ಮಡಿಕೇರಿ: ಸಂತ ಮೈಕಲರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಚಾಲಕ ರೆ.ಫಾ. ಸಂಜಯ್‌ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬನ ಆದ್ಯ ಕರ್ತವ್ಯ. ಅರಣ್ಯದಲ್ಲಿ ಸಸಿಗಳನ್ನು ನೆಡುವ ಮೂಲಕ ಅರಣ್ಯವನ್ನು ಅಭಿವೃದ್ಧಿಪಡಿಸಬಹುದು ಎಂದರು.

ಪ್ರೌಢಶಾಲಾ ವಿದ್ಯಾರ್ಥಿನಿ ಬಿ.ಸಿ. ಅವನಿಕಾ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ವಿಶ್ವ ಪರಿಸರ ದಿನಾಚರಣೆಯ ಕುರಿತು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕೆ.ಜಿ. ಸಾಹಿತ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎಸ್. ಸುಮಂತ್, ಮುಖ್ಯೋಪಾಧ್ಯಾಯ ಕೆ.ಎ. ಜಾನ್ಸನ್, ಸಿಸ್ಟರ್ ಸರಿತಾ, ಸಿಸಿಲಿಯಾ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಸೋಮವಾರಪೇಟೆ: ಸಮೀಪದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.

ವಲಯ ಅರಣ್ಯಾಧಿಕಾರಿ ಚೇತನ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪರಿಸರದ ಮಹತ್ವದ ಬಗ್ಗೆ ಮಕ್ಕಳಿಗೆ ಮನೆ ಹಾಗೂ ಶಾಲೆಯ ಹಂತದಲ್ಲಿಯೇ ಜಾಗೃತಿ ಮೂಡಿಸಬೇಕು. ಪ್ರಕೃತಿ ಉಳಿದರೆ ಮಾತ್ರ ಮಾನವನ ಉಳಿವು ಎಂಬುದನ್ನು ಮನದಟ್ಟು ಮಾಡಿಕೊಡಬೇಕು ಎಂದರು.

ಈ ಸಂದರ್ಭ ಶಾಲೆಯಲ್ಲಿ ಪರಿಸರ ಉಳಿವಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಚಿಸಲಾದ ಪುಷ್ಪಗಿರಿ ಪರಿಸರ ಸಂಘವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋಧರ್, ಮುಖ್ಯೋಪಾಧ್ಯಾಯಿನಿ ಕೆ.ಎಂ. ರೇವತಿ, ಪರಿಸರ ಸಂಘದ ಸಂಚಾಲಕಿ ಎಸ್.ಕೆ. ಭಾರತಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕುಶಾಲನಗರ: ಕುಶಾಲನಗರ ಅರಣ್ಯ ಇಲಾಖೆ ಮತ್ತು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು.

ಸಸಿಗಳನ್ನು ನೆಟ್ಟು ನೀರು ಹಾಕುವ ಮೂಲಕ ಚಾಲನೆ ನೀಡಿದ ಕುಶಾಲನಗರ ನ್ಯಾಯಾಧೀಶೆ ಸರಿತ ಮಾತನಾಡಿ, ಪರಿಸರವನ್ನು ನಾವು ಸಂರಕ್ಷಿಸಿದರೆ ನಮ್ಮನ್ನು ಪರಿಸರ ರಕ್ಷಿಸುತ್ತದೆ. ಪ್ರಕೃತಿಯು ಮುನಿಯದಂತೆ ನೋಡಿಕೊಳ್ಳುವ ಕರ್ತವ್ಯ ನಮ್ಮೆಲ್ಲರದಾಗಿದೆ. ಇದರಲ್ಲಿ ಯುವ ಜನಾಂಗದ ಪಾತ್ರ ಹೆಚ್ಚಾಗಿದೆ ಎಂದರು.

