಂದ ಖಾಲಿ ಇತ್ತು. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎದ್ದಿದ್ದವು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಿಂದ ಪ್ರಾರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಹುದ್ದೆ ಭರ್ತಿಗೆ ಅನುಮತಿ ನೀಡಿದೆ. ಅತಿಥಿ ಉಪನ್ಯಾಸಕರ ನೇಮಕ ವಿಚಾರ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದ ನೇಮಕಾತಿಗೆ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆಯು ಶಾಲೆಗಳ ಮುಖ್ಯ ಶಿಕ್ಷಕರನ್ನು (ಹೆಚ್‌ಎಂ) ನಿಯೋಜಿಸಿದೆ.

ಆಂಧ್ರಪ್ರದೇಶದ ಡಿಸಿಎಂ ಆಗಿ ಪವನ್ ಕಲ್ಯಾಣ್

ಅಮರಾವತಿ, ಜೂ. ೧೪: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಶುಕ್ರವಾರ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ಪರಿಸರ ಮತ್ತು ಅರಣ್ಯ ಖಾತೆಯನ್ನು ನೀಡಲಾಗಿದೆ.

ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ, ಜೂ. ೧೪: ಅಬಕಾರಿ ಹಗರಣಕ್ಕೆ ಸಂಬAಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಜೂನ್ ೧೯ಕ್ಕೆ ನಿಗದಿಪಡಿಸಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯೆ ಸಲ್ಲಿಸಲು ಇ.ಡಿ. ಕಾಲಾವಕಾಶ ಕೋರಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮುಖೇಶ್ ಕುಮಾರ್ ಪ್ರಕರಣವನ್ನು ಮುಂದೂಡಿದರು.