ಸೋಮವಾರಪೇಟೆ, ಜೂ. ೧೪: ಪಟ್ಟಣದ ಬಸವೇಶ್ವರ ರಸ್ತೆಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ರೂ. ೩.೫೦ ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟ ಸ್ಥಳೀಯರಾದ ಶಾರದ ಮತ್ತು ಎ.ಪಿ. ಶಂಕರಪ್ಪ ಅವರುಗಳನ್ನು ಲಯನ್ಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಇಲ್ಲಿನ ಒಕ್ಕಲಿಗರ ಸಮುದಾಯ ಭವನದ ಶ್ರೀಗಂಧ ಸಭಾಂಗಣದಲ್ಲಿ ನಡೆದ ಲಯನ್ಸ್ ಕಾರ್ಯಕ್ರಮದಲ್ಲಿ ಈರ್ವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಲಯನ್ಸ್ ಅಧ್ಯಕ್ಷ ಎ.ಎಸ್. ಮಹೇಶ್, ಪದಾಧಿಕಾರಿ ಗಳಾದ ಕೆ.ಡಿ. ವೀರಪ್ಪ, ರೋಹಿತ್, ಕೆ.ಎಂ. ಜಗದೀಶ್, ಲಿಯೋ ಜಿಲ್ಲಾಧ್ಯಕ್ಷೆ ರಂಜಿತಾ ಶೆಟ್ಟಿ, ಅಧ್ಯಕ್ಷೆ ಪ್ರತೀಕ್ಷ ಇದ್ದರು.