ಬೆಂಗಳೂರು, ಜೂ. ೧೩: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯಲ್ಲಿನ ನಿಗಮದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಇದೀಗ ಯುಪಿಐ ಮೂಲಕ ಟಿಕೆಟ್ ಖರೀದಿ ಮಾಡುವ ಅವಕಾಶ ಕಲ್ಪಿಸಲು ಮುಂದಾಗಲಾಗಿದೆ. ಆರಂಭಿಕವಾಗಿ, ಪ್ರಾಯೋಗಿಕವಾಗಿ ಇದು ನಾಲ್ಕು ಡಿಪೋಗಳಲ್ಲಿ ಜೂನ್ ೨೫ ರಿಂದ ಜಾರಿಯಾಗಲಿದೆ. ಸದ್ಯಕ್ಕೆ ಪ್ರಾಯೋಗಿಕ ಪ್ರಯತ್ನದ ಹಿನ್ನೆಲೆಯಲ್ಲಿ ಆರಂಭಿಕವಾಗಿ ಬೆಂಗಳೂರಿನ ನಾಲ್ಕು ಡಿಪೋಗಳಲ್ಲಿ ಇದನ್ನು ಜಾರಿಗೆ ತರಲಾಗುತ್ತಿದೆ.
ಇಲೆಕ್ಟಾçನಿಕ್ ಟಿಕೆಟಿಂಗ್ ಯಂತ್ರಗಳ ಮೂಲಕ ಪ್ರಾಯೋಗಿಕ ಯೋಜನೆ ಪ್ರಾರಂಭಿಸಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್ ತಿಳಿಸಿದ್ದಾರೆ.
ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಎಲ್ಲಾ ಬಸ್‌ಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ ೬೪೫ ರೂಪಾಯಿ ಬಾಡಿಗೆಯಂತೆ ೧೦,೨೪೫ ಇಟಿಎಂಗಳನ್ನು ತೆಗೆದುಕೊಂಡಿದೆ.
ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಸ್‌ಗಳಲ್ಲಿ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದ ಚಿಲ್ಲರೆ ಸಮಸ್ಯೆ ಎದುರಾಗುವುದಿಲ್ಲ. ನಿರ್ವಾಹಕರು ಚಿಲ್ಲರೆ ನೀಡಲಿಲ್ಲ ಎಂಬ ದೂರುಗಳು ಕೂಡ ಕಡಿಮೆಯಾಗಲಿದೆ. ಇಟಿಎಂಗಳ ಮೂಲಕ, ಪ್ರಯಾಣಿಕರು ಉPಚಿಥಿ, PhoಟಿePe, Pಚಿಥಿಣm ಮತ್ತು ಅವರ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳ ಮೂಲಕ ಟಿಕೆಟ್ ಖರೀದಿ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಇbix ಅಚಿsh ಐಣಜ ಐದು ವರ್ಷಗಳ ಕಾಲ ಇಟಿಎಂಗಳನ್ನು ಪೂರೈಸಲು ಒಪ್ಪಿಗೆ ನೀಡಿದ್ದು, ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇಟಿಎಂಗಳಿಗೆ ಬ್ಯಾಕೆಂಡ್ ಮತ್ತು ಇಂಟರ್ಫೇಸ್ ಸಾಫ್ಟ್ವೇರ್ ಅನ್ನು ಒದಗಿಸುತ್ತದೆ. ಮಹಾರಾಷ್ಟçದಂತಹ ರಾಜ್ಯಗಳಲ್ಲಿ ಯಂತ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.
ಕಂಡಕ್ಟರ್‌ಗಳು ಆಗಮನ ಮತ್ತು ನಿರ್ಗಮನ ನಿಲ್ದಾಣಗಳನ್ನು ಆಯ್ಕೆ ಮಾಡಬೇಕು. ನಂತರ ಪ್ರಯಾಣಿಕ ಸಂಖ್ಯೆ, ಪಾವತಿ ವಿಧಾನವನ್ನು ಆರಿಸಬೇಕು. ಬಳಿಕ ದರ ಸ್ವಯಂಚಾಲಿತವಾಗಿ ಲೆಕ್ಕ ಹಾಕಲಾಗುತ್ತದೆ. ಪ್ರಯಾಣಿಕರು ಹಣ ಪಾವತಿಸಿದ ನಂತರ ಟಿಕೆಟ್ ಪಡೆಯಬಹದು.
ಯಂತ್ರಗಳನ್ನು ಲಾಕ್ ಮಾಡಬಹುದು ಮತ್ತು ಅವುಗಳನ್ನು ಕದ್ದರೆ, ಅವುಗಳನ್ನು ಸ್ಮಾರ್ಟ್ಫೋನ್‌ನಂತೆ ಟ್ರಾö್ಯಕ್ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.
ಹ್ಯಾಂಡ್‌ಹೆಲ್ಡ್ ಇಟಿಎಂಯಲ್ಲಿ ಖಈIಆ ಸಾಧನವಿರಲಿದ್ದು, ಇ-ಪಾಸ್‌ಗಳಂತಹ ಸ್ಮಾರ್ಟ್ ಕಾರ್ಡ್ಗಳನ್ನು ಸ್ಕಾö್ಯನ್ ಮಾಡಲು ಮತ್ತು ಮೌಲ್ಯೀಕರಿಸಲು ಕ್ಯಾಮರಾ ಕೂಡ ಇದರಲ್ಲಿ ಇರುತ್ತದೆ. ಒಂದು ವೇಳೆ ಸರ್ಕಾರವು ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ಗಳನ್ನು ನೀಡಿದರೆ, ಅದನ್ನು ಅಳವಡಿಸಿಕೊಳ್ಳಲು ಈ ಯಂತ್ರಗಳಲ್ಲಿ ಅವಕಾಶ ಇರುತ್ತದೆ.
ಆನ್‌ಲೈನ್ ಟಿಕೆಟ್ ಕಾಯ್ದಿರಿಸುವಿಕೆ ವ್ಯವಸ್ಥೆಗಳನ್ನು ಟ್ರಾö್ಯಕಿಂಗ್ ಮಾಡುವುದು ಮತ್ತು ಖಾಲಿ ಇರುವ ಆಸನಗಳ ಆಧಾರದ ಮೇಲೆ ಟಿಕೆಟ್‌ಗಳನ್ನು ನೀಡುವುದು. ಸ್ಥಳ ಟ್ರಾö್ಯಕಿಂಗ್ ಮತ್ತು ಇತರ ಸುಧಾರಿತ ವೈಶಿಷ್ಟö್ಯಗಳಂತಹ ಹಲವು ವೈಶಿಷ್ಟö್ಯಗಳಿವೆ. ಆದರೆ, ಅವುಗಳನ್ನು ತಕ್ಷಣವೇ ಸೇರಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತದಲ್ಲಿ ಎಲ್ಲವನ್ನೂ ಅಳವಡಿಸಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.