ಅರಣ್ಯ ಇಲಾಖೆಯ ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಮಾತನಾಡಿ, ಬಹುತೇಕ ವ್ಯಾಪ್ತಿಗಳಲ್ಲಿ ಮಾನವನ ಹಸ್ತಕ್ಷೇಪದಿಂದ ಪರಿಸರ ನಾಶವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಕೇವಲ ಗಿಡ ನೆಡುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಅದರ ನಿರ್ವಹಣೆ ಬಹುಮುಖ್ಯವಾಗಿದೆ ಎಂದರು. ಉಪವಲಯ ಅರಣ್ಯ ಅಧಿಕಾರಿಗಳಾದ ಅನಿಲ್ ಡಿಸೋಜ, ದೇವಯ್ಯ, ಕಾಲೇಜಿನ ಸಹಪ್ರಾಧ್ಯಾಪಕರುಗಳಾದ ಡಾ. ಬಿ.ಡಿ. ಹರ್ಷ, ರಮೇಶ್ಚಂದ್ರ, ಉಪನ್ಯಾಸಕರಾದ ಗಿರೀಶ್, ರಾಜೇಶ್, ಮನೋಜ್, ನಟರಾಜ್, ಸಿದ್ದಪ್ಪಾಜಿ, ಸಿದ್ದರಾಮ ಗೌಡ, ವಿದ್ಯಾರ್ಥಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಇದ್ದರು. ಸುಮಾರು ೨೫ಕ್ಕೂ ಅಧಿಕ ಹಣ್ಣು ಹಾಗೂ ಹೂವಿನ ಗಿಡಗಳನ್ನು ನೆಡಲಾಯಿತು.ಶನಿವಾರಸಂತೆ: ಪಟ್ಟಣದ ಬ್ರೆöÊಟ್ ಅಕಾಡೆಮಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಹೇಮಾ ಪರಮೇಶ್ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸಂರಕ್ಷಣೆ ಕುರಿತು ಮಾತನಾಡಿದರು. ನಂತರ ವಿದ್ಯಾರ್ಥಿಗಳು ವಿವಿಧ ಬಗೆಯ ಹಣ್ಣಿನ ಗಿಡ ನೆಟ್ಟು ಸಂಭ್ರಮಿಸಿದರು.

ಮುಖ್ಯಶಿಕ್ಷಕಿ ಚೈತ್ರಾ ಮಾತನಾಡಿ, ವಿಶ್ವ ಪರಿಸರ ದಿನದ ಆಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆಯ ಸೆಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಪ್ರಯುಕ್ತ ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಮಕ್ಕಳಲ್ಲಿ ಜಾಗೃತಿ ಮೂಡಿಸಲು ಮುಖ್ಯಶಿಕ್ಷಕಿ ಸಿಸ್ಟರ್ ಸಂಗೀತ ದೊಡ್ಡಮನಿ ಶಾಲಾ ಆವರಣದಲ್ಲಿ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿ, ಪ್ರಕೃತಿ ತುಂಬಾ ಸುಂದರವಾಗಿದೆ. ನಾವು ಪ್ರಕೃತಿಯನ್ನು ಚೆನ್ನಾಗಿ ನೋಡಿಕೊಂಡರೆ ಅದು ಸಹ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತದೆ. ಪರಿಸರವನ್ನು ಉಳಿಸಿ, ಬೆಳೆಸುವುದರಲ್ಲಿ ಮಾನವನ ಬದುಕು ಹಸನಾಗುತ್ತದೆ ಎಂದರು. ನಂತರ ಮಕ್ಕಳು ‘ಕಾಡು ಬೆಳೆಸಿ; ನಾಡು ಉಳಿಸಿ’, ‘ಹಸಿರೆ ಉಸಿರು’ ಎಂದು ಘೋಷಣೆಗಳನ್ನು ಹೇಳುತ್ತಾ ಶಿಕ್ಷಕರ ಮಾರ್ಗದರ್ಶನದಲ್ಲಿ ಗಿಡಗಳನ್ನು ನೆಟ್ಟರು. ಶಾಲಾ ವ್ಯವಸ್ಥಾಪಕಿ ಸಿಸ್ಟರ್ ಲೂಸಿ ಜೋಸೆಫ್, ಸಿಸ್ಟರ್ ಎಲಿಜಬೆತ್, ಶಿಕ್ಷಕರು, ಕಚೇರಿ ಸಿಬ್ಬಂದಿ ಹಾಜರಿದ್ದರು.ಶನಿವಾರಸಂತೆ: ಪ್ರಕೃತಿ ನಾಶದಿಂದ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಸೋಮವಾರಪೇಟೆ ತಾಲೂಕು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಹೇಳಿದರು.

