ಮಡಿಕೇರಿ, ಜೂ. ೧೪: ವಿಶ್ವ ಆರೋಗ್ಯ ಸಂಸ್ಥೆಯೂ ಜೂನ್ ೭ ರಂದು ವಿಶ್ವ ಆಹಾರ ಸುರಕ್ಷತಾ ದಿನವನ್ನಾಗಿ ಘೋಷಿಸಿರುತ್ತದೆ. ಆಯುಕ್ತರು, ಎಫ್.ಎಸ್.ಎಸ್.ಎ. ಅವರ ಸೂಚನೆಯ ಮೇರೆಗೆ, ಕೊಡಗು ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ನಾಪೋಕ್ಲು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.
ವಿಶ್ವ ಆಹಾರ ಸುರಕ್ಷತಾ ದಿನದ ಮಹತ್ವ, ಆಹಾರ ಸುರಕ್ಷತೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಯಿತು ಮತ್ತು ಆಹಾರ ಕಲಬೆರೆಕೆ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಯಿತು ಮತ್ತು ಮಕ್ಕಳಿಗೆ ಪ್ರಬಂಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ವರ್ಷದ ವಿಶ್ವ ಆಹಾರ ಸುರಕ್ಷತಾ ದಿನದ ಘೋಷವಾಕ್ಯ “ಆಹಾರ ಸುರಕ್ಷತೆ-ಅನಿರೀಕ್ಷಿತ ಘಟನೆಗಳಿಗೆ ಸಿದ್ಧರಾಗಿ” ಎಂಬುದರ ಬಗ್ಗೆ ಮತ್ತು ಇದರ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಅಂಕಿತ ಅಧಿಕಾರಿ ಡಾ. ಅನಿಲ್ ಧಾವನ್ ಇ. ಮತ್ತು ನಾಪೋಕ್ಲು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಹಿರಿಯ ಆಹಾರ ಸುರಕ್ಷತಾಧಿಕಾರಿ ಜೆ.ಎನ್. ಮಂಜುನಾಥ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.