ಸುಂಟಿಕೊಪ್ಪ, ಜೂ. ೧೩: ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ. ಶ್ರೀಧರ್ ಅವರು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಪಾಲನೆಯ ಬಗ್ಗೆ ಸುಂಟಿಕೊಪ್ಪ ವ್ಯಾಪ್ತಿಯ ಶಾಲಾ-ಕಾಲೇಜು ಮಕ್ಕಳಲ್ಲಿ ಅರಿವು ಮೂಡಿಸಿದರು.
ಗುರುವಾರದಂದು ಸಂತ ಮೇರಿ ಶಾಲಾ ವಾಹನದಲ್ಲಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತೆರಳಿ ರಸ್ತೆ ಸುರಕ್ಷತಾ ನಿಯಮಗಳು ಮತ್ತು ಅವುಗಳನ್ನು ಪಾಲಿಸುವ ಬಗ್ಗೆ ವೈಯಕ್ತಿಕ ಸುರಕ್ಷತೆಯ ಕಾನೂನು ನಿಯಮಗಳ ಕುರಿತು ಮಕ್ಕಳಲ್ಲಿ ಆರಿವು ಮೂಡಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಹಾಗೂ ಉಪನ್ಯಾಸಕರು ಇದ್ದರು.
ರಾಜ್ಯ ಹೆದ್ದಾರಿಯಲ್ಲಿ ಶಾಲಾ ವಾಹನ ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ರಸ್ತೆ ಸುರಕ್ಷತೆ, ಕಡ್ಡಾಯ ಹೆಲ್ಮೆಟ್ ಧರಿಸಿ ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವುದರಿಂದ ಮಕ್ಕಳ ಜೀವ ರಕ್ಷಣೆಯಾಗಲಿದೆ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.