ಕಾಜೂರು ಸಸ್ಯ ಕ್ಷೇತ್ರದಲ್ಲಿ ಶನಿವಾರಸಂತೆ ವಲಯ ಅರಣ್ಯ ಇಲಾಖೆ, ರೋಟರಿ ಸಂಸ್ಥೆ ಹಾಗೂ ಭಾರತಿ ವಿದ್ಯಾಸಂಸ್ಥೆ ಪದವಿ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಪ್ರಾಣಿ-ಪಕ್ಷಿಗಳ ಅವಸಾನದೊಂದಿಗೆ ಮಾನವನು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾನೆ. ನಮ್ಮ ಆರೋಗ್ಯ ಹಾಗೂ ಉಸಿರನ್ನು ಕಾಪಾಡಿಕೊಳ್ಳಲು ಪರಿಸರವನ್ನು ಕಾಪಾಡಿಕೊಳ್ಳಲೇಬೇಕು. ಮುಂದಿನ ಪೀಳಿಗೆಗೆ ಪರಿಸರ ಬಿಟ್ಟುಕೊಡಲು ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದರು.

ರೋಟರಿ ಸಂಸ್ಥೆ ಅಧ್ಯಕ್ಷ ಎ.ಹೆಚ್. ಚಂದ್ರಕಾAತ್ ಮಾತನಾಡಿ, ೧೯೭೪ ರಿಂದ ಪ್ರತಿ ವರ್ಷ ಜೂನ್ ೫ ರಂದು ವಿಶ್ವ ಪರಿಸರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಪರಿಸರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಬೇಕಾಗಿದೆ. ಇಂದು ವಿಶ್ವವೇ ಭಯದ ವಾತಾವರಣದಲ್ಲಿದೆ. ವಾಣಿಜ್ಯೋದ್ಯ ಮೀಕರಣದಿಂದ ಪರಿಸರ ನಾಶವಾಗುತ್ತಿದೆ ಎಂದರು.

ರೋಟರಿ ಸಂಸ್ಥೆ ಪದಾಧಿಕಾರಿಗಳು, ಭಾರತಿ ವಿದ್ಯಾಸಂಸ್ಥೆ ಪದವಿ ಕಾಲೇಜಿನ ಪ್ರಬಾರ ಪ್ರಾಂಶುಪಾಲ ಮೋಹನ್ ಕುಮಾರ್, ಉಪನ್ಯಾಸಕರು, ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಸಿಬ್ಬಂದಿ, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಸಿಬ್ಬಂದಿ, ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀನಿವಾಸ್, ಗೋವಿಂದ್ ರಾಜ್, ಚಂದ್ರಪ್ಪ, ಅರಣ್ಯ ವೀಕ್ಷಕರು, ರಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು. ಕೊಡ್ಲಿಪೇಟೆ ಉಪ ವಲಯ ಅರಣ್ಯಾಧಿಕಾರಿ ಗೋವಿಂದ್ ರಾಜ್ ಸ್ವಾಗತಿಸಿ, ಶನಿವಾರಸಂತೆ ಉಪ ವಲಯ ಅರಣ್ಯಾಧಿಕಾರಿಗಳಾದ ಚಂದ್ರಪ್ಪ ನಿರೂಪಿಸಿ, ಶ್ರೀನಿವಾಸ್ ವಂದಿಸಿದರು. ಸಭೆಯ ನಂತರ ಪದವಿ ಕಾಲೇಜಿನ ೭೦ ವಿದ್ಯಾರ್ಥಿಗಳನ್ನು ೭ ಗುಂಪುಗಳನ್ನಾಗಿ ಮಾಡಿ, ಕಾಜೂರು ಸಸ್ಯ ಕ್ಷೇತ್ರದಲ್ಲಿ ಬೆಳೆಯಲಾಗಿರುವ ವಿವಿಧ ಬಗೆಯ ಸಸ್ಯಗಳನ್ನು ಮುಖ್ಯವಾಗಿ ಔಷಧಿ ಗುಣಗಳಿರುವ ಸಸ್ಯಗಳ ಬಗ್ಗೆ ವಲಯ ಅರಣ್ಯಾಧಿಕಾರಿ ಕೆ.ವಿ. ಗಾನಶ್ರೀ ಪರಿಚಯಿಸಿ, ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಸಹಕಾರದೊಂದಿಗೆ ಅತಿಥಿ ಗಣ್ಯರು ಅವಸಾನದ ಅಂಚಿನಲ್ಲಿರುವ ಗಂಧದ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ಸೋಮವಾರಪೇಟೆ: ಸಮೀಪದ ಮಸಗೋಡು ಗ್ರಾಮದ ತಣ್ಣೀರುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ದಿನದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸ್ಥಳೀಯ ಕಾಫಿ ಬೆಳೆಗಾರ ಸೋಹಾನ್ ಡಿಸೋಜ ಅವರು ಗಿಡಗಳನ್ನು ಉಚಿತವಾಗಿ ಒದಗಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರ ರಕ್ಷಣೆಯ ಮಹತ್ವದ ಬಗ್ಗೆ ತಿಳಿ ಹೇಳಲಾಯಿತು. ಅಂತೆಯೇ ಶಾಲಾ ಕೈತೋಟವನ್ನು ಉತ್ತಮವಾಗಿ ನಿರ್ವಹಣೆ ಮಾಡುವಂತೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಬಾರ ಮುಖ್ಯ ಶಿಕ್ಷಕಿ ಶಾಂತಮ್ಮ, ಶಿಕ್ಷಕ ಕೆ.ಜಿ. ನಾಗೇಂದ್ರ, ಪ್ರಮುಖರಾದ ನಾಗರಾಜು, ಆನಂದ್, ಅಂಗನವಾಡಿ ಶಿಕ್ಷಕಿ ಕುಸುಮ, ಶಿಕ್ಷಕಿ ವಿಮಲಾ, ಆಂಗ್ಲ ಮಾಧ್ಯಮ ಶಿಕ್ಷಕಿ ಕುಸುಮ ಸೇರಿದಂತೆ ಇತರರು ಉಪಸ್ಥಿತರಿದ್ದರು.ಶನಿವಾರಸಂತೆ ಗ್ರಾಮ ಪಂಚಾಯಿತಿ

ಶನಿವಾರಸAತೆ: ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ವಿವಿಧೆಡೆ ಗಿಡಗಳನ್ನು ನೆಟ್ಟು, ನೀರೆರೆದು ಚಾಲನೆ ನೀಡಿದರು.

ನಂತರ ಮಾತನಾಡಿ, ವಿಶ್ವ ಪರಿಸರದ ದಿನ ಮಾತ್ರ ಗಿಡ ನೆಟ್ಟು ಪರಿಸರ ಪ್ರೇಮ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ. ಪ್ರತಿಯೊಬ್ಬರೂ ಮನೆ ಅಂಗಳದಲ್ಲಾದರೂ ಒಂದಾದರೂ ಗಿಡ ನೆಡುವ ಅಭ್ಯಾಸ ಬೆಳೆಸಿಕೊಂಡರೆ ಪರಿಸರ ದಿನದ ಆಚರಣೆಗೆ ಅರ್ಥ ಬರುತ್ತದೆ ಎಂದರು. ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್ ಅಹಮ್ಮದ್, ಸದಸ್ಯೆ ಸರೋಜ್ ಶೇಖರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಕಾರ್ಯದರ್ಶಿ ದೇವರಾಜ್, ಸಿಬ್ಬಂದಿಗಳು ಹಾಜರಿದ್ದರು.